ಎಬಿಡಿ ಏಕದಿನ ದಾಖಲೆ ಮುರಿದ ವಿರಾಟ್ ಕೊಹ್ಲಿ
ಬರ್ಮಿಂಗ್ ಹ್ಯಾಮ್, ಜೂನ್ 15: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ತ್ವರಿತಗತಿಯಲ್ಲಿ 8,000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾದ ನಾಯಕ ಎಬಿ ಡಿ ವಿಲಿಯರ್ಸ್ ದಾಖಲೆಯನ್ನು ಮುರಿದಿದ್ದಾರೆ.
ಚಾಂಪಿಯನ್ಸ್ ಟ್ರೋಫಿ 2017ರ ಎರಡನೇ ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶ ವಿರುದ್ಧ ಈ ಸಾಧನೆ ಕಂಡು ಬಂದಿದೆ. ಬಲಗೈ ಬ್ಯಾಟ್ಸ್ ಮನ್ ಕೊಹ್ಲಿ ಅವರು 175 ಇನ್ನಿಂಗ್ಸ್ ಗಳಲ್ಲಿ 8, 000ರನ್ ಗಳಿಸಿದ್ದಾರೆ. ಕೊಹ್ಲಿ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸಹ ಆಟಗಾರ ಎಬಿ ಡಿ ವಿಲಿಯರ್ಸ್ ಅವರು 182 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಗಳಿಸಿದ್ದರು.

ಈ ಮುಂಚೆ ತ್ವರಿತಗತಿಯಲ್ಲಿ 7,000ರನ್ ಗಳಿಸಿದ್ದ ಎಬಿ ಡಿ ವಿಲಿಯರ್ಸ್(166 ಇನ್ನಿಂಗ್ಸ್) ದಾಖಲೆಯನ್ನು ಕೂಡಾ ವಿರಾಟ್ ಕೊಹ್ಲಿ ಅವರು ಮುರಿದಿದ್ದರು. 161 ಇನ್ನಿಂಗ್ಸ್ ಗಳಲ್ಲಿ ಕೊಹ್ಲಿ ಈ ಗುರಿ ತಲುಪಿದ್ದರು. ನಂತರ ದಕ್ಷಿಣ ಆಫ್ರಿಕಾದ ಹಶೀಂ ಆಮ್ಲಾ ಅವರು ಈ ದಾಖಲೆಯನ್ನು ಉತ್ತಮಪಡಿಸಿದ್ದರು.
ಅಮ್ಲ ಅವರು ಏಕದಿನ ಕ್ರಿಕೆಟ್‌ನಲ್ಲಿ 2,000, 3,000, 4,000, 5,000. 6,000, 7,000 ರನ್‌ಗಳನ್ನು ಕೂಡಾ ತ್ವರಿತಗತಿಯ ಪೂರ್ಣಗೊಳಿಸಿದ ಸಾಧನೆ ಮಾಡಿದ್ದಾರೆ.
Story first published: Wednesday, January 3, 2018, 10:05 [IST]
Other articles published on Jan 3, 2018
Read in English: Kohli fastest to complete 8000 ODI runs
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications