For Quick Alerts
ALLOW NOTIFICATIONS  
For Daily Alerts
 

ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

Virat Kohli Equals Rohit Sharmas Record For Most Half-Centuries In T20Is

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ 85 ರನ್‌ಗಳನ್ನು ಬಾರಿಸಿದರು. ಆದರೆ ಈ ಆಟ ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಗಲಿಲ್ಲ. ಆದರೆ ಅಂತಿಮ ಪಂದ್ಯದಲ್ಲಿ ಸಿಡಿಸಿದ ಅರ್ಧ ಶತಕ ಟಿ20 ಕ್ರಿಕೆಟ್‌ನಲ್ಲಿ ಮಹತ್ವದ ಮೈಲಿಗಲ್ಲೊಂದಕ್ಕೆ ಕಾರಣವಾಗಿದೆ.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಅರ್ಧ ಶತಕ ದಾಖಲಿಸುವ ಮೂಲಕ ರೋಹಿತ್ ಶರ್ಮಾ ಟಿ20 ಅರ್ಧ ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 25ನೇ ಅರ್ಧ ಶತಕ ದಾಖಲಿಸಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ 25ನೇ ಅರ್ಧಶತಕವನ್ನು 79ನೇ ಇನ್ನಿಂಗ್ಸ್‌ನಲ್ಲಿ ದಾಖಲಿಸಿದ್ದಾರೆ. ಆದರೆ ಚುಟುಕು ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಈ ಸಾಧನೆಯನ್ನು ಮಾಡಲು 100 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ನಂತರದ ಸ್ಥಾನದಲ್ಲಿದ್ದು 19 ಅರ್ಧ ಶತಕಗಳನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ.

ಸೀಮಿತ ಓವರ್‌ಗಳ ಸರಣಿಯಲ್ಲಿ ಆಸ್ಟ್ರೇಲಿಯಾ ಏಕದಿನ ಸರಣಿಯನ್ನು ವಶಕ್ಕೆ ಪಡೆದುಕೊಂಡರೆ ಟೀಮ್ ಇಂಡಿಯಾ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಇದೀಗ ಎರಡು ತಂಡಗಳು ಕೂಡ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯತ್ತ ದೃಷ್ಟಿ ನೆಟ್ಟಿದ್ದು ಅಭಿಮಾನಿಗ ವಲಯದಲ್ಲೂ ಸಾಕಷ್ಟು ಕುತೂಹಲವನ್ನು ಮೂಡಿಸಿದೆ.

ಮೊದಲ ಟೆಸ್ಟ್ ಪಂದ್ಯ ಅಡಿಲೇಡ್‌ನಲ್ಲಿ ಡಿಸೆಂಬರ್ 17ರಂದು ನಡೆಯಲಿದ್ದು ಈ ಪಂದ್ಯ ಅಹರ್ನಿಶಿಯಾಗಿ ಸಾಗಲಿದೆ. ಈ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಲಭ್ಯವಾಗುವ ಬಗ್ಗೆ ಇನ್ನೂ ಸ್ಪಷ್ಟತೆಗಳು ದೊರೆತಿಲ್ಲ. ಸೀಮಿತ ಓವರ್‌ಗಳ ಸರಣಿಯಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಸದ್ಯ ಬೆಂಗಳೂರಿನ ಎನ್‌ಸಿಎನಲ್ಲಿ ಫಿಟ್‌ನೆಸ್ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ.

Story first published: Wednesday, December 9, 2020, 19:50 [IST]
Other articles published on Dec 9, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+