Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ಎರಡನೇ ಪಂದ್ಯಕ್ಕೂ ಮುನ್ನ ಎದುರಾಳಿಗಳಿಗೆ ಟೆನ್ಷನ್‌ ಹೆಚ್ಚಿಸುವ ಸುದ್ದಿ

ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಒಂದು ಸಿಕ್ಕಿದೆ. ಭಾನುವಾರ ನಡೆಯುವ ಪಂದ್ಯ ಟೀಮ್ ಇಂಡಿಯಾ ಪಾಲಿಗೆ ಮಹತ್ವದಾಗಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ಗುರಿಯನ್ನು ಹೊಂದಿದೆ. ಈ ಮುನ್ನ ಟೀಮ್ ಇಂಡಿಯಾ ಕ್ಯಾಂಪ್‌ನಿಂದ ಬಂದಿರುವ ಸುದ್ದಿ ನಿಜಕ್ಕೂ ಎದುರಾಳಿ ತಂಡದ ನಿದ್ದೆ ಗೆಡಿಸಿದೆ.

ಈಗಾಗಲೇ ಟೀಮ್ ಇಂಡಿಯಾ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಟೀಮ್ ಇಂಡಿಯಾ ಪರ ಮೊದಲ ಏಕದಿನ ಪಂದ್ಯದಲ್ಲಿ ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಮೈದಾನಕ್ಕೆ ಇಳಿದಿರಲಿಲ್ಲ. ಅವರ ಕಾಲಿಗೆ ಗಾಯವಾಗಿದ್ದರಿಂದ ಮೊದಲ ಪಂದ್ಯದಿಂದ ದೂರ ಉಳಿದಿದ್ದರು. ಕಟಕ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಸೂಪರ್‌ ಸ್ಟಾರ್ ವಿರಾಟ್‌ ಕೊಹ್ಲಿ ಮತ್ತೆ ಅಖಾಡಕ್ಕೆ ಇಳಿಯಲಿದ್ದಾರೆ.

Virat Kohli Declared Fit for Second ODI Against England Confirms Batting Coach

ವಿರಾಟ್ ಕೊಹ್ಲಿ ಅವರ ಗಾಯದ ಬಗ್ಗೆ ಟೀಮ್ ಇಂಡಿಯಾ ಬ್ಯಾಟಿಂಗ್ ಕೋಚ್‌ ಸೀತಾಂಶು ಕೊಟಕ್ ಮೌನ ಮುರಿದಿದ್ದಾರೆ. ಭಾನುವಾರ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್‌ ಮೈದಾನಕ್ಕೆ ಪ್ರವೇಶಿಸಲಿದ್ದಾರೆ ಎಂದು ಬ್ಯಾಟಿಂಗ್ ಕೋಚ್ ಬಹಿರಂಗ ಪಡಿಸಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಎಂದಿನಂತೆ ಬಂದು ಬ್ಯಾಟಿಂಗ್ ಅಭ್ಯಾಸವನ್ನ ನಡೆಸಿದ್ದಾರೆ. ಇನ್ನು ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಏನಾಗಿರಲಿದೆ ಎಂಬುದರ ಬಗ್ಗೆ ಸ್ಪಷ್ಟತೆ ನೀಡಲಿಲ್ಲ. ಇನ್ನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಶಸ್ವಿ ಜೈಸ್ವಾಲ್‌ ಹಾಗೂ ಶ್ರೇಯಸ್ ಅಯ್ಯರ್ ಯಾರಿಗೆ ರೆಸ್ಟ್‌ ನೀಡಲಾಗುತ್ತದೆ ಎಂದು ಇನ್ನು ಸ್ಪಷ್ಟ ಪಡಿಸಿದರು.

Story first published: Saturday, February 8, 2025, 20:52 [IST]
Other articles published on Feb 8, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+