ಭಾರತ vs ಆಸ್ಟ್ರೇಲಿಯಾ: ಆಸಿಸ್ ನೆಲದಲ್ಲಿ 3000 ರನ್ ದಾಖಲಿಸಿದ ವಿರಾಟ್ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20ಪಂದ್ಯವನ್ನು ಭಾರತ 12 ರನ್‌ಗಳ ಅಂತರದಿಂದ ಕಳೆದುಕೊಂಡಿದೆ. ಈ ಮೂಲಕ ಆಸ್ಟ್ರೇಲಿಯಾವನ್ನು ಎರಡನೇ ಬಾರಿಗೆ ಟಿ20 ಕ್ರಿಕೆಟ್‌ನಲ್ಲಿ ಅದರದ್ದೇ ನೆಲದಲ್ಲಿ ವೈಟ್ ವಾಶ್ ಮಾಡುವ ಅವಕಾಶವನ್ನು ಕಳೆದುಕೊಂಡಿತು. ಆದರೆ ಟೀಮ್ ಇಂಡಿಯಾ 2-1 ಅಂತರದಿಂದ ಚುಟುಕು ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.
ಅಂತಿಮ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ 85 ರನ್‌ಗಳ ಕೊಡುಗೆಯನ್ನು ನೀಡಿದ್ದಾರೆ. ಆದರೆ ವಿರಾಟ್ ಏಕಾಂಗಿ ಹೋರಾಟ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಇತರ ಬ್ಯಾಟ್ಸ್‌ಮನ್‌ಗಳಿಂದ ಉತ್ತಮ ಪ್ರದರ್ಶನ ಬಾರದಿರುವುದು ತಂಡದ ಸೋಲಿಗೆ ಕಾರಣವಾಯಿತು. ಆದರೆ ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆಯನ್ನು ಮಾಡಿದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಹಾಗಾದರೆ ಕೊಹ್ಲಿ ದಾಖಲಿಸಿದ ಆ ವಿಶೇಷ ಸಾಧನೆ ಏನು? ಮುಂದೆ ಓದಿ..

ಆಸಿಸ್ ವಿರುದ್ಧ ಅಬ್ಬರಿಸುವ ಕೊಹ್ಲಿ
ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿ ಬಾರಿಯೂ ಅಬ್ಬರಿಸುತ್ತಾರೆ. ಅದು ಆಸ್ಟ್ರೇಲಿಯಾ ನೆಲದಲ್ಲಿ ಆಗಿರಲಿ ಅಥವಾ ಭಾರತದ ನೆಲದಲ್ಲಿ ಆಗಿರಲಿ ಕೊಹ್ಲಿಗೆ ಆಸ್ಟ್ರೇಲಿಯಾ ಫೇವರೀಟ್ ಎದುರಾಳಿ ಎಂದರೆ ತಪ್ಪಾಗಲಾರದು. ಈ ಬಾರಿಯ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲೂ ಕೊಹ್ಲಿ ಮಿಂಚಿದ್ದಾರೆ. ಅಂತಿಮ ಟಿ20 ಪಂದ್ಯದಲ್ಲಿ 85 ರನ್‌ಗಳ ಕೊಡುಗೆಯನ್ನು ನೀಡಿದ್ದಾರೆ.

ಆಸಿಸ್ ನೆಲದಲ್ಲಿ ಕೊಹ್ಲಿ 3000 ರನ್
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ನೆಲದಲ್ಲಿ 3000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಎರಡನೇ ಆಟಗಾರ ಎನಿಸಿದ್ದಾರೆ. ಮೂರು ಮಾದರಿಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಈ ರನ್ ಗಳಿಸಿ ಸಾಧನೆ ಮಾಡಿದ್ದಾರೆ.

ಸಚಿನ್ ಮೊದಲಿಗ
ಆಸ್ಟ್ರೇಲಿಯಾ ನೆಲದಲ್ಲಿ 3000 ರನ್‌ಗಳನ್ನು ದಾಖಲಿಸಿದ ಇನ್ನೋರ್ವ ಭಾರತೀಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್. ಸಚಿನ್ ತೆಂಡೂಲ್ಕರ್ ಕೂಡ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಪ್ರದರ್ಶನವನ್ನು ನೀಡುತ್ತಿದ್ದರು. ಆಸ್ಟ್ರೇಲಿಯಾ ನೆಲದಲ್ಲೂ ಉತ್ತಮ ಬ್ಯಾಟಿಂಗ್ ದಾಖಲೆಹೊಂದಿರುವ ತೆಂಡೂಲ್ಕರ್ 3000 ರನ್‌ಗಳ ಗುರಿ ತಲುಪಿದ ಮೊದಲ ಭಾರತೀಯ ಆಟಗಾರನಾಗಿದ್ದಾರೆ.

ಟೆಸ್ಟ್ ಸರಣಿಯತ್ತ ಭಾರತ ಚಿತ್ತ
ಆಸ್ಟ್ರೆಲಿಯಾ ವಿರುದ್ಧದ ಏಕದಿನ ಹಾಗೂ ಟಿ20 ಪಂದ್ಯಗಳ ಸರಣಿ ಅಂತ್ಯವಾಗಿದೆ. ಇನ್ನು ಸುದೀರ್ಘ ಮಾದರಿಯ ಕ್ರಿಕೆಟ್‌ನತ್ತ ಎರಡು ದೇಶಗಳ ಆಟಗಾರರು ಚಿತ್ತ ನೆಟ್ಟಿದ್ದಾರೆ. ಅಡಿಲೇಡ್‌ನಲ್ಲಿ ಡಿಸೆಂಬರ್ 17ರಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿದ್ದು ಅಹರ್ನಿಶಿಯಾಗಿ ಈ ಪಂದ್ಯ ಸಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications