Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ಡೆಲ್ಲಿ ವಿರುದ್ದ ಅರ್ಧಶತಕ ಬಾರಿಸುತ್ತಲೇ ವಿರಾಟ್ ದಾಖಲೆ

ಪ್ರಸಕ್ತ ಐಪಿಎಲ್‌ನಲ್ಲಿ ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಅಮೋಘ ಫಾರ್ಮ್‌ನಲ್ಲಿದ್ದಾರೆ. ಇವರು ಸದ್ಯ ಆಡಿರುವ 4 ಪಂದ್ಯಗಳಲ್ಲಿ ಎರಡು ಅರ್ಧಶತಕ ಬಾರಿಸಿ ಭರವಸೆ ಮೂಡಿಸಿದ್ದಾರೆ. ಗುರುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್‌ ಮತ್ತೊಂದು ಅರ್ಧಶತಕ ಬಾರಿಸಿದ್ದೇ ಆದಲ್ಲಿ ಇತಿಹಾಸ ನಿರ್ಮಿಸಲಿದ್ದಾರೆ. ಹಾಗಿದ್ದಾರೆ ವಿರಾಟ್‌ ಬರೆಯಲಿರುವ ಆ ದಾಖಲೆ ಯಾವುದು ಎಂಬ ಬಗ್ಗೆ ಕಂಪ್ಲೀಟ್ ರಿಪೋರ್ಟ್‌ ಇಲ್ಲಿದೆ.

18ನೇ ಆವೃತ್ತಿಯ 24ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಈ ವೇಳೆ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಪ್ರಸಕ್ತ ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿವೆ. ಡೆಲ್ಲಿ ಆಡಿದ ಮೂರು ಪಂದ್ಯಗಳನ್ನು ಗೆದ್ದು ಅಜೇಯ ಓಟವನ್ನು ಮುಂದುವರೆಸಿದರೆ, ಆರ್‌ಸಿಬಿ ಆಡಿರುವ 4 ಪಂದ್ಯಗಳಲ್ಲಿ ಮೂರು ಜಯ ಸಾಧಿಸಿದೆ. ಉಭಯ ತಂಡಗಳಲ್ಲೂ ಸ್ಟಾರ್ ಆಟಗಾರರು ಇದ್ದು ಭರವಸೆ ಮೂಡಿಸಿದೆ. ಈ ವೇಳೆ ಆರ್‌ಸಿಬಿ ನಾಲ್ಕನೇ ಗೆಲುವು ದಾಖಲಿಸಿ ಪ್ಲೇ ಆಫ್‌ಗೆ ಹತ್ತಿರವಾಗುವ ಇರಾದೆಯನ್ನು ಹೊಂದಿದೆ. ತವರಿನಲ್ಲಿ ಗುಜರಾತ್‌ ವಿರುದ್ಧ ಸೋಲು ಕಂಡಿದ್ದ ಆರ್‌ಸಿಬಿ, ಜಯದ ಕನಸು ಕಾಣುತ್ತಿದೆ. ಈ ವೇಳೆ ವಿರಾಟ್‌ ಕೊಹ್ಲಿ ಅರ್ಧಶತಕ ಬಾರಿಸುತ್ತಿದ್ದಂತೆ ದೊಡ್ಡ ಸಾಧನೆ ಮಾಡಲಿದ್ದಾರೆ.

Virat Kohli Close to T20 Milestone with One More Half-Century

ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ 13 ಸಾವಿರ ರನ್‌ ಕಲೆ ಹಾಕಿ ಈ ಸಾಧನೆ ಮಾಡಿರುವ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವಿರಾಟ್, ಮತ್ತೊಂದು ಇಂತಹದ್ದೇ ಸಾಧನೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಅರ್ಧಶತಕ ಬಾರಿಸಿದ್ದೇ ಆದಲ್ಲಿ ಟಿ20 ಕ್ರಿಕೆಟ್‌ನಲ್ಲಿ ನೂರು ಅರ್ಧಶತಕ ಬಾರಿಸಿದ ಹಿರಿಮೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ದೊಡ್ಡ ದಾಖಲೆಯ ಮೇಲೆ ಕಣ್ಣು

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಹಿರಿಮೆ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರಿಗೆ ಸಲ್ಲುತ್ತದೆ. ಇವರು ಆಡಿದ 399 ಟಿ20 ಪಂದ್ಯಗಳಲ್ಲಿ 108 ಅರ್ಧಶತಕ ಬಾರಿಸಿದ್ದಾರೆ. ಈ ದಾಖಲೆಯ ಪಟ್ಟಿಯಲ್ಲಿ ವಿರಾಟ್‌ಗೆ ಎರಡನೇ ಸ್ಥಾನ. ವಿರಾಟ್‌ ಆಡಿರುವ 403 ಪಂದ್ಯಗಳಲ್ಲಿ 99 ಅರ್ಧಶತ ಸಿಡಿಸಿದ್ದಾರೆ. ಪ್ರಸಕ್ತ ಆವೃತ್ತಿಯ ವಿರಾಟ್ ಕೊಹ್ಲಿ ಅವರ ಫಾರ್ಮ್‌ ಅದ್ಭುತವಾಗಿದೆ. ಕೆಕೆಆರ್‌ ಹಾಗೂ ಮುಂಬೈ ವಿರುದ್ಧ ವಿರಾಟ್‌ ಈಗಾಗಲೇ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ದೆಹಲಿ ವಿರುದ್ಧ ವಿರಾಟ್ ಇದುವರೆಗೆ ಆಡಿರುವ 29 ಪಂದ್ಯಗಳಲ್ಲಿ 28 ಇನ್ನಿಂಗ್ಸ್‌ಗಳಲ್ಲಿ 50.33 ರ ಸರಾಸರಿಯಲ್ಲಿ 1057 ರನ್ ಗಳಿಸಿದ್ದಾರೆ. ಈ ವೇಳೆ 10 ಅರ್ಧಶತಕ ಸಿಡಿಸಿದ್ದಾರೆ.

Virat Kohli Close to T20 Milestone with One More Half-Century

ಗುಜರಾತ್‌ ವಿರುದ್ಧದ ಪಂದ್ಯದಲ್ಲಿ ನಿರಾಸೆ ಅನುಭಿಸಿದ್ದ ವಿರಾಟ್‌, ತವರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಮತ್ತೊಂದು ಅರ್ಧಶತಕ ಬಾರಿಸಲಿ ಎಂಬುದೇ ಅಭಿಮಾನಿಗಳ ಆಶಯ.

Story first published: Thursday, April 10, 2025, 11:21 [IST]
Other articles published on Apr 10, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+