ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅನುಷ್ಕಾ ಜೊತೆಯಲ್ಲಿ ಹೊಸ ವರ್ಷ ಆಚರಿಸಿದ ವಿರಾಟ್ ಕೊಹ್ಲಿ: ಟೀಂ ಇಂಡಿಯಾ ಆಟಗಾರರು ಸಾಥ್

Virat kohli and Anushka

ಸೆಂಚುರಿಯನ್ ಸೂಪರ್ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿ ಈಗಾಗಲೇ 1-0 ಮುನ್ನಡೆ ಸಾಧಿಸಿರುವ ಖುಷಿಯಲ್ಲಿದೆ. ಇದರ ಜೊತೆಗೆ ಹೊಸ ವರ್ಷ ಕೂಡ ಬಂದಿದ್ದು ಟೀಂ ಇಂಡಿಯಾದ ಸಂತಸವನ್ನ ಇಮ್ಮಡಿಗೊಳಿಸಿದೆ.

ಭಾರತ ನೀಡಿದ 305ರನ್‌ಗಳ ಕಠಿಣ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ, ಎರಡನೇ ಇನ್ನಿಂಗ್ಸ್‌ನಲ್ಲಿ 191ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 113ರನ್‌ಗಳ ಹೀನಾಯ ಸೋಲು ಕಂಡಿದೆ. ಅಂತಿಮ ದಿನದಾಟದಲ್ಲಿ ಭಾರತದ ಗೆಲುವಿಗೆ 6 ವಿಕೆಟ್‌ಗಳ ಅವಶ್ಯಕತೆಯಿತ್ತು. ದಕ್ಷಿಣ ಆಫ್ರಿಕಾ ಗೆಲುವಿಗೆ 211ರನ್‌ಗಳು ಬೇಕಾಗಿತ್ತು. ಆದ್ರೆ ಭಾರತ ಎದುರಾಳಿಯನ್ನ 191ರನ್‌ಗಳಗೆ ಆಲೌಟ್ ಮಾಡಿ ಪಂದ್ಯ ಗೆದ್ದುಗೊಂಡಿತು.

ಹೊಸ ವರ್ಷ ಬಂದಿರುವ ಹಿನ್ನಲೆಯಲ್ಲಿ ಆಟಗಾರರ ಕುಟುಂಬಗಳು ಒಂದಾಗಿ ಎಂಜಾಯ್ ಮಾಡ್ತಿದ್ದಾರೆ. ಹೊಸ ವರ್ಷದಂದು ವಿರಾಟ್ ಮತ್ತು ಅನುಷ್ಕಾ ಕೂಡ ಒಟ್ಟಿಗೆ ಇದ್ದಾರೆ. ಕೊಹ್ಲಿ ಪತ್ನಿ ಅನುಷ್ಕಾ ಹಾಗೂ ವಿರಾಟ್‌ನ ಸಹ ಆಟಗಾರರೊಂದಿಗೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

ಹೊಸ ವರ್ಷವನ್ನು ಆಚರಿಸುವಾಗ, ಕೊಹ್ಲಿ ಅನುಷ್ಕಾ ಅವರೊಂದಿಗೆ ಪೋಸ್ ನೀಡಿದ್ದು, ಇಶಾಂತ್ ಶರ್ಮಾ, ಅಜಿಂಕ್ಯಾ ರಹಾನೆ, ಕೆ.ಎಲ್ ರಾಹುಲ್, ಚೇತೇಶ್ವರ್ ಪೂಜಾರ, ನವದೀಪ್ ಸೈನಿ, ಮಯಾಂಕ್ ಅಗರವಾಲ್ ಮತ್ತು ಶಾರ್ದೂಲ್ ಠಾಕೂರ್ ಅವರೊಂದಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಈ ಫೋಟೋಗಳಲ್ಲಿ ಟೀಂ ಇಂಡಿಯಾದ ಗ್ರೂಪ್ ಫೋಟೋ ಕೂಡ ಇದ್ದು, ಇದರಲ್ಲಿ ಕೋಚಿಂಗ್ ಸಿಬ್ಬಂದಿಯನ್ನು ಸಹ ನೋಡಬಹುದಾಗಿದೆ. ಈ ಸಮಯದಲ್ಲಿ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರನ್ನೂ ನೋಡಬಹುದು.

ಈ ಸಂದರ್ಭದಲ್ಲಿ ಅನುಷ್ಕಾ ಶರ್ಮಾ ಇನ್‌ಸ್ಟಾಗ್ರಾಮ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು 2021 ಅನ್ನು ತಮ್ಮ ಜೀವನದ ದೊಡ್ಡ ಕೊಡುಗೆ ಎಂದು ನೆನಪಿಸಿಕೊಂಡಿದ್ದಾರೆ. ಈ ವರ್ಷ ಉಡುಗೊರೆಯಾಗಿ ಅವರ ಮಗಳು ವಾಮಿಕಾ ಆಗಮನವಾಗಿದೆ. ಈ ಫೋಟೋದಲ್ಲಿ ನೀವು ಕೇಕ್ ಕತ್ತರಿಸುವ ಸೆಶನ್ ಅನ್ನು ನೋಡಬಹುದು. ಮೂರು ಟೆಸ್ಟ್ ಪಂದ್ಯಗಳ ಜೊತೆಗೆ ಏಕದಿನ ಸರಣಿ ಆಡಲು ದೀರ್ಘಕಾಲ ದಕ್ಷಿಣ ಆಫ್ರಿಕಾದಲ್ಲಿ ಕಾಲ ಕಳೆಯುವ ಹಿನ್ನಲೆಯಲ್ಲಿ ಬಹುತೇಕ ಆಟಗಾರರ ಕುಟುಂಬದವರು ಜೊತೆಗೆ ತೆರಳಿದ್ದಾರೆ.

ಸೆಂಚುರಿಯನ್ ಗೆಲುವಿನ ನಂತರ ಕೊಹ್ಲಿ ಅಂಡ್ ಕೋ ಪಾರ್ಟಿ ಮಾಡಿದ್ದು, ಹೋಟೆಲ್‌ನಲ್ಲಿ ಸಂಗೀತಕ್ಕೆ ನೃತ್ಯ ಮಾಡಿದೆ. ವಿರಾಟ್ ಕೊಹ್ಲಿ, ಪೂಜಾರ ಮತ್ತು ದ್ರಾವಿಡ್ ಅವರಂತಹ ಆಟಗಾರರು ತಮ್ಮ ಸ್ಟೆಪ್ ಹಾಕುವ ವೀಡಿಯೊವನ್ನು ಬಿಸಿಸಿಐ ಹಂಚಿಕೊಂಡಿದೆ.

ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದ ಕೋಟೆ ಎಂದು ಪರಿಗಣಿಸಲ್ಪಟ್ಟ ಸೆಂಚೂರಿಯನ್‌ನಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಏಷ್ಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಏತನ್ಮಧ್ಯೆ, ಜನವರಿ 19 ರಿಂದ ಪ್ರಾರಂಭವಾಗುವ 3 ಪಂದ್ಯಗಳ ಏಕದಿನ ಸರಣಿಗೆ 18 ಆಟಗಾರರ ತಂಡದಲ್ಲಿ ಕೊಹ್ಲಿ ಕೂಡ ಆಯ್ಕೆಯಾಗಿದ್ದಾರೆ. ಕೆ.ಎಲ್ ರಾಹುಲ್ ಅವರನ್ನು ನಾಯಕರನ್ನಾಗಿ ಮಾಡಲಾಗಿದ್ದು, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಏಕದಿನ ತಂಡ:
ಕೆ.ಎಲ್ ರಾಹುಲ್ (ಸಿ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶನ್ ಕಿಶನ್ (ವಿಕೆಟ್ ಕೀಪರ್), ಯುಜವೇಂದ್ರ ಚಾಹಲ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ಉಪನಾಯಕ) , ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್

ಏಕದಿನ ಸರಣಿ ವೇಳಾಪಟ್ಟಿ
ಭಾರತವು ಮೂರು ಏಕದಿನ ಪಂದ್ಯಗಳನ್ನು ಸಹ ಆಡುತ್ತದೆ. ಆದರೆ ಬಿಸಿಸಿಐ ಮೊದಲೇ ಘೋಷಿಸಿದಂತೆ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಮತ್ತೆ ನಿಗದಿಪಡಿಸಲಾಗುತ್ತದೆ.

ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್‌ ಟೌನ್, ಸಮಯ - 2.00 PM

Story first published: Saturday, January 1, 2022, 17:34 [IST]
Other articles published on Jan 1, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X