For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್‌ಗೆ ವಿರಾಟ್‌ ಕಾಟ: ಹೇಗಿದೆ ಕೊಹ್ಲಿ ಅಂಕಿಅಂಶ?

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಣ ಏಕದಿನ ಸರಣಿ ಭಾನುವಾರದಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅಂಗಳ ಪ್ರವೇಶಿಸಲಿದ್ದಾರೆ. ಈ ಇಬ್ಬರೂ ಸ್ಟಾರ್ ಆಟಗಾರರು ದೇಶೀಯ ವಿಜಯ್ ಹಜಾರೆ ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಕಿವೀಸ್‌ ವಿರುದ್ಧದ ಪಂದ್ಯದಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಭಾರತ ತಂಡದ ಸೂಪರ್ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇವರು ನ್ಯೂಜಿಲೆಂಡ್‌ ವಿರುದ್ಧದ ಸರಣಿಯಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಏಕದಿನ ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಸೊನ್ನೆ ಸುತ್ತಿದ ಬಳಿಕ ವಿರಾಟ್‌ ಹಿಂತಿರುಗಿ ನೋಡಲೇ ಇಲ್ಲ. ವಿರಾಟ್‌ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಬ್ಯಾಕ್‌ ಟು ಬ್ಯಾಕ್‌ ಶತಕ ಬಾರಿಸಿ ಅಬ್ಬರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಇವರು ಆರ್ಭಟಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

Virat Kohli Eyes Major Milestones as India Faces New Zealand in Opening ODI Series

ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡುವ ಮುನ್ನ ವಿಜಯ್‌ ಹಜಾರೆಯಲ್ಲೂ ಅಬ್ಬರಿಸಿದ್ದರು. ವಿರಾಟ್‌ ಈಗ ತಮ್ಮ ಅಮೋಘ ಫಾರ್ಮ್‌ನ್ನು ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲೂ ಮುಂದುವರೆಸುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಕಿವೀಸ್‌ ತಂಡದ ವಿರುದ್ಧದ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಭರ್ಜರಿಯಾಗಿದೆ.

ವಿರಾಟ್‌ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಈಗಾಗಲೇ 33 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಇವರು 55ರ ಸರಾಸರಿಯಲ್ಲಿ 1657 ರನ್‌ ಕಲೆ ಹಾಕಿದ್ದಾರೆ. ಇದರಲ್ಲಿ 6 ಶತಕ ಹಾಗೂ 9 ಅರ್ಧಶತಕಗಳು ಸೇರಿವೆ. ಇನ್ನು 148 ಬೌಂಡರಿ, 24 ಸಿಕ್ಸರ್‌ ಸಿಡಿಸಿದ್ದಾರೆ. ವಿರಾಟ್‌ ಕೊಹ್ಲಿ, ಮುಂಬರುವ ಸರಣಿಯಲ್ಲಿ ಎರಡು ಬೌಂಡರಿ ಬಾರಿಸಿದ್ದೇ ಆದಲ್ಲಿ, ನ್ಯೂಜಿಲೆಂಡ್ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ 150ಕ್ಕೂ ಹೆಚ್ಚು ಬೌಂಡರಿ ಬಾರಿಸಿದ ಹೆಗ್ಗಳಿಕೆ ತಮ್ಮದಾಗಿಸಿಕೊಳ್ಳಲಿದ್ದಾರೆ.

Virat Kohli Eyes Major Milestones as India Faces New Zealand in Opening ODI Series

ಸಚಿನ್ ದಾಖಲೆಯ ಮೇಲೆ ಕಣ್ಣು

ಈಗಾಗಲೇ ತಮ್ಮ ಸ್ಥಿರ ಬ್ಯಾಟಿಂಗ್ ಮೂಲಕ ದಾಖಲೆ ಬರೆದಿರುವ ವಿರಾಟ್‌, ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲೂ ಇದೇ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದ್ದಾರೆ. ವಿರಾಟ್‌ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದೇ ಆದಲ್ಲಿ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ಅಳಿಸಿ ಹಾಕಬಹುದು. ಏಕದಿನ ಕ್ರಿಕೆಟ್‌ನಲ್ಲಿ ಸಚಿನ್‌ ತೆಂಡೂಲ್ಕರ್‌ ನ್ಯೂಜಿಲೆಂಡ್‌ ವಿರುದ್ಧ ಆಡಿದ 42 ಪಂದ್ಯಗಳಲ್ಲಿ 1750 ರನ್‌ ಸಿಡಿಸಿದ್ದಾರೆ. ಇದರಲ್ಲಿ 5 ಶತಕ, 8 ಅರ್ಧಶತಕ ಸೇರಿವೆ. ಈ ಸರಣಿಯಲ್ಲಿ ವಿರಾಟ್‌ 94 ರನ್‌ ಬಾರಿಸಿದ್ದೇ ಆದಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆನ್ನು ಅಳಿಸಿ ಹಾಕಬಲ್ಲರು. ಈ ಮೂಲಕ ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ.

Story first published: Saturday, January 10, 2026, 10:19 [IST]
Other articles published on Jan 10, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+