For Quick Alerts
ALLOW NOTIFICATIONS  
For Daily Alerts
 

Virat Kohli: ವಿರಾಟ್ ಕೊಹ್ಲಿ ಮೆಲ್ಬೋರ್ನ್‌ನಲ್ಲಿ ಫಾರ್ಮ್‌ಗೆ ಮರಳುವ ನಿರೀಕ್ಷೆ!

ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಕೊಹ್ಲಿಯ ಫ್ಲಾಪ್ ಶೋ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಟೆನ್ಶನ್ ಹೆಚ್ಚಿಸಿದೆ. ಮುಂದಿನ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಖಂಡಿತವಾಗಿಯೂ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳುವ ಸಾಧ್ಯತೆಯಿದೆ. ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ವಿರಾಟ್ ಅಬ್ಬರ ಅಷ್ಟರ ಮಟ್ಟಿಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಆಸ್ಟ್ರೇಲಿಯಾ ನೆಲದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಅಬ್ಬರಿ ಕಡಿಮೆ ಇಲ್ಲ. ಅದರಲ್ಲೂ ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಿದ್ದು, ಅದ್ಭುತ ಬ್ಯಾಟಿಂಗ್ ಅಂಕಿ-ಅಂಶಗಳನ್ನು ಹೊಂದಿದ್ದಾರೆ. ಮೆಲ್ಬೋರ್ನ್‌ ಅಂಗಳದಲ್ಲಿ ವಿರಾಟ್ ಕೊಹ್ಲಿ ಅವರ ಒಂದು ಕ್ರಿಕೆಟ್ ಅಭಿಮಾನಿಗಳಲ್ಲಿ ಸದಾ ನೆನಪಿನಲ್ಲಿರುತ್ತದೆ.

Virat Kohli expected to return to form in Melbourne

ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕೊಹ್ಲಿ ಅಬ್ಬರಿಸಿದ್ದರು. ಈ ಪಂದ್ಯವೂ ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ನಡೆದಿತ್ತು. ಭಾರತ ತಂಡದ ವಿಕೆಟ್‌ಗಳಳು ಬೀಳುತ್ತಿದ್ದರೆ, ವಿರಾಟ್ ಕೊಹ್ಲಿ ಏಕಾಂಗಿಯಾಗಿ ಕ್ರೀಸ್‌ನಲ್ಲಿ ನಿಂತು ಭಾರತಕ್ಕೆ ರೋಚಕ ಗೆಲುವು ತಂದು ಕೊಟ್ಟಿದ್ದರು. ಆ ಸಮಯದಲ್ಲಿಯೂ ಕೊಹ್ಲಿ ಕಳಪೆ ಫಾರ್ಮ್‌ನೊಂದಿಗೆ ಹೋರಾಡುತ್ತಿದ್ದರು. ಆದರೆ ಮಹತ್ವದ ಪಂದ್ಯದಲ್ಲಿ ಅವರು ಅದ್ಭುತ ಬ್ಯಾಟಿಂಗ್ ಮಾಡುವ ಮೂಲಕ ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದರು. ಪಾಕಿಸ್ತಾನ ವಿರುದ್ಧ ಅಜೇಯ 82 ರನ್ ಗಳಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದರು. ಮೆಲ್ಬೋರ್ನ್‌ನಲ್ಲಿ ಕೊಹ್ಲಿ ಇದುವರಗೆ 5 ಟಿ20 ಪಂದ್ಯಗಳಲ್ಲಿ 99 ಸರಾಸರಿಯಲ್ಲಿ 198 ರನ್ ಗಳಿಸಿದ್ದಾರೆ.

ಟೆಸ್ಟ್- ಏಕದಿನ ಕ್ರಿಕೆಟ್‌ನಲ್ಲಿಯೂ ಅತ್ಯುತ್ತಮ ದಾಖಲೆ

ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿಯೂ ಕೊಹ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ಅವರು 6 ಆಡಿರುವ ಇನ್ನಿಂಗ್ಸ್‌ಗಳಲ್ಲಿ 42 ಸರಾಸರಿಯಲ್ಲಿ 252 ರನ್ ಗಳಿಸಿದ್ದಾರೆ. ಆದರೆ, ಅವರು 2011 ರಿಂದ ಕೇವಲ 3 ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಇದರಲ್ಲಿ ಅವರು 52.66 ರ ಸರಾಸರಿಯಲ್ಲಿ 316 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 2 ಅರ್ಧಶತಕ ಕೂಡಿದೆ. 2014ರಲ್ಲಿ ಕೊಹ್ಲಿ 169 ರನ್‌ಗಳ ಅಮೋಘ ಇನ್ನಿಂಗ್ಸ್‌ ಕಟ್ಟಿದ್ದರು.

ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ಗಾಗಿ ಹೆಣಗಾಡುತ್ತಿದೆ. ಪ್ರಸುತ್ತ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್ ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಗಬ್ಬಾದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾಗೊಂಡಿರುವುದರಿಂದ ಸರಣಿಯ ರೋಚಕತೆಯನ್ನು ಇನ್ನಷ್ಟು ಹೆಚ್ಚಿಸಿದೆ. ಇದೀಗ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಗೆಲುವು ಉಭಯ ತಂಡಗಳಿಗೆ ಮಹತ್ವದಾಗಿದೆ. ಇಂತಹ ಸಂದರ್ಭದಲ್ಲಿ ಮೆಲ್ಬೋರ್ನ್‌ನಲ್ಲಿ ಭಾರತದ ಪರ ವಿರಾಟ್ ಕೊಹ್ಲಿ ಅಬ್ಬರಿಸುತ್ತಾರೋ? ಇಲ್ಲವೋ? ಎಂಬುದು ಕುತೂಹಲ ಮೂಡಿಸಿದೆ.

Story first published: Saturday, December 21, 2024, 7:02 [IST]
Other articles published on Dec 21, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+