Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ 2ನೇ ಸ್ಥಾನಕ್ಕೆ ಜಿಗಿದ ವಿರಾಟ್ ಕೊಹ್ಲಿ

Virat Kohli climbs to 2nd spot in ICC Test rankings

ದುಬೈ: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನಕ್ಕೆ ಜಿಗಿದಿದ್ದಾರೆ. ಮಂಗಳವಾರ (ಡಿಸೆಂಬರ್ 15) ಪ್ರಕಟವಾಗಿರುವ ನೂತನ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ಸ್ಟೀವ್ ಸ್ಮಿತ್ ಬಳಿಕ ಕೊಹ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತದ ಟೆಸ್ಟ್ ಸ್ಪೆಷಾಲಿಸ್ಟ್ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಕೂಡ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಟಾಪ್‌ 10ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಪೂಜಾರ 7ನೇ ಶ್ರೇಯಾಂಕದಲ್ಲಿದ್ದರೆ, ರಹಾನೆ 10ನೇ ಸ್ಥಾನ ಪಡೆದುಕೊಂಡಿದ್ದಾರೆ. ಟೆಸ್ಟ್ ಬೌಲಿಂಗ್‌ನಲ್ಲಿ ಭಾರತದ ಜಸ್‌ಪ್ರೀತ್ ಬೂಮ್ರಾ 8ನೇ ಸ್ಥಾನ, ರವಿಚಂದ್ರನ್ ಅಶ್ವಿನ್ 10ನೇ ಸ್ಥಾನದಲ್ಲಿದ್ದಾರೆ.

ಸದ್ಯ ನಂ.1 ಸ್ಥಾನದಲ್ಲಿರುವ ಸ್ಟೀವ್ ಸ್ಮಿತ್ 911 ಪಾಯಿಂಟ್ಸ್‌ ಕಲೆ ಹಾಕಿದ್ದರೆ, ದ್ವಿತೀಯ ಸ್ಥಾನಿ ಕೊಹ್ಲಿ 886 ಅಂಕ ಗಳಿಸಿದ್ದಾರೆ. ತೃತೀಯ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ (877 ಪಾಯಿಂಟ್ಸ್‌) ಇದ್ದಾರೆ. ಇದಕ್ಕೂ ಮುನ್ನ ವಿಲಿಯಮ್ಸನ್ ದ್ವಿತೀಯ ಸ್ಥಾನದಲ್ಲಿದ್ದರು.

ಟೆಸ್ಟ್‌ ರ್‍ಯಾಂಕಿಂಗ್‌ನ 4ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಾರ್ನಸ್ ಲ್ಯಬುಶೇನ್, 5ನೇ ಸ್ಥಾನದಲ್ಲಿ ಪಾಕಿಸ್ತಾನದ ಬಾಬರ್ ಅಝಾಮ್ ಇದ್ದಾರೆ. ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್, ದ್ವಿತೀಯ ಸ್ಥಾನದಲ್ಲಿ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್, ತೃತೀಯ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ನೀಲ್ ವ್ಯಾಗ್ನರ್ ಇದ್ದಾರೆ.

Story first published: Wednesday, December 16, 2020, 10:22 [IST]
Other articles published on Dec 16, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+