ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಟೀಮ್ ಇಂಡಿಯಾದ ರನ್ ಮಷೀನ್, ಎರಡನೇ ಟೆಸ್ಟ್‌ನಲ್ಲಿ ಅಮೋಘ ದಾಖಲೆ ಬರೆದಿದ್ದಾರೆ. ಈ ಮೂಲಕ ತಮ್ಮ ಗುರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ಬ್ಯಾಟರ್ 600ಕ್ಕಿಂತಲೂ ಕಡಿಮೆ ಇನಿಂಗ್ಸ್‌ನಲ್ಲಿ 27 ಸಾವಿರ ರನ್ ಗಡಿ ದಾಟಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಅಲ್ಲದೆ ವಿಶ್ವ ಕ್ರಿಕೆಟ್‌ನಲ್ಲಿ 27 ಸಾವಿರ ರನ್‌ಗಳ ದಾಖಲೆಯನ್ನು ಮಾಡಿದ ವಿಶ್ವದ ನಾಲ್ಕನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಕೀರ್ತಿ ಭಾರತದ ಸಚಿನ್ ತೆಂಡೂಲ್ಕರ್ ಅವರದ್ದಾಗಿದೆ. ಇವರು 782 ಇನಿಂಗ್ಸ್‌ಗಳಲ್ಲಿ 34357 ರನ್ ಸಿಡಿಸಿದ್ದಾರೆ. ಶ್ರೀಲಂಕಾದ ಕುಮಾರ್ ಸಂಗಾಕ್ಕರ್ 666 ಇನಿಂಗ್ಸ್‌ಗಳಲ್ಲಿ 28016 ರನ್ ಕಲೆ ಹಾಕಿದ್ದಾರೆ. ಇನ್ನು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ 668 ಇನಿಂಗ್ಸ್‌ಗಳಲ್ಲಿ 27483 ರನ್ ಸಿಡಿಸಿದ್ದಾರೆ. ಇದಾದ ಬಳಿಕ ಈ ಸಾಧನೆ ಮಾಡಿದ ನಾಲ್ಕನೇ ಬ್ಯಾಟರ್ ಎಂಬ ಹೆಗ್ಗಳಿಕೆ ವಿರಾಟ್ ಅವರದ್ದಾಗಿದೆ.
ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27 ಸಾವಿರ ರನ್ ಪೂರೈಸಿದ ಮೊದಲ ಆಟಗಾರ. ಅವರು ಈ ಸಾಧನೆಗೆ ತಲುಪಲು ಅವರು 623 ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದರು. ಇನ್ನು ಕೊಹ್ಲಿ ಕೇವಲ 594 ಇನ್ನಿಂಗ್ಸ್‌ಗಳಲ್ಲಿ 27 ಸಾವಿರ ರನ್ ಪೂರೈಸಿದ್ದಾರೆ. ಅಂದರೆ ಸಚಿನ್ ತೆಂಡೂಲ್ಕರ್ ಅವರಿಗಿಂತ 29 ಇನ್ನಿಂಗ್ಸ್ ಮುಂಚಿತವಾಗಿ ವಿರಾಟ್ ಈ ಸಾಧನೆ ಮಾಡಿದ್ದಾರೆ. ಇಲ್ಲಿಯವರೆಗೆ ಜಗತ್ತಿನಲ್ಲಿ ಕೇವಲ ಮೂರು ಬ್ಯಾಟ್ಸ್‌ಮನ್‌ಗಳು ಮಾತ್ರ ಈ ಸಾಧನೆ ಮಾಡಿದ್ದಾರೆ. ಈಗ ಈ ಸಾಲಿಗೆ ವಿರಾಟ್ ಸೇರ್ಪಡೆ ಆಗುತ್ತಾರೆ.
ವಿರಾಟ್ ಕೊಹ್ಲಿ ಎರಡನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇದು ಅವರ ಟೆಸ್ಟ್ ಕ್ರಿಕೆಟ್ ಬ್ಯಾಟಿಂಗ್‌ಗೆ ವಿರುದ್ಧವಾದ ಬ್ಯಾಟಿಂಗ್ ಶೈಲಿ ಆಗಿದೆ. ಕಾನ್ಪುರ್‌ದಲ್ಲಿ ವಿರಾಟ್ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ಕಂಡು ಅಭಿಮಾನಿಗಳು ಫುಲ್ ಖುಷ್ ಆದರು. ವಿರಾಟ್ 35 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 47 ರನ್ ಸಿಡಿಸಿ ಅರ್ಧಶತಕ ವಂಚಿತರಾದರು.