For Quick Alerts
ALLOW NOTIFICATIONS  
For Daily Alerts
 

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ ಭಾರತದ 2ನೇ, ವಿಶ್ವದ 6ನೇ ಬ್ಯಾಟರ್ ವಿರಾಟ್ ಕೊಹ್ಲಿ!

ಭಾನುವಾರ, ನವೆಂಬರ್ 5ರಂದು ಕ್ರಿಕೆಟ್ ಕಾಶಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 49ನೇ ಏಕದಿನ ಶತಕ ಬಾರಿಸುವ ಮೂಲಕ ಐತಿಹಾಸಿಕ ದಾಖಲೆಗೆ ಕಾರಣರಾದರು.

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (49) ಅವರನ್ನು ವಿರಾಟ್ ಕೊಹ್ಲಿ ಸರಿಗಟ್ಟಿ ಇತಿಹಾಸ ಬರೆದರು. ವಿಶ್ವದಲ್ಲೇ ಈ ಇಬ್ಬರು ಆಟಗಾರರು ಅತಿ ಹೆಚ್ಚು ಏಕದಿನ ಶತಕಗಳನ್ನು ಗಳಿಸಿದವರಾಗಿದ್ದಾರೆ.

IND vs SA: Virat Kohli Becomes Indias 2nd, Worlds 6th Batsman to Score 3000 Runs Against South Africa


ಇದೇ ವೇಳೆ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಲೆಜೆಂಡ್ ಸಚಿನ್ ತೆಂಡೂಲ್ಕರ್ ನಂತರ ದಕ್ಷಿಣ ಆಫ್ರಿಕಾ ವಿರುದ್ಧ 3000 ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತದ ಎರಡನೇ ಆಟಗಾರರೆನಿಸಿದರು.

ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಭಾರತ ತಂಡದ 2023ರ ವಿಶ್ವಕಪ್ ಪಂದ್ಯದಲ್ಲಿ ತಮ್ಮ ಇನ್ನಿಂಗ್ಸ್‌ನ 43ನೇ ರನ್ ಗಳಿಸಿದಾಗ ಈ ಮೈಲಿಗಲ್ಲನ್ನು ಪೂರ್ಣಗೊಳಿಸಿದರು.

ಒಟ್ಟಾರೆ ವಿಶ್ವದಲ್ಲಿ ರಿಕಿ ಪಾಂಟಿಂಗ್, ಸಚಿನ್ ತೆಂಡೂಲ್ಕರ್, ಕುಮಾರ್ ಸಂಗಕ್ಕಾರ, ಶಿವನಾರಾಯಣ್ ಚಂದ್ರಪಾಲ್ ಮತ್ತು ಡೇವಿಡ್ ವಾರ್ನರ್ ನಂತರ ವಿರಾಟ್ ಕೊಹ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಎಲ್ಲಾ ಸ್ವರೂಪಗಳಲ್ಲಿ 3000 ರನ್ ಗಳಿಸಿದ ವಿಶ್ವದ ಆರನೇ ಬ್ಯಾಟರ್ ಎನಿಸಿಕೊಂಡರು.

IND vs SA: Virat Kohli Becomes Indias 2nd, Worlds 6th Batsman to Score 3000 Runs Against South Africa

ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಅವರು ಉತ್ತಮ ಆರಂಭ ಒದಗಿಸಿಕೊಟ್ಟರೂ, 11 ಓವರ್‌ಗಳ ಒಳಗೆ ತ್ವರಿತವಾಗಿ ಇಬ್ಬರ ವಿಕೆಟ್ ಕಳೆದಕೊಂಡಿದ್ದರಿಂದ ಭಾರತ ಹಿನ್ನಡೆ ಅನುಭವಿಸಿತು.

ಈಡನ್ ಗಾರ್ಡನ್‌ನಲ್ಲಿ ನಿಧಾನಗತಿಯ ಪಿಚ್‌ನಲ್ಲಿ ವಿರಾಟ್ ಕೊಹ್ಲಿ ಅವರು ಶ್ರೇಯಸ್ ಅಯ್ಯರ್ ಜೊತೆಗೂಡಿ 134 ರನ್‌ಗಳ ಜೊತೆಯಾಟದ ಮೂಲಕ ಭಾರತವನ್ನು ಸಂಕಷ್ಟದಿಂದ ಪಾರು ಮಾಡಿದರು.

ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 121 ಎಸೆತಗಳಲ್ಲಿ 10 ಬೌಂಡರಿಗಳ ಸಮೇತ ಅಜೇಯ 101 ರನ್ ಗಳಿಸಿದರು.

ವಿರಾಟ್ ಕೊಹ್ಲಿ ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ವಾಸ್ತವವಾಗಿ, ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಸ್ಕೋರ್ 2019ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧವೇ ಬಂದಿತ್ತು.

ಪುಣೆಯಲ್ಲಿ ಆಡುವಾಗ ವಿರಾಟ್ ಕೊಹ್ಲಿ ಅಜೇಯ 254 ರನ್ ಗಳಿಸಿದರು. ಇದು ಫಾಫ್ ಡು ಪ್ಲೆಸಿಸ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವನ್ನು ಇನ್ನಿಂಗ್ಸ್ ಮತ್ತು 137 ರನ್‌ಗಳಿಂದ ಸೋಲಿಸಲು ಭಾರತಕ್ಕೆ ನೆರವಾಗಿತ್ತು.

ವಿರಾಟ್ ಕೊಹ್ಲಿ ಮತ್ತೊಂದು ಗಣ್ಯ ಸಾಧನೆಯಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಸರಿಗಟ್ಟಿದ್ದಾರೆ. 32ನೇ ಓವರ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್‌ನಲ್ಲಿ 55 ರನ್ ಗಳಿಸಿದಾಗ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ತವರಿನಲ್ಲಿ 6000 ರನ್ ಪೂರೈಸಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮಾತ್ರ 164 ಪಂದ್ಯಗಳಿಂದ ತವರಿನಲ್ಲಿ 6976 ರನ್ ಬಾರಿಸಿ ವಿರಾಟ್ ಕೊಹ್ಲಿಗಿಂತ ಮುಂದಿದ್ದಾರೆ.

Story first published: Sunday, November 5, 2023, 19:24 [IST]
Other articles published on Nov 5, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+