For Quick Alerts
ALLOW NOTIFICATIONS  
For Daily Alerts
 

ಮತ್ತೊಂದು ಮೈಲಿಗಲ್ಲಿನತ್ತ ವಿರಾಟ್‌ ಕೊಹ್ಲಿ ದಾಪುಗಾಲು

ಟೀಮ್ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರನೇ ಏಕದಿನ ಪಂದ್ಯ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಈ ಪಂದ್ಯ ಭಾರೀ ಕುತೂಹಲ ಮೂಡಿಸಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿದ್ದರಿಂದ, ನಿರ್ಣಾಯಕ ಪಂದ್ಯದತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ಸರಣಿಯಲ್ಲಿ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿಯ ಬ್ಯಾಟ್ ಅಬ್ಬರಿಸುತ್ತಿದೆ. ಇದರ ಪರಿಣಾಮವೇ ಮೂರನೇ ಏಕದಿನ ಪಂದ್ಯದ ಟಿಕೆಟ್‌ಗಳೆಲ್ಲಾ ಸೋಲ್ಡ್‌ ಔಟ್ ಆಗಿವೆ.

ವಿರಾಟ್‌ ಕೊಹ್ಲಿ ಈ ಸರಣಿಯಲ್ಲಿ ಅಮೋಘ ಫಾರ್ಮ್‌ನಲ್ಲಿದ್ದಾರೆ. ಇವರು ಈ ಸರಣಿಯಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಶತಕ ಬಾರಿಸಿದ್ದಾರೆ. ಹೀಗಾಗಿ ವಿಶಾಖಪಟ್ಟಣಂನಲ್ಲೂ ಶತಕ ಸಿಡಿಸುತ್ತಾರಾ ಎಂಬ ಲೆಕ್ಕಾಚಾರ ಆರಂಭವಾಗಿವೆ. ಇದೇ ವೇಳೆ ವಿರಾಟ್‌ ಕೊಹ್ಲಿ ವಿಶ್ವ ಕ್ರಿಕೆಟ್‌ನಲ್ಲಿ ದೊಡ್ಡ ಮೈಲಿಗಲ್ಲು ತಲುಪುವ ಹೊಸ್ತಿಲಲ್ಲಿ ನಿಂತಿದ್ದಾರೆ. ವಿರಾಟ್‌ ಕೊಹ್ಲಿ ಈಗ ಮಾಡಲು ಹೊರಟಿರುವ ಸಾಧನೆಯನ್ನು ವಿಶ್ವ ಕ್ರಿಕೆಟ್‌ನಲ್ಲಿ ಈ ವರೆಗೆ ಕೇವಲ ಇಬ್ಬರು ಬ್ಯಾಟರ್‌ಗಳು ಮಾತ್ರ ಮಾಡಿದ್ದಾರೆ.

Virat Kohli Eyes Major World Record Needs 90 Runs to Join Sachin Sangakkara in Elite 28K Club

ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ಪರ ಸದ್ಯ ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ಆಡುತ್ತಿದ್ದಾರೆ. ಇವರು ಟೆಸ್ಟ್ ಹಾಗೂ ಟಿ20 ಸ್ವರೂಪಗಳಿಂದ ನಿವೃತ್ತರಾಗಿದ್ದಾರೆ. ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಆಡಬೇಕು ಎಂಬ ಬಯಕೆಯನ್ನು ಹೊಂದಿದ್ದಾರೆ. ವಿಶಾಖಪಟ್ಟಣಂನಲ್ಲಿ ವಿರಾಟ್‌ ಬಿಗ್ ಇನಿಂಗ್ಸ್ ಕಟ್ಟಿದಲ್ಲಿ ದೊಡ್ಡ ರೆಕಾರ್ಡ್‌ ನಿರ್ಮಾಣವಾಗಲಿದೆ. ಇದಕ್ಕಾಗಿ ವಿರಾಟ್‌ ಕೊಹ್ಲಿ ಜಸ್ಟ್‌ 90 ರನ್‌ ಬಾರಿಸಬೇಕಿದೆ.

ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್‌ 90 ರನ್ ಬಾರಿಸುವಲ್ಲಿ ಯಶಸ್ವಿಯಾದರೆ, 28 ಸಾವಿರ ಅಂತಾರಾಷ್ಟ್ರೀಯ ರನ್‌ಗಳನ್ನು ಪೂರ್ಣಗೊಳಿಸಿದ ಹಿರಿಮೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ವರೆಗೆ ಕ್ರಿಕೆಟ್‌ ದೇವರು ಸಚಿನ್ ತೆಂಡೂಲ್ಕರ್‌ ಹಾಗೂ ಶ್ರೀಲಂಕಾದ ದಿಗ್ಗಜ ಆಟಗಾರ ಕುಮಾರ್ ಸಂಗಾಕ್ಕರ್ ಮಾತ್ರ ಈ ಸಾಧನೆ ಮಾಡಿದ್ದಾರೆ. ಕೊಹ್ಲಿ ಈಗ ಈ ಪಟ್ಟಿಗೆ ಸೇರುವ ಅವಕಾಶವನ್ನು ಹೊಂದಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌

ಸಚಿನ್ ತೆಂಡೂಲ್ಕರ್ (ಭಾರತ) - 34,357 ರನ್‌
ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 28,016 ರನ್‌
ವಿರಾಟ್ ಕೊಹ್ಲಿ (ಭಾರತ) - 27,910 ರನ್‌
ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 27,483 ರನ್‌
ಮಹೇಲ ಜಯವರ್ಧನೆ (ಶ್ರೀಲಂಕಾ) - 25,957 ರನ್‌

ವಿರಾಟ್ ವೀರಾವೇಶ

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪ್ರಸಕ್ತ ಏಕದಿನ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ರಾಂಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶತಕ ಬಾರಿಸಿದ್ದ ಕೊಹ್ಲಿ, ರಾಯ್ಪುರದಲ್ಲೂ ಮೂರಂಕಿ ಮುಟ್ಟಿ ಸಂಭ್ರಮಿಸಿದ್ದರು. ಈಗ ವಿಶಾಖಾಪಟ್ಟಣಂನಲ್ಲೂ ಇದೇ ಸಾಧನೆಯನ್ನು ಮಾಡುವ ಕನಸು ಹೊಂದಿದ್ದಾರೆ. ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಎರಡನೇ ಬಾರಿಗೆ ಹ್ಯಾಟ್ರಿಕ್ ಶತಕಗಳನ್ನು ದಾಖಲಿಸಿದ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ.

Story first published: Saturday, December 6, 2025, 7:40 [IST]
Other articles published on Dec 6, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+