For Quick Alerts
ALLOW NOTIFICATIONS  
For Daily Alerts
 

Virat Kohli: ಚಿಕ್ಕ ಇನಿಂಗ್ಸ್‌ ಆಡಿ ದೊಡ್ಡ ದಾಖಲೆ ಬರೆದ ವಿರಾಟ್ ಕೊಹ್ಲಿ

ಟೀಮ್ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ತಂಡ ಅಮೋಘ ಜಯ ದಾಖಲಿಸಿದೆ. ಕಾನ್ಪುರ ಟೆಸ್ಟ್‌ ಪಂದ್ಯವನ್ನು ಏಳು ವಿಕೆಟ್‌ಗಳಿಂದ ಗೆದ್ದ ರೋಹಿತ್‌ ಪಡೆ ಇತಿಹಾಸ ನಿರ್ಮಿಸಿದೆ. ಈ ಮೂಲಕ ಅತಿ ಹೆಚ್ಚು ಟೆಸ್ಟ್‌ ಪಂದ್ಯಗಳನ್ನು ಗೆದ್ದ ನಾಲ್ಕನೇ ತಂಡ ಎಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇದೇ ವೇಳೆ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್‌ ವಿರಾಟ್‌ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.

ಬಾಂಗ್ಲಾದೇಶದ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ ರನ್‌ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದ ವಿರಾಟ್ ಕೊಹ್ಲಿ, ಎರಡನೇ ಟೆಸ್ಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದರು. ಮೊದಲ ಇನಿಂಗ್ಸ್‌ನಲ್ಲಿ 47 ರನ್‌ ಬಾರಿಸಿದ್ದ ರನ್‌ ಮಷೀನ್‌, ಎರಡನೇ ಇನಿಂಗ್ಸ್‌ನಲ್ಲಿ ಅಜೇಯ 29 ರನ್‌ ಸಿಡಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಬ್ಯಾಟರ್‌ ಅಮೋಘ ಸಾಧನೆ ಮಾಡಿದ್ದಾರೆ.

Virat Kohli Enters Elite Club Becomes Fifth Indian to Hit 1000 Fours in Test Cricket

27 ಸಾವಿರ ರನ್‌ ಸರದಾರ

ಎರಡನೇ ಟೆಸ್ಟ್‌ ಪಂದ್ಯವನ್ನು ಗೆಲ್ಲಲು ಬಾಂಗ್ಲಾದೇಶ ನೀಡಿದ್ದ 95 ರನ್‌ಗಳ ಗುರಿಯನ್ನು ಟೀಮ್ ಇಂಡಿಯಾ ಮೂರು ವಿಕೆಟ್‌ ಕಳೆದುಕೊಂಡು ಮುಟ್ಟಿತು. ಈ ಮೂಲಕ ತವರಿನಲ್ಲಿ ಸತತ 18ನೇ ಸರಣಿ ಗೆಲುವಿನ ನಗೆ ಬೀರಿದೆ. ವಿರಾಟ್‌ ಕೊಹ್ಲಿ ಮೊದಲ ಇನಿಂಗ್ಸ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27 ಸಾವಿರ ರನ್‌ ಪೂರೈಸಿದ ದಾಖಲೆ ಬರೆದಿದ್ದರು. ಈ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ವೇಗವಾಗಿ ಈ ಸಾಧನೆ ಮಾಡಿದ ಬ್ಯಾಟರ್‌ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದರು.

ವಿಶಿಷ್ಠ ದಾಖಲೆ ಬರೆದ ವಿರಾಟ್

ಎರಡನೇ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಪರ ವಿರಾಟ್ ಕೊಹ್ಲಿ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 37 ಎಸೆತಗಳಲ್ಲಿ 4 ಬೌಂಡರಿ ಸೇರಿದಂತೆ ಅಜೇಯ 29 ರನ್‌ ಬಾರಿಸಿ ತಂಡದ ಗೆಲುವಿನಲ್ಲಿ ಮಹತ್ವದ ಕೊಡುಗೆ ನೀಡಿದರು. ಈ ಪಂದ್ಯದಲ್ಲಿ ವಿರಾಟ್‌ ಮೂರನೇ ಬೌಂಡರಿ ಬಾರಿಸುತ್ತಿದ್ದಂತೆ, ವಿಶಿಷ್ಠ ದಾಖಲೆಯನ್ನು ನಿರ್ಮಿಸಿದರು.

Virat Kohli Enters Elite Club Becomes Fifth Indian to Hit 1000 Fours in Test Cricket

ಟೆಸ್ಟ್‌ ಕ್ರಿಕೆಟ್‌ನಲ್ಲಿ 1000 ಬೌಂಡರಿಗಳನ್ನು ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಭಾರತದ ಐದನೇ ಬ್ಯಾಟರ್‌ ಎಂಬ ಹೆಗ್ಗಳಿಕೆ ವಿರಾಟ್ ಅವರದ್ದಾಗಿದೆ. ಇವರಿಗಿಂತ ಮೊದಲು ಈ ಸಾಧನೆಯನ್ನು ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವೀರೇಂದ್ರ ಸೆಹ್ವಾಗ್ ಮತ್ತು ವಿವಿಎಸ್ ಲಕ್ಷ್ಮಣ್ ಮಾತ್ರ ಈ ಸಾಧನೆ ಮಾಡಿದ್ದಾರೆ.

ಸಚಿನ್‌ಗೆ ಅಗ್ರ ಸ್ಥಾನ

ಭಾರತದ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಕೀರ್ತಿ ದಿಗ್ಗಜ ಬ್ಯಾಟರ್‌ ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲುತ್ತದೆ. ಇವರು ಒಟ್ಟು 2058 ಬೌಂಡರಿ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಕನ್ನಡಿಗ ರಾಹುಲ್ ದ್ರಾವಿಡ್ ನಿಲ್ಲುತ್ತಾರೆ. ಇವರು 1654 ಬೌಂಡರಿ ಸಿಡಿಸಿದ್ದಾರೆ. 1233 ಬೌಂಡರಿ ಬಾರಿಸುವ ಮೂಲಕ ವೀರೇಂದ್ರ ಸೆಹ್ವಾಗ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಟೆಸ್ಟ್‌ ಸ್ಪೆಷಲಿಸ್ಟ್‌ ಬ್ಯಾಟರ್‌ ವಿವಿಎಸ್ ಲಕ್ಷ್ಮಣ್ ಟೆಸ್ಟ್‌ ಕ್ರಿಕೆಟ್‌ನಲ್ಲಿ ಒಟ್ಟು 1135 ಬೌಂಡರಿ ಬಾರಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ, ಕೊಹ್ಲಿಗಿಂತ ಮೊದಲು ಕೇವಲ 25 ಬ್ಯಾಟ್ಸ್‌ಮನ್‌ಗಳು ಮಾತ್ರ 1000 ಟೆಸ್ಟ್ ಬೌಂಡರಿಗಳನ್ನು ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಈಗ ಈ ವಿಶೇಷ ಪಟ್ಟಿಗೆ ವಿರಾಟ್‌ ಹೆಸರು ಸೇರಿದೆ. 115 ಟೆಸ್ಟ್ ಪಂದ್ಯಗಳ 195ನೇ ಇನ್ನಿಂಗ್ಸ್‌ನಲ್ಲಿ ಕೊಹ್ಲಿ ಈ ವಿಶೇಷ ಸಾಧನೆ ಮಾಡಿದ್ದಾರೆ.

Story first published: Tuesday, October 1, 2024, 16:11 [IST]
Other articles published on Oct 1, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+