For Quick Alerts
ALLOW NOTIFICATIONS  
For Daily Alerts
 

Virat Kohli: ಮತ್ತೊಂದು ದಾಖಲೆಯ ಮೇಲೆ ವಿರಾಟ್‌ ಚಿತ್ತ

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್‌ ವಿರಾಟ್‌ ಕೊಹ್ಲಿ, ತಮ್ಮ ಹೆಸರಿಗೆ ಹಲವು ದಾಖಲೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಗುಜರಾತ್ ವಿರುದ್ಧ ನಡೆಯಲಿರುವ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಇವರು ಮತ್ತೊಂದು ದಾಖಲೆ ನಿರ್ಮಿಸುವ ಕನಸಿನಲ್ಲಿದ್ದಾರೆ. ಈ ಮೊದಲು ಈ ದಾಖಲೆಯನ್ನು ಯಾವೊಬ್ಬ ಭಾರತೀಯ ಬ್ಯಾಟರ್‌ ಮಾಡಲು ಸಾಧ್ಯವಾಗಿರಲಿಲ್ಲ. ಅಂತಹ ದೊಡ್ಡ ದಾಖಲೆಯನ್ನು ವಿರಾಟ್‌ ಗುಜರಾತ್‌ ವಿರುದ್ಧದ ಪಂದ್ಯದಲ್ಲಿ ಮಾಡಲಿದ್ದಾರೆ.

ವಿರಾಟ್‌ ಕೊಹ್ಲಿ ಹೆಸರಿಗೆ ಐಪಿಎಲ್‌ನಲ್ಲಿ ಹಲವು ದಾಖಲೆಗಳಿವೆ. ಅದರಲ್ಲಿ ಲೀಗ್‌ನಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ದಾಖಲೆ, ಅತಿ ಹೆಚ್ಚು ಶತಕ ಬಾರಿಸಿದ ದಾಖಲೆ. ಹೀಗೆ ಹತ್ತು ಹಲವು ದಾಖಲೆಗಳನ್ನು ಹೊಂದಿರುವ ವಿರಾಟ್‌ ಟಿ20 ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳ ಒಡೆಯ. ಈಗ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಸ್ಥಿರ ಬ್ಯಾಟಿಂಗ್ ಮುಂದುವರಿಸಿ ದೊಡ್ಡ ದಾಖಲೆಯನ್ನು ಬರೆಯುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆರ್‌ಸಿಬಿ ಬುಧವಾರ ಪ್ರಸಕ್ತ ಆವೃತ್ತಿಯ ಮೊದಲ ಪಂದ್ಯವನ್ನು ಬೆಂಗಳೂರಿನಲ್ಲಿ ಆಡಲಿದೆ. ಈ ವೇಳೆ ಎಲ್ಲರ ಕಣ್ಣುಗಳು ವಿರಾಟ್ ಮೇಲೆ ನೆಟ್ಟಿರಲಿವೆ.

Virat Kohli Eyes 13 000 T20 Runs Milestone Against Gujarat Titans

ವಿರಾಟ್‌ ಕೊಹ್ಲಿ ಈಗಾಗಲೇ ಟಿ20 ಕ್ರಿಕೆಟ್‌ ಇತಿಹಾಸದಲ್ಲಿ 401 ಪಂದ್ಯಗಳನ್ನು ಆಡಿದ್ದು, ಈ ವೇಳೆ 12976 ರನ್‌ ಸಿಡಿಸಿದ್ದಾರೆ. ಇವರಿಗೆ 13 ಸಾವಿರ ರನ್‌ಗಳ ಮಾರ್ಕ್‌ ಮುಟ್ಟಲು ಇನ್ನು ಕೇವಲ 24 ರನ್‌ಗಳ ಅವಶ್ಯಕತೆ ಇದೆ. ಈ ಸಾಧನೆಯನ್ನು ಮಾಡಿದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್‌ ದಾಖಲಿಸಿದ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ಇಷ್ಟೊಂದು ರನ್‌ಗಳನ್ನು ಕೇವಲ 4 ಆಟಗಾರರು ಮಾತ್ರ ಮುಟ್ಟಿ ಸಾಧನೆ ಮಾಡಿದ್ದಾರೆ.

ಭರ್ಜರಿ ಫಾರ್ಮ್‌ನಲ್ಲಿರುವ ವಿರಾಟ್‌

ಪ್ರಸಕ್ತ ಐಪಿಎಲ್‌ನಲ್ಲಿ ವಿರಾಟ್‌ ಕೊಹ್ಲಿ ಉತ್ತಮ ಲಯದಲ್ಲಿದ್ದಾರೆ. ಉದ್ಘಾಟನಾ ಪಂದ್ಯದಲ್ಲಿ ವಿರಾಟ್‌ ಕೆಕೆಆರ್‌ ವಿರುದ್ಧ ಅರ್ಧಶತಕ ಬಾರಿಸಿ ತಂಡದ ಗೆಲುವಿನಲ್ಲಿ ಮಿಂಚಿದ್ದರು. ಇನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲೂ ಸ್ಥಿರ ಪ್ರದರ್ಶನ ನೀಡಿದ್ದರು. ಇವರ ಅಮೋಘ ಪ್ರದರ್ಶನ ಬೆಂಗಳೂರಿನ ಚಿನ್ನಸ್ವಾಮಿ ಅಂಗಳದಲ್ಲಿ ಮುಂದುವರೆಯುವ ಲೆಕ್ಕಾಚಾರದಲ್ಲಿದ್ದಾರೆ. ಆರ್‌ಸಿಬಿ ಪ್ರಸಕ್ತ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು ಎಲ್ಲರ ಗಮನ ಸೆಳೆದಿದ್ದಾರೆ.

Virat Kohli Eyes 13 000 T20 Runs Milestone Against Gujarat Titans

ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಸಾಧನೆ

ವಿರಾಟ್ ಕೊಹ್ಲಿ ಇದುವರೆಗೆ 125 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4188 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ 254 ಪಂದ್ಯಗಳಿಂದ 8094 ರನ್ ಗಳಿಸಿದ್ದಾರೆ. ಅವರು ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಕೂಡ ಹೌದು. ಈ ಲೀಗ್‌ನಲ್ಲಿ ಬೇರೆ ಯಾವುದೇ ಬ್ಯಾಟ್ಸ್‌ಮನ್ ಎಂಟು ಸಾವಿರ ರನ್ ಗಳಿಸಲು ಸಾಧ್ಯವಾಗಿಲ್ಲ.

ಟಿ20 ಕ್ರಿಕೆಟ್‌ ಇತಿಹಾಸದಲ್ಲಿ ಅತಿ ಹೆಚ್ಚು ರನ್‌ ಕಲೆ ಹಾಕಿದ ದಾಖಲೆ ವೆಸ್ಟ್ ಇಂಡೀಸ್ ತಂಡದ ಕ್ರಿಸ್‌ ಗೇಲ್‌ ಅವರದ್ದಾಗಿದೆ. ಇವರು ಚುಟುಕು ಫಾರ್ಮೆಟ್‌ನಲ್ಲಿ 14 ಸಾವಿರ ರನ್‌ ಗಡಿ ದಾಟಿದ್ದಾರೆ.

Story first published: Wednesday, April 2, 2025, 11:05 [IST]
Other articles published on Apr 2, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+