ವಿರಾಟ್ ಕೊಹ್ಲಿ ಸದ್ಯ ವಿಶ್ವದ ಬೆಸ್ಟ್ ಒಡಿಐ ಬ್ಯಾಟ್ಸ್‌ಮನ್: ಸ್ಟೀವ್ ಸ್ಮಿತ್

ಮ್ಯಾನ್ಚೆಸ್ಟರ್: ಆಸ್ಟ್ರೇಲಿಯಾದ ರನ್ ಮಷಿನ್ ಸ್ಟೀವ್ ಸ್ಮಿತ್, ಭಾರತದ ರನ್ ಸರದಾರ ವಿರಾಟ್ ಕೊಹ್ಲಿಯನ್ನು ಶ್ಲಾಘಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ಸದ್ಯ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂದು ಸ್ಮಿತ್ ಹೇಳಿದ್ದಾರೆ. ಕೊಹ್ಲಿ-ಸ್ಮಿತ್ ಇಬ್ಬರೂ ಡಿಸೆಂಬರ್ 3ರಿಂದ ಆರಂಭವಾಗಲಿರುವ ಭಾರತದ vs ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಎದುರೆದುರಾಗಲಿದ್ದಾರೆ.
ಟೆಸ್ಟ್ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ಮತ್ತು ಸ್ಟೀವ್ ಸ್ಮಿತ್ ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮುಖಾಮುಖಿಯಾಗಲಿದ್ದಾರೆ. ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಾಯಕನಾಗಿ ಮೈದಾನಕ್ಕಿಳಿದರೆ, ಸ್ಮಿತ್ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ಕ್ಯಾಪ್ಟನ್ ಆಗಿ ಆಡಲಿದ್ದಾರೆ.
ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಸ್ಮಿತ್ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಮಾನಿಗಳು ಮಾತನಾಡಿದ್ದರು. ಆ ವೇಳೆ ಸ್ಮಿತ್ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಆಗ 31ರ ಹರೆಯದ ಸ್ಮಿತ್ ಅವರಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್ ಯಾರೆಂದು ಪ್ರಶ್ನಿಸಲಾಯಿತು.
ಇದಕ್ಕೆ ಉತ್ತರಿಸಿದ ಸ್ಮಿತ್, 'ಸದ್ಯ ಓಡಿಐನಲ್ಲಿ ಬೆಸ್ಟ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ,' ಎಂದಿದ್ದಾರೆ. ಈಗ ಏಕದಿನ ಕ್ರಿಕೆಟ್ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿರುವ ಕೊಹ್ಲಿ ಒಡಿಐನಲ್ಲಿ ಹೆಚ್ಚು ರನ್ ಗಳಿಸಿರುವ ಸಕ್ರಿಯ ಆಟಗಾರರಲ್ಲೂ ಮುಂಚೂಣಿಯಲ್ಲಿದ್ದಾರೆ. ಕೊಹ್ಲಿ ಖಾತೆಯಲ್ಲಿ 11867 ಒಡಿಐ ರನ್‌ಗಳಿವೆ. ಇತ್ತ ಸ್ಮಿತ್ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications