ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ನಾಯಕತ್ವಕ್ಕೆ ವಿರಾಟ್ ವಿದಾಯ: ಈ ಮೂವರಲ್ಲಿ ಯಾರಾಗ್ತಾರೆ ಟೀಮ್ ಇಂಡಿಯಾ ನಾಯಕ

Virat Kohli era ends in T20I; Who will be Indias new skipper? Rohit Sharma, KL Rahul or Rishabh Pant?

ಬೆಂಗಳೂರು, ಸೆಪ್ಟೆಂಬರ್ 16: ಟೀಮ್ ಇಂಡಿಯಾದ ಮೂರು ಮಾದರಿಗಳ ನಾಯಕ ವಿರಾಟ್ ಕೊಹ್ಲಿ ಗುರುವಾರ ನಾಯಕತ್ವದ ವಿಚಾರವಾಗಿ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ನ ನಂತರ ಟಿ20 ನಾಯಕತ್ವವನ್ನು ತಾನು ತೊರೆಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸುವ ವಿಚಾರವಾಗಿ ಸಾಕಷ್ಟು ಊಹಾಪೋಹಗಳು ಇತ್ತೀಚೆಗೆ ಹೆಚ್ಚಾಗಿತ್ತು. ಇದೀಗ ವಿರಾಟ್ ಕೊಹ್ಲಿ ಈ ಎಲ್ಲಾ ಸುದ್ದಿಗಳಿಗೂ ಅಧಿಕೃತವಾಗಿ ಪೂರ್ಣವಿರಾಮವಿಟ್ಟಿದ್ದಾರೆ.

ಕೊಹ್ಲಿ 45 ಟಿ 20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿರುವ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ 27 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 14 ಪಂದ್ಯಗಳಲ್ಲಿ ಸೋಲು ಕಂಡಿದೆ. ಎರಡು ಪಂದ್ಯಗಳು ಟೈ ಫಲಿತಾಂಶ ಪಡೆದುಕೊಂಡಿದ್ದರೆ ಎರಡು ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯವಾಗಿದೆ. ಕೊಹ್ಲಿ ಭಾರತದ ಎರಡನೇ ಅತ್ಯಂತ ಯಶಸ್ವಿ ಟಿ 20 ನಾಯಕನಾಗಿದ್ದು ಮೊದಲ ಸ್ಥಾನದಲ್ಲಿ ಎಂಎಸ್ ಧೋನಿಯಿದ್ದಾರೆ. ಎಂಎಸ್ ಧೋನಿ ಭಾರತವನ್ನು 72 ಪಂದ್ಯಗಳಲ್ಲಿ ನಾಯಕನಾಗಿ ಮುನ್ನಡೆಸಿದ್ದು 42 ಗೆಲುವು ಸಾಧಿಸಿದ್ದಾರೆ.

ಟಿ20 ನಾಯಕತ್ವದಿಂದ ಕೆಳಗಿಳಿಯಲು ವಿರಾಟ್ ಕೊಹ್ಲಿ ನಿರ್ಧಾರ!ಟಿ20 ನಾಯಕತ್ವದಿಂದ ಕೆಳಗಿಳಿಯಲು ವಿರಾಟ್ ಕೊಹ್ಲಿ ನಿರ್ಧಾರ!

ಮುಂದಿನ ತಿಂಗಳು ನಡೆಯುವ ಟಿ20 ವಿಶ್ವಕಪ್‌ನ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯಲಿದ್ದಾರೆ. ಆದರೆ ಕೊಹ್ಲಿಯ ನಂತರ ಭಾರತದ ಟಿ 20 ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಸದ್ಯಕ್ಕೆ ಅಧಿಕೃತವಾಗಿ ಉತ್ತರಗಳು ಲಭ್ಯವಿಲ್ಲ. ಹಾಗಾದರೆ ಟ20 ನಾಯಕನಾಗುವ ಅವಕಾಶಗಳು ಯಾರಿಗೆಲ್ಲಾ ಇದೆ? ಮುಂದೆ ಓದಿ..

1. ರೋಹಿತ್ ಶರ್ಮಾ: ವಿರಾಟ್ ಕೊಹ್ಲಿ ನಾಯಕತ್ವದ ಬಳಿಕ ರೋಹಿತ್ ಶರ್ಮಾ ಭಾರತದ ಟಿ20 ನಾಯಕನಾಗುವ ಸಾಧ್ಯತೆ ಇದೆ. ರೋಹಿತ್ ಮುಂಬೈ ಇಂಡಿಯನ್ಸ್ ನಾಯಕನಾಗಿ ಐಪಿಎಲ್‌ನಲ್ಲಿ ಅದ್ಭುತ ನಾಯಕತ್ವದ ದಾಖಲೆಯನ್ನು ಹೊಂದಿದ್ದಾರೆ. ಬಲಗೈ ಆರಂಭಿಕ ಆಟಗಾರ 2013ರಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದು 5 ಬಾರಿ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದು ದಾಖಲೆ ಬರೆದಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಐಪಿಎಲ್‌ನ ಅತ್ಯಂತ ಯಶಸ್ವಿ ತಂಡವನ್ನಾಗಿಸಿದ್ದಾರೆ.

ಟಿ20 ನಾಯಕತ್ವಕ್ಕೆ ವಿರಾಟ್ ವಿದಾಯ: ರೋಹಿತ್ ಹೊರತು ಬೇರೆ ಆಯ್ಕೆ ಇಲ್ಲ ಎನ್ನುತ್ತಿವೆ ಈ ಅಂಕಿಅಂಶಗಳುಟಿ20 ನಾಯಕತ್ವಕ್ಕೆ ವಿರಾಟ್ ವಿದಾಯ: ರೋಹಿತ್ ಹೊರತು ಬೇರೆ ಆಯ್ಕೆ ಇಲ್ಲ ಎನ್ನುತ್ತಿವೆ ಈ ಅಂಕಿಅಂಶಗಳು

34ರ ಹರೆಯದ ರೋಹಿತ್ ಶರ್ಮಾ ತಾನೋರ್ವ ಸ್ವಾಭಾವಿಕ ನಾಯಕ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ. ಅಲ್ಲದೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಶ್ರೇಷ್ಠಾಟಗಾರರಲ್ಲಿ ಒಬ್ಬರೆನಿಸಿದ್ದಾರೆ ರೋಹಿತ್. ಮೂರು ಮಾದರಿಯ ಕ್ರಿಕೆಟ್‌ನಲ್ಲಿಯೂ ಶತಕಗಳಿಸಿದ ಕೆಲವೇ ಆಟಗಾರರ ಪೈಕಿ ರೋಹಿತ್ ಶರ್ಮಾ ಕೂಡ ಒಬ್ಬರಾಗಿದ್ದಾರೆ. ಈಗಾಗಲೇ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ 19 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದು 15 ಪಂದ್ಯಗಳಲ್ಲಿ ಗೆಲುವಿನ ದಾಖಲೆ ಹೊಂದಿದ್ದು ನಾಲ್ಕು ಪಂದ್ಯಗಳಲ್ಲಿ ಮಾತ್ರವೇ ಸೋಲು ಕಂಡಿದ್ದಾರೆ.

ಹಳೆ ಯುಜಿ ವಾಪಸ್ಸಾಗ್ತಾರೆ: ಉತ್ತಮ ಪ್ರದರ್ಶನದ ಭರವಸೆಯಿತ್ತ ಚಾಹಲ್ಹಳೆ ಯುಜಿ ವಾಪಸ್ಸಾಗ್ತಾರೆ: ಉತ್ತಮ ಪ್ರದರ್ಶನದ ಭರವಸೆಯಿತ್ತ ಚಾಹಲ್

2. ಕೆಎಲ್ ರಾಹುಲ್: ಕರ್ನಾಟಕ ಮೂಲದ ಕೆಎಲ್ ರಾಹುಲ್ ಎಲ್ಲಾ ಮಾದರಿಯಲ್ಲಿಯೂ ಟೀಮ್ ಇಂಡಿಯಾದ ಪ್ರಮುಖ ಆಟಗಾರನಾಗಿದ್ದಾರೆ. ಅದರಲ್ಲೂ ಸೀಮಿತ ಓವರ್‌ಗಳಲ್ಲಿ ಸುದೀರ್ಘ ಕಾಲದಿಂದ ಟೀಮ್ ಇಂಡಿಯಾದ ಪ್ರಮುಖ ಸದಸ್ಯನಾಗಿದ್ದಾರೆ. ಭವಿಷ್ಯದಲ್ಲಿ ನಾಯಕತ್ವದ ಜವಾಬ್ಧಾರಿ ವಹಿಸಿಕೊಳ್ಳುವ ಎಲ್ಲಾ ಅರ್ಹತೆಯೂ ಕೆಎಲ್ ರಾಹುಲ್‌ಗೆ ಇದೆ. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದು ತಮ್ಮ ಶಾಂತಚಿತ್ತ ಮನಸ್ಥಿತಿಯಿಂದ ಮನಗೆದ್ದಿದ್ದಾರೆ. ರೋಹಿತ್ ಶರ್ಮಾ ಹೊರತುಪಡಿಸಿದರೆ ಕೆಎಲ್ ರಾಹುಲ್ ನಾಯಕನ ಸ್ಥಾನಕ್ಕೆ ಉತ್ತಮ ಆಯ್ಕೆಯಾಗಬಲ್ಲರು ಎಂಬುದರಲ್ಲಿ ಅನುಮಾನವಿಲ್ಲ.

ಆರ್‌ಸಿಬಿ ಸೇರಿ ಐಪಿಎಲ್ ತಂಡಗಳಿಗೆ ಪ್ರಮುಖ 5 ಸಲಹೆಗಳಿತ್ತ ಆಕಾಶ್ ಚೋಪ್ರಾ!ಆರ್‌ಸಿಬಿ ಸೇರಿ ಐಪಿಎಲ್ ತಂಡಗಳಿಗೆ ಪ್ರಮುಖ 5 ಸಲಹೆಗಳಿತ್ತ ಆಕಾಶ್ ಚೋಪ್ರಾ!

ಕೊಹ್ಲಿ ನಂತರ ರೋಹಿತ್ ಮಾತ್ರ ಅಲ್ಲ ನಾಯಕತ್ವದ ರೇಸ್ ನಲ್ಲಿರೋ ಈ ಮೂವರು ಯಾರು? | Oneindia Kannada

3. ರಿಷಭ್ ಪಂತ್: ಟೀಮ್ ಇಂಡಿಯಾದ ಈ ಯುವ ಬ್ಯಾಟ್ಸ್‌ಮನ್ ತಾನೋರ್ವ ಅದ್ಭುತ ಆಟಗಾರ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ. ಅಲ್ಲದೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ತಂಡದ ಖಾಯಂ ಸದಸ್ಯನೂ ಆಗಿದ್ದಾರೆ. ಸಣ್ಣ ವಯಸ್ಸಿನ ಆಟಗಾರನಾಗಿರುವ ಕಾರಣದಿಂದಾಗಿ ಸುದೀರ್ಘ ಕಾಲಕ್ಕೆ ನಾಯಕತ್ವ ನಿಭಾಯಿಸುವಂತಾ ಆಟಗಾರನ್ನು ಆಯ್ಕೆ ಮಾಡಲು ಬಯಸಿದರೆ ರಿಷಬ್ ಪಂತ್ ಹೆಸರು ಕುಡ ಚರ್ಚೆಯಾಗಲಿದೆ. ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಶ್ರೇಯಸ್ ಐಯ್ಯರ್ ಅಲಭ್ಯತೆಯಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವ ವಹಿಸಿಕೊಂಡು ಮೊದಲಾರ್ಧದಲ್ಲಿ ಉತ್ತಮ ಯಶಸ್ಸು ಸಾಧಿಸಿದ್ದಾರೆ. ಎರಡನೇ ಭಾಗದಲ್ಲಿ ಶ್ರೇಯಸ್ ಐಯ್ಯರ್ ಪುನರಾಗಮನ ಮಾಡಿದರೂ ರಷಭ್ ಪಂತ್ ಈ ಬಾರಿಯ ಐಪಿಎಲ್‌ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಮ್ಯಾನೇಜ್‌ಮೆಂಟ್ ಈಗಾಗಲೇ ಘೋಷಣೆ ಮಾಡಿದೆ.

Story first published: Friday, September 17, 2021, 10:13 [IST]
Other articles published on Sep 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X