Virat Kohli Retirement: ಭಾರತ ಟೆಸ್ಟ್ ಕ್ರಿಕೆಟ್‌ನ ಯುಗಾಂತ್ಯ; ಕ್ರಿಕೆಟ್ ಆಟಗಾರರು ಹೇಳಿದ್ದೇನು?
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಭಾರತ ಕ್ರಿಕೆಟ್ ರಂಗದ ಎರಡು ನಕ್ಷತ್ರಗಳು ಒಂದೇ ವಾರದಲ್ಲಿ ಕಳಚಿಬಿದ್ದಿವೆ. ರೋಹಿತ್ ಶರ್ಮಾ ಮೊದಲು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ರೆ, ಈಗ ವಿರಾಟ್ ಕೊಹ್ಲಿ ಸಹ ಟೆಸ್ಟ್ ಕ್ರಿಕೆಟ್‌ನಿಂದ ದೂರ ಸರಿದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಅವರನ್ನು ಬಿಳಿ ಜೆರ್ಸಿಯಲ್ಲಿ ನೋಡುವುದು ಕಷ್ಟ. ತಮ್ಮ ಕ್ಲಾಸಿಕ್ ಬ್ಯಾಟಿಂಗ್ ಶೈಲಿಯಿಂದಲೇ ಅಪಾರ ಅಭಿಮಾನಿಗಳ ಮನ ಗೆದ್ದಿದ್ದ ವಿರಾಟ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವುದು ಅಭಿಮಾನಿಗಳಿಗೆ ತೀವ್ರ ನಿರಾಸೆ ತಂದಿದೆ.
ಬೌನ್ಸಿ ಪಿಚ್‌ಗಳಲ್ಲಿ ತಮ್ಮ ಕಲಾತ್ಮಕ ಬ್ಯಾಟಿಂಗ್ ಮೂಲಕ ಎದುರಾಳಿಗಳನ್ನು ಕಾಡುತ್ತಿದ್ದ ವಿರಾಟ್ ಕೊಹ್ಲಿ ಆಟ ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಕಾಣುವುದು ಅಸಾಧ್ಯ. ಇವರು ಈಗಾಗಲೇ ಟಿ20 ಕ್ರಿಕೆಟ್‌ಗೂ ವಿಶ್ವ ಕಪ್ ಗೆದ್ದ ಬಳಿಕ ವಿದಾಯ ಹೇಳಿದ್ದರು. ಈಗ ಟೆಸ್ಟ್ ಕ್ರಿಕೆಟ್‌ಗೂ ವಿದಾಯ ಹೇಳಿದ್ದು, ವಿರಾಟ್ ಕೊಹ್ಲಿ ಇನ್ನು ಭಾರತದ ಪರ ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ಭಾರತದ ಪರ ಅಂಗಳಕ್ಕೆ ಇಳಿಯಲಿದ್ದಾರೆ.

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ನಿವೃತ್ತಿಯಿಂದಾಗಿ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಂತೆ ಆಗಿದೆ. ಇವರ ನಿವೃತ್ತಿಯ ಬಗ್ಗೆ ಹಲವು ಕ್ರಿಕೆಟ್ ಆಟಗಾರರು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications