For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಇಂಗ್ಲೆಂಡ್‌ ನೆಲದಲ್ಲಿ ಬಲು ವಿಶಿಷ್ಠ ದಾಖಲೆ ಬರೆದ ವಿರಾಟ್ ಕೊಹ್ಲಿ

Virat Kohli becomes the first Asian captain to win 3 Tests against England in England

ಲಂಡನ್‌: ಲಂಡನ್‌ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ಸೋಮವಾರ (ಸೆಪ್ಟೆಂಬರ್‌ 6) ಮುಕ್ತಾಯಗೊಂಡ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಭಾರತ 157 ರನ್‌ಗಳ ಭರ್ಜರಿ ಜಯ ಗಳಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ 2-1ರ ಮುನ್ನಡೆ ಸಾಧಿಸಿದೆ. ಅಷ್ಟೇ ಅಲ್ಲ, ನಾಯಕ ವಿರಾಟ್ ಕೊಹ್ಲಿ ವಿಶಿಷ್ಠ ದಾಖಲೆಗೂ ಕಾರಣರಾಗಿದ್ದಾರೆ.

ಟೆಸ್ಟ್‌ ಸರಣಿಯ ಆರಂಭಿಕ ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್‌ಗಾಗಿ ಟೀಕೆಗೀಡಾಗಿದ್ದ ವಿರಾಟ್ ಕೊಹ್ಲಿ ಇಂಗ್ಲೆಂಡ್‌ ನೆಲದಲ್ಲಿ ಅಪರೂಪದ ದಾಖಲೆಗಾಗಿ ಗುರುತಿಸಿಕೊಂಡಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ ಪಂದ್ಯಗಳಲ್ಲಿ 3 ಟೆಸ್ಟ್‌ ಪಂದ್ಯಗಳನ್ನು ಗೆದ್ದ ಏಷ್ಯಾದ ಚೊಚ್ಚಲ ನಾಯಕನಾಗಿ ಕಿಂಗ್ ಕೊಹ್ಲಿ ದಾಖಲೆ ಪುಟ ಸೇರಿದ್ದಾರೆ.

ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್‌ ಪಂದ್ಯಗಳಲ್ಲಿ ನಾಯಕರಾಗಿ ಗೆದ್ದ ದಾಖಲೆಗಳು ಹೆಚ್ಚಿಲ್ಲ. ಅದರಲ್ಲೂ ಕನಿಷ್ಠ ಮೂರು ಟೆಸ್ಟ್‌ ಪಂದ್ಯಗಳನ್ನೂ ಗೆದ್ದ ದಾಖಲೆ ಬೇರೆ ಯಾರೂ ನಿರ್ಮಿಸಿಲ್ಲ. ಆದರೆ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಕೆನ್ನಿಂಗ್ಟನ್ ಓವಲ್‌ನಲ್ಲಿನ ಗೆಲುವಿನೊಂದಿಗೆ ಕೊಹ್ಲಿ ಈ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ.

ಗೆಲುವು ನಮ್ ಕಡೆ ಇದೆ ಅಂತ ಗೊತ್ತಾಗಿದ್ದು ಈ ಆಟಗಾರ ಬಂದ್ಮೇಲೆ ಎಂದ ವಿರಾಟ್ | Oneindia Kannada

ಭಾರತ ಮತ್ತು ಇಂಗ್ಲೆಂಡ್ ಸಂಕ್ಷಿಪ್ತ ಸ್ಕೋರ್‌
ಭಾರತ ಮೊದಲ ಇನ್ನಿಂಗ್ಸ್: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ, ಆರಂಭಿಕ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 11, ಕೆಎಲ್ ರಾಹುಲ್ 17, ಚೇತೇಶ್ವರ ಪೂಜಾರ 4, ವಿರಾಟ್ ಕೊಹ್ಲಿ 50, ಅಜಿಂಕ್ಯ ರಹಾನೆ 14, ರಿಷಭ್ ಪಂತ್ 9, ರವೀಂದ್ರ ಜಡೇಜಾ 10, ಶಾರ್ದೂಲ್ ಠಾಕೂರ್ 57, ಉಮೇಶ್ ಯಾದವ್ 10, ಮೊಹಮ್ಮದ್ ಸಿರಾಜ್ 1 ರನ್‌ನೊಂದಿಗೆ 61.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 191 ರನ್ ಗಳಿಸಿತ್ತು.

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್: ಮೊದಲ ಇನ್ನಿಂಗ್ಸ್‌ಗೆ ಇಳಿದ ಇಂಗ್ಲೆಂಡ್, ರೋರಿ ಬರ್ನ್ಸ್ 5, ಹಸೀಬ್ ಹಮೀದ್ 0, ಡೇವಿಡ್ ಮಲನ್ 31, ಜೋ ರೂಟ್ 21, ಆಲಿ ಪೋಪ್ 81, ಜಾನಿ ಬೈರ್‌ಸ್ಟೋ 37, ಮೊಯೀನ್ ಅಲಿ 35, ಕ್ರಿಸ್ ವೋಕ್ಸ್ 50, ಕ್ರೇಗ್ ಓವರ್‌ಟನ್ 1, ಆಲಿ ರಾಬಿನ್ಸನ್ 5, ಜೇಮ್ಸ್ ಆಂಡರ್ಸನ್ 1 ರನ್‌ನೊಂದಿಗೆ 84 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 290 ರನ್ ಗಳಿಸಿ 99 ರನ್ ಮುನ್ನಡೆ ಸಾಧಿಸಿತ್ತು.

ಭಾರತದ ದ್ವಿತೀಯ ಇನ್ನಿಂಗ್ಸ್: ಭಾರತ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಉತ್ತಮ ಬ್ಯಾಟಿಂಗ್‌ ನೀಡಿತು. ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 127, ಕೆಎಲ್ ರಾಹುಲ್ 46, ಚೇತೇಶ್ವರ್ ಪೂಜಾರ 61, ವಿರಾಟ್ ಕೊಹ್ಲಿ 44, ರವೀಂದ್ರ ಜಡೇಜಾ 17, ರಿಷಭ್ ಪಂತ್ 50, ಶಾರ್ದೂಲ್ ಠಾಕೂರ್ 60, ಉಮೇಶ್ ಯಾದವ್ 25 ರನ್‌ನೊಂದಿಗೆ 148.2 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 466 ರನ್ ಬಾರಿಸಿ ಇಂಗ್ಲೆಂಡ್ ಗೆಲುವಿಗೆ 368 ರನ್ ಗುರಿ ನೀಡಲಾಗಿತ್ತು.

ಇಂಗ್ಲೆಂಡ್ ದ್ವಿತೀಯ ಇನ್ನಿಂಗ್ಸ್‌: ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್, ರೋರಿ ಬರ್ನ್ಸ್ 50, ಹಸೀಬ್ ಹಮೀದ್ 63, ಡೇವಿಡ್ ಮಲನ್ 5, ಜೋ ರೂಟ್ 36, ಒಲ್ಲಿ ಪೋಪ್ 2, ಜಾನಿ ಬೈರ್‌ಸ್ಟೋ 0, ಕ್ರಿಸ್ ವೋಕ್ಸ್ 18, ಕ್ರೇಗ್ ಓವರ್‌ಟನ್ 10, ಒಲ್ಲಿ ರಾಬಿನ್ಸನ್ 10, ಜೇಮ್ಸ್ ಆ್ಯಂಡರ್ಸನ್ 2 ರನ್‌ನೊಂದಿಗೆ 92.2ನೇ ಓವರ್‌ಗೆ ಎಲ್ಲಾ ವಿಕೆಟ್ ಕಳೆದು 210 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

Story first published: Tuesday, September 7, 2021, 10:03 [IST]
Other articles published on Sep 7, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+