IPL 2025: ವಿರಾಟ್ ಕೊಹ್ಲಿ 100 ಟಿ20 ಅರ್ಧಶತಕಗಳ ದಾಖಲೆ
ಐಪಿಎಲ್ 2025ರ 28ನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಮೂಲಕ ಅವರು ಭರ್ಜರಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ ಯಾವುದೇ ಭಾರತೀಯ ಆಟಗಾರ ಮಾಡದ ದಾಖಲೆಯನ್ನು ಮಾಡಿದರು.
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನು ಗಳಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ ತಮ್ಮ 388ನೇ ಇನ್ನಿಂಗ್ಸ್‌ನಲ್ಲಿ ಈ ಸಾಧಬೆ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿ ವಿಶ್ವದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ಸ್ಪೋಟಕ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಇದ್ದಾರೆ. ವಾರ್ನರ್ ಅವರು ಇದುವರೆಗೆ ಟಿ20 ಕ್ರಿಕೆಟ್‌ನಲ್ಲಿ 399 ಪಂದ್ಯಗಳಲ್ಲಿ 108 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ವೇಳೆ ಅವರು 36.92 ಸರಾಸರಿಯಲ್ಲಿ 12925 ರನ್ ಕಲೆ ಹಾಕಿದ್ದಾರೆ.
ರನ್ ಗಳಿಸುವ ವಿಚಾರದಲ್ಲಿ ವಿರಾಟ್ ಕೊಹ್ಲಿ, ವಾರ್ನರ್‍ಗಿಂತ ಮುಂದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 36 ಬ್ಯಾಟರ್ಸ್ 13 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಇಬ್ಬರೂ ಬ್ಯಾಟರ್ಸ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗ ವಿರಾಟ್ ಕೊಹ್ಲಿ ಮಾತ್ರ ಐಪಿಎಲ್‌ನಲ್ಲಿ ಕೇವಲ ಟಿ2 ಪಂದ್ಯಗಳನ್ನು ಆಡುತ್ತಿದ್ದಾರೆ. ಮತ್ತೊಂದೆಡೆ ವಾರ್ನರ್ ಕೂಡ ವಿವಿಧ ಟಿ20 ಲೀಗ್‌ನಲ್ಲಿ ಆಡುವುದನ್ನು ಮುಂದುವರೆಸಿದ್ದಾರೆ.
ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 45 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ ಅಜೇಯ 62 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಆರ್‌ಸಿಬಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ರಾಜಸ್ಥಾನ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತು.
ರಾಜಸ್ಥಾನ ನೀಡಿದ್ದ 174 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ 15 ಎಸೆತಗಳು ಬಾಕಿ ಇರುವಂತೆಯೇ 1 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿ ಗೆಲುವು ಸಾಧಿಸಿತು. ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕಲ್ ಅಜೇಯರಾಗಿ ಉಳಿದು ತಂಡಕ್ಕೆ 9 ವಿಕೆಟ್‌ಗಳ ಜಯ ತಂದುಕೊಟ್ಟರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications