For Quick Alerts
ALLOW NOTIFICATIONS  
For Daily Alerts
 

ಇನ್‌ಸ್ಟಾಗ್ರಾಮ್‌ನಿಂದ ಕೋಟಿ ಕೋಟಿ ಗಳಿಕೆ ಸುದ್ದಿ: ಸತ್ಯ ಬಾಯ್ಬಿಟ್ಟ ಸ್ವತಃ ವಿರಾಟ್ ಕೊಹ್ಲಿ

ಕ್ರಿಕೆಟಿಗರೂ ಸೇರಿದಂತೆ ಸ್ಟಾರ್‌ಗಳ ಖಾಸಗೀ ಬದುಕಿನ ಕುರಿತು, ಅವರ ಇಷ್ಟ ಕಷ್ಟಗಳ ವಿಚಾರವಾಗಿ, ಅವರ ಆದಾಯದ ಕುರಿತಾಗಿ ಅಭಿಮಾನಿಗಳಿಗೆ ಸಹಜವಾಗಿಯೇ ಸಾಕಷ್ಟು ಕುತೂಹಲಗಳು ಇರುತ್ತವೆ. ಆದರೆ ಕೆಲವೊಮ್ಮೆ ಇಂಥಾ ವಿಚಾರವಾಗಿ ಕೆಲ ಸುದ್ದಿಗಳು ಅತಿರಂಜಿತವಾಗಿ ಬಿಂಬಿತವಾಗಿ ಬಿಡುತ್ತದೆ. ಇದಕ್ಕೆ ಇತ್ತೀಚಿನ ಉದಾಹರಣೆಯಾಗಿದ್ದು ವಿರಾಟ್ ಕೊಹ್ಲಿಯ ಇನ್‌ಸ್ಟಾಗ್ರಾಮ್ ಪೋಸ್ಟ್‌ನ ಆದಾಯದ ಸುದ್ದಿ.

'ಹೂಪರ್ ಹೆಚ್‌ಕ್ಯೂ' ಎಂಬ ಸಾಮಾಜಿಕ ಜಾಲತಾಣದ ಮಾರ್ಕೆಟಿಂಗ್ ಸೊಲ್ಯುಶನ್ ಸಂಸ್ಥೆಯೊಂದು ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಂನಲ್ಲಿ ಗಳಿಸುವ ಆದಾಯವನ್ನು ಪ್ರಕಟಿಸಿತ್ತು. ಪ್ರತಿ ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ವಿರಾಟ್ ಕೊಹ್ಲಿ 11.45 ಕೋಟಿ ರೂಪಾಯಿ ಆದಾಯ ಗಳಿಸುತ್ತಾರೆ ಎಂದು ವರದಿಯಾಗಿತ್ತು. ಇದು ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ.

Virat Kohli clarification on social media earnings said reports are not true

ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಚಾರ ಸಾಕಷ್ಟು ವೈರಲ್ ಆದ ಬಳಿಕ ಸ್ವತಃ ವಿರಾಟ್ ಕೊಹ್ಲಿ ಈ ವಿಚಾರವಾಗಿ ಸ್ಪಷ್ಟನೆಯನ್ನು ನೀಡಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿರಾಟ್ ಕೊಹ್ಲಿ ಈ ವರದಿಯನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ. ಆ ಮಾಹಿತಿ ಸತ್ಯಕ್ಕೆ ದೂರವಾಗಿದ್ದು ಎಂಬ ವಿಚಾರವನ್ನು ವಿರಾಟ್ ಕೊಹ್ಲಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ಕೊಹ್ಲಿ "ನನ್ನ ಜೀವನದಲ್ಲಿ ನಾನು ಪಡೆದುಕೊಂಡಿರುವುದಕ್ಕೆ ನಾನು ಬಹಳ ಸಂತುಷ್ಟನಾಗಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ನಾನು ಗಳಿಸುವ ಆದಾಯಕ್ಕೆ ಸಂಬಂಧಿಸಿದಂತೆ ಬಂದಿರುವ ಸುದ್ದಿ ನಿಜವಲ್ಲ" ಎಂದು ವಿರಾಟ್ ಕೊಹ್ಲಿ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ತಾನು ಒಂದು ಪೋಸ್ಟ್‌ಗೆ ಇನ್‌ಸ್ಟಾಗ್ರಾಂನಲ್ಲಿ 11.45 ಕೋಟಿ ಗಳಿಸುತ್ತಿರುವ ಸುದ್ದಿಯನ್ನು ಅಲ್ಲಗಳೆದಿದ್ದಾರೆ.

ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯವಾಗಿರುವ ಕ್ರಿಕೆಟಿಗ. ತಮ್ಮ ದೈನಂದಿನ ಚಟುವಟಿಕೆಗಳ ಬಗ್ಗೆ, ತರಬೇತಿ, ಅಭ್ಯಾಸ ಸೇರಿದಂತೆ ಖಾಸಗಿ ಜೀವನದ ಆಗುಹೋಗುಗಳ ಬಗ್ಗೆ ಬಗ್ಗೆ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಮಾಡುತ್ತಿರುತ್ತಾರೆ ವಿರಾಟ್ ಕೊಹ್ಲಿ.

ಏಷ್ಯಾಕಪ್, ವಿಶ್ವಕಪ್‌ನಂಥಾ ಮಹತ್ವದ ಕ್ರಿಕೆಟ್ ಟೂರ್ನಿಗಳು ಇರುವ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಟೀಮ್ ಇಂಡಿಯಾದ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಭಾಗಿಯಾದ ಬಳಿಕ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ ಕೊಹ್ಲಿ. ಪ್ರಸ್ತುತ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗಿಯಾಗಿದೆ.

ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ದೊಡ್ಡ ದಾಖಲೆಯೊಂದನ್ನು ಮುರಿಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಅಂತಾರಾಷ್ಟ್ರೀಯ ಏಕದಿನ ಮಾದರಿಯಲ್ಲಿ ಅತಿ ವೇಗವಾಗಿ 13,000 ರನ್‌ಗಳನ್ನು ಗಳಿಸಿದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯುವ ಅವಕಾಶ ಕೊಹ್ಲಿ ಮುಂದಿದೆ. ಸದ್ಯ ಸಚಿನ್ ತೆಂಡೂಲ್ಕರ್ ಆ ಸಾಧನೆ ಮಾಡಿದ್ದಾರೆ. ಇನ್ನು ಮುಂಬರುವ ಏಷ್ಯಾ ಕಪ್ ಹಾಗೂ ವಿರ್ಶವಕಪ್ ಟೂರ್ನಿಯಲ್ಲಿ ಭಾರತದ ಪರವಾಗಿ ಪ್ರಮುಖ ಪಾತ್ರನಿರ್ವಹಿಸುವ ನಿರೀಕ್ಷೆ ಕೂಡ ವಿರಾಟ್ ಕೊಹ್ಲಿ ಮೇಲಿದೆ.

Story first published: Saturday, August 12, 2023, 13:47 [IST]
Other articles published on Aug 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+