Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat kohli: ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆಯ ಕಿರೀಟಕ್ಕೆ ಮತ್ತೊಂದು ಗರಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಅವರು ತಮ್ಮ ದಾಖಲೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಸೃಷ್ಟಿಸಿರುವ ಈ ಅದ್ಭುತ ದಾಖಲೆಯ ಬಳಿಗೆ ವಿಶ್ವದ ಯಾವುದೇ ಬ್ಯಾಟರ್ ಬರಲು ಸಾಧ್ಯವಿಲ್ಲ.

ಗುರುವಾರ ನಡೆದ ಐಪಿಎಲ್ 2025 ರ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ 13 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 14 ಎಸೆತಗಳಲ್ಲಿ 22 ರನ್ ಗಳಿಸಿ ಹೊಸ ಮೈಲಿಗಲ್ಲು ಸಾಧಿಸಿದರು.

Virat Kohli creates record by completing 1000 boundary shots in IPL

ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಬೌಂಡರಿ ಮತ್ತು ಸಿಕ್ಸರ್ ಸೇರಿದಂತೆ 1000 ಬೌಂಡರಿ ಶಾಟ್‌ಗಳನ್ನು ಪೂರ್ಣಗೊಳಿಸಿದರು. ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಅವರು ಇತಿಹಾಸ ಸೃಷ್ಟಿಸಿದರು. ಇದುವರೆಗೆ ಆಡಿರುವ 18 ಐಪಿಎಲ್ ಸೀಸನ್‌ಗಳಲ್ಲಿ ಆಡಿದ ನಾಲ್ವರು ಆಟಗಾರರಲ್ಲಿ ಕೊಹ್ಲಿ ಒಬ್ಬರು. ಅವರು 257 ಐಪಿಎಲ್ ಪಂದ್ಯಗಳಲ್ಲಿ 721 ಬೌಂಡರಿ ಮತ್ತು 279 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಬರೆದಿದ್ದಾರೆ.

ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ 721 ಬೌಂಡರಿಗಳು ಮತ್ತು 280 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ತವರಿನ ಅಭಿಮಾನಿಗಳ ಮುಂದೆ ಅದ್ಭುತ ಸಿಕ್ಸರ್ ಬಾರಿಸುವ ಮೂಲಕ ದಾಖಲೆ ಪುಸ್ತಕದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡರು. ವಿರಾಟ್ ಕೊಹ್ಲಿ ಇದುವರೆಗೆ 257 ಐಪಿಎಲ್ ಪಂದ್ಯಗಳಲ್ಲಿ 38.82 ಸರಾಸರಿಯಲ್ಲಿ 8190 ರನ್ ಗಳಿಸಿದ್ದಾರೆ. ಇದಲ್ಲದೆ, ಐಪಿಎಲ್‌ನಲ್ಲಿ 8 ಶತಕಗಳು ಮತ್ತು 57 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಐಪಿಎಲ್‌ನಲ್ಲಿ ಹೆಚ್ಚು ಬೌಂಡರಿಗಳನ್ನು ಬಾರಿಸಿದವರು

ವಿರಾಟ್ ಕೊಹ್ಲಿ- 1001
ಶಿಖರ್ ಧವನ್- 920
ಡೇವಿಡ್ ವಾರ್ನರ್- 899
ರೋಹಿತ್ ಶರ್ಮಾ- 885

ಕೊಹ್ಲಿಯನ್ನು ಔಟ್ ಮಾಡಿದ್ದು ಯಾರು?

ವಿರಾಟ್ ಕೊಹ್ಲಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಲೆಗ್ ಸ್ಪಿನ್ನರ್ ವಿಪ್ರಜ್ ನಿಗಮ್ ಔಟ್ ಮಾಡಿದರು. ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಕುಲದೀಪ್ ಯಾದವ್ ಮತ್ತು ವಿಪ್ರಾಜ್ ನಿಗಮ್ ಸ್ಪಿನ್ ಜೋಡಿ ಮಿಂಚಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಈ ಜೋಡಿ ಕಟ್ಟಿ ಹಾಕಿದರು. ಇದಾದ ನಂತರ ಬ್ಯಾಟಿಂಗ್‌ನಲ್ಲಿ ಕೆಎಲ್ ರಾಹುಲ್ 53 ಎಸೆತಗಳಲ್ಲಿ 93 ರನ್‌ಗಳನ್ನು ಕಲೆ ಹಾಕುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಗೆಲುವು ದಡ ಸೇರಿಸಿದರು.

Story first published: Friday, April 11, 2025, 9:19 [IST]
Other articles published on Apr 11, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+