For Quick Alerts
ALLOW NOTIFICATIONS  
For Daily Alerts
 

Champions Trophy: ಏಕದಿನ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ವಿರಾಟ್ ಕೊಹ್ಲಿ

ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿದರೆ ದಾಖಲೆ ಫಿಕ್ಸ್. ಕೊಹ್ಲಿ ಈಗಾಗಲೇ ಅನೇಕ ಸಾಧನೆಗಳನ್ನು ಸಾಧಿಸುವ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ಇದೀಗ ಭಾರತ ಮತ್ತು ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ.

ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 14000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಈ ಮೈಲಿಗಲ್ಲು ತಲುಪಲು 15 ರನ್‌ಗಳು ಬೇಕಾಗಿದ್ದವು. ಪಾಕಿಸ್ತಾನ ವಿರುದ್ಧ 17 ರನ್ ಗಳಿಸುತ್ತಿದ್ದಂತೆ ಏಕದಿನ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ.

Virat Kohli becomes fastest to 14000 runs in ODI cricket

ವಿರಾಟ್ ಕೊಹ್ಲಿ ಅವರಿಗಿಂತ ಮೊದಲು ಸಚಿನ್ ತೆಂಡೂಲ್ಕರ್ ಈ ಐತಿಹಾಸಿಕ ದಾಖಲೆಯ ಕಿರೀಟವನ್ನು ಧರಿಸಿದ್ದರು. ಆದರೆ ಈಗ ಈ ಸಾಧನೆಯು ವಿರಾಟ್ ಕೊಹ್ಲಿ ಹೆಸರಿನಲ್ಲಿ ದಾಖಲಾಗಿದೆ. ವಿರಾಟ್ ತಮ್ಮ 287ನೇ ಏಕದಿನ ಇನ್ನಿಂಗ್ಸ್‌ನಲ್ಲಿ ಈ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಸಚಿನ್ ತೆಂಡೂಲ್ಕರ್ 63 ಇನ್ನಿಂಗ್ಸ್‌ಗಳಿಗಿಂತ ಮೊದಲು ವಿರಾಟ್ ಏಕದಿನ ಕ್ರಿಕೆಟ್‌ನಲ್ಲಿ 14000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ 14000 ರನ್‌ಗಳ ವಿಶ್ವ ದಾಖಲೆ ಸೃಷ್ಟಿಸಲು ಕೇವಲ 15 ರನ್‌ಗಳು ಬೇಕಾಗಿದ್ದವು. ಹ್ಯಾರಿಸ್ ರೌಫ್ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಕೊಹ್ಲಿ ಈ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಸಚಿನ್ ತೆಂಡೂಲ್ಕರ್ 350 ಇನ್ನಿಂಗ್ಸ್‌ಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 14000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಶ್ರೀಲಂಕಾದ ದಂತಕಥೆ ಕುಮಾರ್ ಸಂಗಕ್ಕಾರ 378 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಇಬ್ಬರು ದಂತಕಥೆಗಳ ನಂತರ, ವಿರಾಟ್ ಏಕದಿನ ಕ್ರಿಕೆಟ್‌ನಲ್ಲಿ 14000 ರನ್‌ಗಳ ಗಡಿ ಮುಟ್ಟಿದ ವಿಶ್ವದ ಮೂರನೇ ಬ್ಯಾಟರ್ ಆಗಿದ್ದಾರೆ.

ವಿರಾಟ್ ಕೊಹ್ಲಿ ಈಗ ಏಕದಿನ ಕ್ರಿಕೆಟ್‌ನಲ್ಲಿ 8000, 9000, 10000, 11000, 12000, 13000 ಮತ್ತು 14000 ರನ್‌ಗಳನ್ನು ವೇಗವಾಗಿ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇದಲ್ಲದೆ, ಏಕದಿನ ಕ್ರಿಕೆಟ್‌ನಲ್ಲಿಯೂ
50 ಶತಕಗಳನ್ನು ಗಳಿಸಿದ ಏಕೈಕ ಬ್ಯಾಟರ್ ಕೂಡ ಕೊಹ್ಲಿ. ವಾಂಖೆಡೆಯಲ್ಲಿ ನ್ಯೂಜಿಲೆಂಡ್ ವಿರುದ್ಧದ 2023 ರ ಏಕದಿನ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಅವರು ಅತಿ ಹೆಚ್ಚು ಶತಕ ಗಳಿಸಿದ ಆಟಗಾರರಾದರು. ಈ ಮೂಲಕ ಸಚಿನ್ (49 ಶತಕಗಳು) ಅವರನ್ನು ಹಿಂದಿಕ್ಕಿದರು.

ಈ ಪಂದ್ಯದ ಆರಂಭದಲ್ಲಿ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಪರ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ 25 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು. ಕೊಹ್ಲಿ ತಮ್ಮ 157ನೇ ಕ್ಯಾಚ್ ಹಿಡಿದ ತಕ್ಷಣ ಅಜರುದ್ದೀನ್ ಅವರನ್ನು ಹಿಂದಿಕ್ಕಿದರು. ವಿರಾಟ್ ಕೊಹ್ಲಿ ಈಗ ಒಟ್ಟು 158 ಕ್ಯಾಚ್‌ಗಳನ್ನು ಹೊಂದಿದ್ದಾರೆ. ಅವರ ನಂತರ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರರಾದ ಮೊಹಮ್ಮದ್ ಅಜರುದ್ದೀನ್ (156), ಸಚಿನ್ ತೆಂಡೂಲ್ಕರ್ (140), ರಾಹುಲ್ ದ್ರಾವಿಡ್ (124) ಮತ್ತು ಸುರೇಶ್ ರೈನಾ (102) ಇದ್ದಾರೆ.

Story first published: Sunday, February 23, 2025, 20:45 [IST]
Other articles published on Feb 23, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+