ಐಪಿಎಲ್‌ನಲ್ಲಿ 6000 ರನ್ ಬಾರಿಸಿದ ಮೊದಲ ಆಟಗಾರ ಎನಿಸಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ದೊಡ್ಡ ಮೈಲಿಗಲ್ಲೊಂದನ್ನು ನೆಟ್ಟಿದ್ದಾರೆ. ಐಪಿಎಲ್‌ನಲ್ಲಿ 6000 ರನ್‌ಗಳಿಸಿದ ಪ್ರಥಮ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಈ ಸಾಧನೆಯನ್ನು ಕೊಹ್ಲಿ ಪೂರ್ಣಗೊಳಿಸಿದ್ದಾರೆ.
ವಾಂಖೆಡೆ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧ ಶತಕವನ್ನು ಬಾರಿಸಿದ ಬಳಿಕ ಈ ಸಾಧನೆಯನ್ನು ಪೂರ್ಣಗೊಳಿಸಿದರು. ಈ ಪಂದ್ಯದ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ 5949 ರನ್‌ಗಳಿಸಿದ್ದರು. ಹೀಗಾಗಿ 51 ರನ್ ಬಾರಿಸಿದ ವೇಳೆ ಈ ಸಾಧನೆ ಮಾಡಿದರು.
2008ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲ ಬಾರಿಗೆ ಆಡಿದ ವಿರಾಟ್ ಕೊಹ್ಲಿ 13 ವರ್ಷಗಳನ್ನು ಆರ್‌ಸಿಬಿಯಲ್ಲಿ ಪೂರ್ಣಗೊಳಿಸಿದ್ದಾರೆ. ಈ ಸುದೀರ್ಘ ಅವಧಿಯಲ್ಲಿ ಒಂದೇ ತಂಡದ ಪರವಾಗಿ ಆಡಿರುವ ಏಕೈಕ ಆಟಗಾರ ಎಂಬ ಹೆಗ್ಗಳಿಕೆಯನ್ನು ಕೂಡ ವಿರಾಟ್ ಕೊಹ್ಲಿ ಹೊಂದಿದ್ದಾರೆ.
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಜೋಡಿ 178 ರನ್‌ಗಳ ಗುರಿಯನ್ನು ವಿಕೆಟ್ ಕಳೆದುಕೊಳ್ಳದೆ ತಲುಪುವಲ್ಲಿ ಯಶಸ್ವಿಯಾಯಿತು. ಈ ರನ್ ಚೇಸಿಂಗ್ ವೇಳೆ ಯುವ ಆಟಗಾರ ಪಡಿಕ್ಕಲ್ ಶತಕ ಸಿಡಿಸಿದರೆ ವಿರಾಟ್ ಕೊಹ್ಲಿ 72 ರನ್‌ಗಳ ಕೊಡುಗೆಯನ್ನು ನೀಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications