ಸತತ 4 ಆವೃತ್ತಿ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ 600ಕ್ಕೂ ಹೆಚ್ಚು ರನ್ ದಾಖಲೆ
ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಗುಜರಾತ್ ಟೈಟಾನ್ಸ್ (ಜಿಟಿ) ನಡುವೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪವರ್ ಪ್ಲೇನಲ್ಲಿ ಅಮೋಘ ಬ್ಯಾಟಿಂಗ್ ನಡೆಸಿತು. ಈ ವೇಳೆ ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ವಿರಾಟ್ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಆದರೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಇವರು ತಮ್ಮ ನೈಜ ಶೈಲಿಯಲ್ಲಿ ಬ್ಯಾಟ್ ಮಾಡಿ ಅಬ್ಬರಿಸಿದರು. ವಿರಾಟ್ ಆಡಿದ 25 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಾಯದಿಂದ 43 ರನ್ ಬಾರಿಸಿ ಔಟ್ ಆದರು. ಈ ಜವಾಬ್ದಾರಿಯುತ ಇನಿಂಗ್ಸ್ ಮೂಲಕ ವಿರಾಟ್ ದೊಡ್ಡ ದಾಖಲೆಯನ್ನು ಬರೆದರು.

ಈ ಪಂದ್ಯದಲ್ಲಿ ವಿರಾಟ್ 40 ರನ್ ಬಾರಿಸುತ್ತಿದ್ದಂತೆ ಗುಜರಾತ್ ಟೈಟಾನ್ಸ್ ವಿರುದ್ಧ ಐಪಿಎಲ್‌ನಲ್ಲಿ 500ಕ್ಕೂ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ಖ್ಯಾತಿ ಪಡೆದಿದ್ದಾರೆ. ಐಪಿಎಲ್‌ನ ಮೊದಲ ಆವೃತ್ತಿಯ ಪಂದ್ಯದಿಂದ ಆರ್‌ಸಿಬಿ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್, ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪರ 500ಕ್ಕೂ ಹೆಚ್ಚು ರನ್ ಬಾರಿಸಿದ ದಾಖಲೆ ಹೊಂದಿದ್ದಾರೆ.
ವಿರಾಟ್ ಕೊಹ್ಲಿ ಈ 41 ರನ್‌ಗಳ ಸಹಾಯದಿಂದ ಈ ಆವೃತ್ತಿಯ ಐಪಿಎಲ್‌ನಲ್ಲೂ 600ಕ್ಕೂ ಹೆಚ್ಚು ರನ್ ಬಾರಿಸಿದ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಇವರು ಸತತ ನಾಲ್ಕು ಆವೃತ್ತಿಗಳಲ್ಲಿ 600ಕ್ಕೂ ಹೆಚ್ಚು ರನ್ ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯ ಶ್ರೇಯ ತಮ್ಮದಾಗಿಸಿಕೊಂಡಿದ್ದಾರೆ.
ಸತತ 4 ಆವೃತ್ತಿಗಳಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ರನ್‌ಗಳು
2026, 15 ಪಂದ್ಯ, 600 ರನ್, 1 ಶತಕ, 4 ಅರ್ಧಶತಕ
2025, 15 ಪಂದ್ಯ, 657 ರನ್, 8 ಅರ್ಧಶತಕ
2024, 15 ಪಂದ್ಯ, 741 ರನ್, 1 ಶತಕ, 5 ಅರ್ಧಶತಕ
2023, 14 ಪಂದ್ಯ, 639 ರನ್, 2 ಶತಕ, 6 ಅರ್ಧಶತಕ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications