ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ

ಅಹ್ಮದಾಬಾದ್: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 3,000 ರನ್ ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಆಗಿ ರನ್ ಮಷಿನ್ ಕೊಹ್ಲಿ ಗುರುತಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟಿ20ಐನಲ್ಲಿ ಕೊಹ್ಲಿ ಈ ಮೈಲಿಗಲ್ಲಿ ಸ್ಥಾಪಿಸಿದ್ದಾರೆ.
ಭಾನುವಾರ (ಮಾರ್ಚ್ 14) ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಇಂಗ್ಲೆಂಡ್ ದ್ವಿತೀಯ ಟಿ20ಐನಲ್ಲಿ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ ಅಜೇಯ 73 ರನ್ ಬಾರಿಸಿದರು. ಹೀಗಾಗಿ ಟಿ20ಐನಲ್ಲಿ 3000 ರನ್ ಬಾರಿಸಿದ ಮೊದಲ ಕ್ರಿಕೆಟಿಗನಾಗಿ ಕೊಹ್ಲಿ ದಾಖಲೆ ಪಟ್ಟಿ ಸೇರಿದ್ದಾರೆ.
ಭಾನುವಾರದ ಪಂದ್ಯದೊಂದಿಗೆ ಟಿ20ಐನಲ್ಲಿ 86 ಪಂದ್ಯಗಳನ್ನಾಡಿರುವ ಕೊಹ್ಲಿ 50.86 ಸರಾಸರಿಯಲ್ಲಿ 3001 ಒಟ್ಟು ರನ್ ಗಳಿಸಿದ್ದಾರೆ. ಇದರಲ್ಲಿ 26 ಅರ್ಧ ಶತಕಗಳು ಸೇರಿವೆ. ಟಿ20ಐನಲ್ಲಿ ಕೊಹ್ಲಿ ಒಟ್ಟು 270 ಫೋರ್ಸ್, 84 ಸಿಕ್ಸರ್‌ಗಳ ದಾಖಲೆ ಹೊಂದಿದ್ದಾರೆ.
ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಇಂಗ್ಲೆಂಡ್, ಜೇಸನ್ ರಾಯ್ 46 ಗಮನಾರ್ಹ ರನ್ ಸೇರ್ಪಡೆಯೊಂದಿಗೆ 20 ಓವರ್‌ಗೆ 6 ವಿಕೆಟ್ ಕಳೆದು 164 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಭಾರತ, ನಾಯಕ ವಿರಾಟ್ ಕೊಹ್ಲಿ 73, ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 56 ರನ್‌ನೊಂದಿಗೆ 17.5 ಓವರ್‌ಗಳಲ್ಲಿ 3 ವಿಕೆಟ್ ಕಳೆದು 166 ರನ್ ಗಳಿಸಿ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications