Virat Kohli: ಡೇವಿಡ್ ವಾರ್ನರ್ ಸಿಂಹಾಸನ ವಶಪಡಿಸಿಕೊಂಡ ವಿರಾಟ್ ಕೊಹ್ಲಿ
ಭಾರತ ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಮತ್ತೊಂದು ದೊಡ್ಡ ಸಾಧನೆ ಮಾಡಿದ್ದಾರೆ. ಭಾನುವಾರ (ಏಪ್ರಿಲ್ 20) ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ವಿರಾಟ್ ಕೊಹ್ಲಿ ಅದ್ಭುತ ಅರ್ಧಶತಕ ಗಳಿಸಿದರು. ಈ ಮೂಲಕ ಅವರು ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದರು. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಮಾಜಿ ಸ್ಪೋಟಕ ಬ್ಯಾಟರ್ ಡೇವಿಡ್ ವಾರ್ನರ್ ದಾಖಲೆಯನ್ನು ಮುರಿದ್ದಾರೆ.
ಚಂಡೀಗಢದ ಮುಲ್ಲನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್‌ಸಿಬಿ 7 ವಿಕೆಟ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ ಅಜೇಯ 73 ರನ್ ಗಳಿಸಿದರು. ಈ ವೇಳೆ ಅವರು 7 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿದರು. ಅವರ ಸ್ಟ್ರೈಕ್ ರೇಟ್ 135.19 ಆಗಿತ್ತು. ಮತ್ತೊಂದೆಡೆ ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 61 ರನ್ ಗಳಿಸಿದರು. ಪಂಜಾಬ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 157 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಆರ್‌ಸಿಬಿ 18.5 ಓವರ್‌ಗಳಲ್ಲಿ 3 ವಿಕೆಟ್‌ಗೆ 159 ರನ್ ಗಳಿಸುವ ಮೂಲಕ ಜಯ ಸಾಧಿಸಿತು.

ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ 67ನೇ ಬಾರಿಗೆ 50 ಪ್ಲಸ್ ರನ್ ಗಳಿಸಿದ್ದಾರೆ. ಇದರಲ್ಲಿ 8 ಶತಕಗಳು ಸೇರಿವೆ. ಐಪಿಎಲ್‌ನಲ್ಲಿ ವಾರ್ನರ್ 66 ಬಾರಿ ಈ ಸಾಧನೆ ಮಾಡಿದ್ದಾರೆ. ಅವರ ಹೆಸರಿನಲ್ಲಿ 4 ಶತಕಗಳಿವೆ. ಅವರು ಐಪಿಎಲ್ 2025 ರಲ್ಲಿ ಆಡುತ್ತಿಲ್ಲ. ಐಪಿಎಲ್ ಮೆಗಾ ಹರಾಜಿನಲ್ಲಿ ವಾರ್ನರ್ ಅವರನ್ನು ಯಾವ ಫ್ರಾಂಚೈಸಿ ಬಿಡ್ ಮಾಡಲಿಲ್ಲ. ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡದ ಮಾಜಿ ನಾಯಕ ಶಿಖರ್ ಧವನ್ 53 ಬಾರಿ 50 ಪ್ಲಸ್ ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಐಪಿಎಲ್‌ನಲ್ಲಿ ಹೆಚ್ಚು ಬಾರಿ 50 ಪ್ಲಸ್ ರನ್ ಗಳಿಸಿದವರು
ವಿರಾಟ್ ಕೊಹ್ಲಿ- 67 ಬಾರಿ (8 ಶತಕಗಳು)
ಡೇವಿಡ್ ವಾರ್ನರ್- 66 ಬಾರಿ (4 ಶತಕಗಳು)
ಶಿಖರ್ ಧವನ್- 53 ಬಾರಿ (2 ಶತಕ)
ರೋಹಿತ್ ಶರ್ಮಾ- 45 ಬಾರಿ (2 ಶತಕಗಳು)
ಕೆ.ಎಲ್. ರಾಹುಲ್- 43 ಬಾರಿ (4 ಶತಕಗಳು)
ಎಬಿ ಡಿವಿಲಿಯರ್ಸ್- 43 ಬಾರಿ (3 ಶತಕಗಳು)
ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್
ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರು 8 ಪಂದ್ಯಗಳ 8 ಇನ್ನಿಂಗ್ಸ್‌ಗಳಲ್ಲಿ 322 ರನ್ ಗಳಿಸಿದ್ದಾರೆ. ಇದುವರೆಗೆ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅವರು ಮೂರನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ 64.40 ಸರಾಸರಿ ಮತ್ತು 140.00 ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ್ದು, ತಮ್ಮ ಹೆಸರಿನಲ್ಲಿ ನಾಲ್ಕು ಅರ್ಧಶತಕಗಳನ್ನು ಬಾರಿಸಿದ್ದಾರೆ.
ಐಪಿಎಲ್ 2025 ರಲ್ಲಿ ರನ್ ಚೇಸಿಂಗ್‌ನಲ್ಲಿ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 36 ಎಸೆತಗಳಲ್ಲಿ ಅಜೇಯ 62, ರಾಜಸ್ಥಾನ ರಾಯಲ್ಸ್ ವಿರುದ್ಧ 45 ಎಸೆತಗಳಲ್ಲಿ ಅಜೇಯ 62 ಮತ್ತು ಪಂಜಾಬ್ ವಿರುದ್ಧ 43 ಎಸೆತಗಳಲ್ಲಿ ಅಜೇಯ 73 ರನ್ ಗಳಿಸಿದ್ದಾರೆ.
ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕಳೆದ ಐದು ಇನ್ನಿಂಗ್ಸ್‌ಗಳಲ್ಲಿ ನಾಲ್ಕ ಅರ್ಧಶತಕವನ್ನು ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು ಕ್ರಮವಾಗಿ 59, 77, 92, 1 ಮತ್ತು ಅಜೇಯ 73 ರನ್‌ಗಳನ್ನು ಕಲೆ ಹಾಕಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications