ಎಂದೆಂದಿಗೂ ಕೃತಜ್ಞನಾಗಿರುತ್ತೇನೆ; ಅಂತಾರಾಷ್ಟ್ರೀಯ ಕ್ರಿಕೆಟ್‌ನ 15ನೇ ವರ್ಷಾಚರಣೆಯಂದು ವಿರಾಟ್ ಕೊಹ್ಲಿ ಪ್ರತಿಕ್ರಿಯೆ
ಶುಕ್ರವಾರ, ಆಗಸ್ಟ್ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪ್ರವೇಶಿಸಿ ವಿರಾಟ್ ಕೊಹ್ಲಿ 15 ವರ್ಷಗಳನ್ನು ಪೂರೈಸಿದರು. ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದ 15ನೇ ವಾರ್ಷಿಕೋತ್ಸವ ಆಚರಿಸುತ್ತಿರುವಾಗ ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನಕ್ಕೆ ಎಂದೆಂದಿಗೂ ಕೃತಜ್ಞರಾಗಿರುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಆಗಸ್ಟ್ 18, 2008ರಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪ್ರವೇಶ ಮಾಡಿದ ಅವರು ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ತಮ್ಮ ಚೊಚ್ಚಲ ಪಂದ್ಯವನ್ನು ಆಡಿದರು.
2008ರ ಅಂಡರ್-19 ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತೀಯ ಯುವ ತಂಡವನ್ನು ಚಾಂಪಿಯನ್‌ನತ್ತ ಮುನ್ನಡೆಸಿದ ನಂತರ ವಿರಾಟ್ ಕೊಹ್ಲಿ ಅವರು ರಾಷ್ಟ್ರೀಯ ತಂಡದಿಂದ ಮೊದಲ ಕರೆ ಪಡೆದರು. ವಿರಾಟ್ ಕೊಹ್ಲಿ ಅವರು ರಾಷ್ಟ್ರೀಯ ತಂಡದ ರ್ಜೆಯಲ್ಲಿ ಮೊದಲ ಬಾರಿಗೆ ದಂಬುಲ್ಲಾದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು.

ತಮ್ಮ ಚೊಚ್ಚಲ ಪಂದ್ಯದಲ್ಲಿ ಆರಂಭಿಕರಾಗಿ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿ, 12 ರನ್‌ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು. ಆದರೆ, ಕೆಲವು ವರ್ಷಗಳಲ್ಲಿ ತಮ್ಮ ನೈಜ ಆಟದ ಮೂಲಕ ಬೆಳಕಿಗೆ ಬಂದರು ಮತ್ತು ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆನಿಸಿದರು.
ವಿರಾಟ್ ಕೊಹ್ಲಿ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಶತಕಗಳನ್ನು ಬಾರಿಸಿದ್ದಾರೆ ಮತ್ತು ತಮ್ಮ ಹೆಸರಿಗೆ ಒಟ್ಟು 76 ಶತಕಗಳನ್ನು ಹೊಂದಿದ್ದಾರೆ. ಸದ್ಯ ಸಕ್ರಿಯ ಆಟಗಾರರಿಂದ ಅತಿ ಹೆಚ್ಚು ಶತಕ ಬಾರಿಸಿದ ಕ್ರಿಕೆಟಿಗನಾಗಿದ್ದಾರೆ.
ವಿರಾಟ್ ಕೊಹ್ಲಿ ಆಡಿದ 275 ಏಕದಿನ ಪಂದ್ಯಗಳಲ್ಲಿ 12898 ರನ್ ಗಳಿಸಿದ್ದಾರೆ ಮತ್ತು 46 ಶತಕಗಳನ್ನು ಗಳಿಸಿದ್ದಾರೆ. ಈ ಸ್ವರೂಪದಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಲು ಕೇವಲ ಮೂರು ಶತಕಗಳ ಅಂತರವಿದೆ.
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಲ್ಲಿ ಸ್ಮರಣೀಯ ಟೆಸ್ಟ್ ಗೆಲುವುಗಳನ್ನು ದಾಖಲಿಸಿದ ವಿರಾಟ್ ಕೊಹ್ಲಿ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸುವಾಗ ಉತ್ತಮ ಸಮಯವನ್ನು ಅನುಭವಿಸಿದರು. 40 ಟೆಸ್ಟ್ ಪಂದ್ಯಗಳ ಗೆಲುವುಗಳೊಂದಿಗೆ, ವಿರಾಟ್ ಕೊಹ್ಲಿ ಅತ್ಯಂತ ಯಶಸ್ವಿ ಭಾರತೀಯ ಟೆಸ್ಟ್ ತಂಡದ ನಾಯಕನಾಗಿ ಮುನ್ನಡೆ ಸಾಧಿಸಿದ್ದಾರೆ.
2020ರಿಂದ 2022ರವರೆಗೆ ಬ್ಯಾಟಿಂಗ್ ಫಾರ್ಮ್‌ನಲ್ಲಿ ಕುಸಿತವನ್ನು ಅನುಭವಿಸಿದ ನಂತರ, ವಿರಾಟ್ ಕೊಹ್ಲಿ 2023ರ ಸಮಯದಲ್ಲಿ ತಮ್ಮದೇ ನೈಜ ಸ್ಥಿತಿಗೆ ಮರಳಿದರು.
ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ತಮ್ಮ 29ನೇ ಟೆಸ್ಟ್ ಶತಕವನ್ನು ಗಳಿಸಿದರು. ಈ ವರ್ಷದ ಎಲ್ಲಾ ಮಾದರಿಗಳಲ್ಲಿ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 19 ಪಂದ್ಯಗಳಿಂದ ಒಟ್ಟು 984 ರನ್ ಕಲೆಹಾಕಿದ್ದಾರೆ. ಈ ವರ್ಷ ಒಂದೇ ಒಂದು ಟಿ20 ಪಂದ್ಯ ಆಡಿಲ್ಲ ಎನ್ನುವುದು ಗಮನಾರ್ಹ.
ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ನ 15ನೇ ವರ್ಷಾಚರಣೆ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ವಿರಾಟ್ ಕೊಹ್ಲಿ, ತಮ್ಮ ವೃತ್ತಿಜೀವನಕ್ಕೆ ಎಂದೆಂದಿಗೂ ಕೃತಜ್ಞರಾಗಿರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮುಂಬರುವ 2023ರ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅವರು ಭಾರತ ತಂಡಕ್ಕೆ ಪ್ರಮುಖ ಆಟಗಾರರಲ್ಲಿ ಒಬ್ಬರಾಗುತ್ತಾರೆ ಎಂದು ನಿರೀಕ್ಷಿಸಲಾಗಿದೆ. ದಶಕದಿಂದ ಐಸಿಸಿ ಟ್ರೋಫಿ ಬರ ಎದುರಿಸುತ್ತಿರುವ ಭಾರತ ತಂಡಕ್ಕೆ ಕಪ್ ಗೆದ್ದು ಕೊಡಲು ಎದುರು ನೋಡುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications