ಐಸಿಸಿಯ ಹೊಸ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಿಸೆಂಬರ್‌ನಿಂದ ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನಗೊಂಡಾಗಲೇ ಜಯ್ ಶಾ ಇತಿಹಾಸ ಸೃಷ್ಟಿಸಿದ್ದರು. ಇದೀಗ ಐಸಿಸಿ ಅಧ್ಯಕ್ಷರಾದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಐಸಿಸಿ ನೂತನ ಅಧ್ಯಕ್ಷ ಜಯ್ ಶಾ ಅವರಿಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, "ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜಯ್ ಶಾ ಅವರಿಗೆ ಅಭಿನಂದನೆಗಳು. ಮುಂದೆ ನೀವು ಇನ್ನಷ್ಟು ಉತ್ತಮ ಯಶಸ್ಸನ್ನು ಕಾಣಲಿ ಎಂದು ಹಾರೈಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.