ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs RR: ಮತ್ತೊಂದು ಪಂದ್ಯದಲ್ಲಿ ಕೊಹ್ಲಿ ವಿಫಲ: ರಣಜಿ ಆಡುವಂತೆ ಸಲಹೆ ನೀಡಿದ ಅಭಿಮಾನಿಗಳು!

Virat Kohli dismissed cheaply against Rajasthan Royals in IPL qualifier: twitter reaction

ಐಪಿಎಲ್ 15ನೇ ಆವೃತ್ತಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡ ಮುಖಾಮುಖಿಯಾಗಿದ್ದು ಆರ್‌ಸಿಬಿ ಮೊದಲಿ ಬ್ಯಾಟಿಂಗ್ ನಡೆಸಿದೆ. ಈ ಪಂದ್ಯದಲ್ಲಿಯೂ ಆರ್‌ಸಿಬಿ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ವಿಫಲವಾಗಿದ್ದು ಅಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡಿದ್ದಾರೆ. 8 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 7 ರನ್‌ಗಳನ್ನು ಗಳಿಸಲು ಮಾತ್ರವೇ ಶಕ್ತವಾದರು.

ಇದಕ್ಕೂ ಹಿಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿಯಿಂದ ಗಮನಾರ್ಹ ಪ್ರದರ್ಶನ ಬಂದಿರಲಿಲ್ಲ. ಮೊದಲ ಕ್ವಾಲಿಫೈಯರ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೊಹ್ಲಿ 24 ಎಸೆತಗಳನ್ನು ಎದುರಿಸಿ 25 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡಿದ್ದರು. ರಜತ್ ಪಾಟಿದಾರ್ ಶತಕ ಹಾಗೂ ದಿನೇಶ್ ಕಾರ್ತಿಕ್ ಅದ್ಭುತ ಪ್ರದರ್ಶನ ನೀಡಿದ ಕಾರಣ ಆರ್‌ಸಿಬಿ ಬೃಹತ್ ಮೊತ್ತವನ್ನು ಗಳಿಸಿ ತಂಡದ ಗೆಲುವಿಗೆ ಕಾರಣವಾಗಿದ್ದರು.

RCB vs RR: ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಈ ತಂಡಕ್ಕೆ ಸೋಲಿನ ಭೀತಿ ಇದೆ ಎಂದ ಸ್ಮಿತ್RCB vs RR: ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಈ ತಂಡಕ್ಕೆ ಸೋಲಿನ ಭೀತಿ ಇದೆ ಎಂದ ಸ್ಮಿತ್

ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನಾಗಿದ್ದಾರೆ. ಆದರೆ ಈ ಬಾರಿಯ ಐಪಿಎಲ್‌ನಲ್ಲ ಕೊಹ್ಲಿ ಅಗ್ರ ಕ್ರಮಾಂಕದಲ್ಲಿ ಕಣಕ್ಕಿಳಿದರೂ ಹೆಚ್ಚಿನ ರನ್‌ಗಳಿಸಲು ವಿಫಲವಾಗಿದ್ದಾರೆ. ಈ ಆವೃತ್ತಿಯಲ್ಲಿ ಆಡಿದ ಪಂದ್ಯಗಳಲ್ಲಿ ಕೊಹ್ಲಿ ಎರಡು ಅರ್ಧ ಶತಕಗಳನ್ನು ಮಾತ್ರವೇ ಗಳಿಸಿದ್ದಾರೆ.

ಈ ಆವೃತ್ತಿ ಆರ್‌ಸಿಬಿಯ ಮಾಜಿ ನಾಯಕನ ಪಾಲಿಗೆ ಅಕ್ಷರಶಃ ದುಸ್ವಪ್ನದಂತೆ ಕಾಡಿದೆ. ಈ ಆವೃತ್ತಿಯಲ್ಲಿ ಈವರೆಗೆ ಆಡಿದ 16 ಪಂದ್ಯಗಳಲ್ಲಿ ಕೊಹ್ಲಿ ಮೂರು ಬಾರಿ ಗೋಲ್ಡನ್ ಡಕ್‌ಗೆ ಔಟಾಗಿದ್ದಾರೆ. ಎರಡು ಅರ್ಧ ಶತಕ ಗಳಿಸಿದ್ದರೂ ಅದರಲ್ಲಿ ಒಂದು ಅರ್ಧ ಶತಕ ಐಪಿಎಲ್‌ನ ಅತ್ಯಂತ ನಿಧಾನಗತಿಯ ಅರ್ಧ ಶತಕ ಎನಿಸಿಕೊಂಡಿದೆ. ಆದರೆ ಲೀಗ್‌ ಪಂದ್ಯದಲ್ಲಿ ಆರ್‌ಸಿಬಿ ಪಾಲಿಗೆ ನಿರ್ಣಾಯಕವಾಗಿದ್ದ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನಿಡಿದ್ದರು. ಈ ಪಂದ್ಯದಲ್ಲಿ 73 ರನ್‌ಗಳನ್ನು ಬಾರಿಸಿದ್ದರು ಕೊಹ್ಲಿ.

ಇನ್ನು ವಿರಾಟ್ ಕೊಹ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ನೀಡಿದ ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಟ್ವಿಟ್ಟರ್‌ನಲ್ಲಿ ಕೊಹ್ಲಿ ಪ್ರದರ್ಶನಕ್ಕೆ ಕೆಲ ಕ್ರಿಕೆಟ್ ಪ್ರೇಮಿಗಳು ಕಟುವಾಗಿ ಟೀಕಿಸಿ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ. ಕಳೆದುಕೊಂಡಿರುವ ಫಾರ್ಮ್ ಮರಳಿ ಗಳಿಸಲು ರಣಜಿ ಆಡುವಂತೆ ಸಲಹೆಗಳನ್ನು ನೀಡಿದ್ದಾರೆ.

LSG vs RCB: ದಿನೇಶ್ ಕಾರ್ತಿಕ್ ಕ್ಯಾಚ್‌ ಬಿಟ್ಟ ಕೆಎಲ್ ರಾಹುಲ್; ತಾಳ್ಮೆ ಕಳೆದುಕೊಂಡ ಗೌತಮ್ ಗಂಭೀರ್LSG vs RCB: ದಿನೇಶ್ ಕಾರ್ತಿಕ್ ಕ್ಯಾಚ್‌ ಬಿಟ್ಟ ಕೆಎಲ್ ರಾಹುಲ್; ತಾಳ್ಮೆ ಕಳೆದುಕೊಂಡ ಗೌತಮ್ ಗಂಭೀರ್

ರಾಜಸ್ಥಾನ್ ರಾಯಲ್ಸ್ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಹಾಲ್
ಬೆಂಚ್: ಕರುಣ್ ನಾಯರ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕಾರ್ಬಿನ್ ಬಾಷ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಡೇರಿಲ್ ಮಿಚೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ ಜುರೆಲ್, ಶುಭಂ ಗರ್ವಾ

ಆರ್‌ಸಿಬಿ ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ಬೆಂಚ್: ಆಕಾಶ್ ದೀಪ್, ಅನೀಶ್ವರ್ ಗೌತಮ್, ಶೆರ್ಫೇನ್ ರುದರ್ಫೋರ್ಡ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ಚಾಮ ವಿ ಮಿಲಿಂದ್, ಜೇಸನ್ ಬೆಹ್ರೆನ್ಡಾರ್ಫ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಫಿನ್ ಅಲೆನ್, ಸಿದ್ದಾರ್ಥ್ ಕೌಲ್

Story first published: Saturday, May 28, 2022, 9:44 [IST]
Other articles published on May 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X