ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ದೊಡ್ಡ ದಾಖಲೆ ಬರೆದ ವಿರಾಟ್ ಕೊಹ್ಲಿ

ಲಂಡನ್, ಸೆಪ್ಟೆಂಬರ್ 2: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇತ್ತೀಚಿನ ಕೆಲ ಪಂದ್ಯಗಳಲ್ಲಿ ದೊಡ್ಡ ಮೊತ್ತವನ್ನು ಗಳಿಸಲು ವಿಫಲವಾಗಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ ಯಾವುದೇ ಮಾದರಿಯಲ್ಲಿಯೂ ಶತಕವನ್ನು ದಾಖಲಿಸದೆ ಎರಡು ವರ್ಷವೇ ಆಗುತ್ತಾ ಬಂದಿದೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಪ್ರದರ್ಶನ ಮತ್ತಷ್ಟು ಮಂಕಾದಂತೆ ಕಂಡುಬರುತ್ತಿದೆ. ಹೀಗಾಗಿ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿದೆ. ಹಾಗಿದ್ದರೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಮಹತ್ವದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದಾರೆ.

ಲಂಡನ್‌ನ ಓವಲ್ ಅಂಗಳದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಮಹತ್ವದ ಮೈಲಿಗಲ್ಲು ನೆಟ್ಟಿದ್ದಾರೆ. ಓವಲ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 23,000 ಅಂತಾರಾಷ್ಟ್ರೀಯ ರನ್‌ಗಳನ್ನು ಗಳಿಸಿದ ಸಾಧನೆ ಮಾಡಿದ್ದಾರೆ. ಈ ಸಾಧನೆಯನ್ನು ಅತ್ಯಂತ ವೇಗವಾಗಿ ಮಾಡಿದ ಕ್ರಿಕೆಟಿಗ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಮಹತ್ವದ ಸಾಧನೆಯನ್ನು ಮಾಡಲು 490 ಇನ್ನಿಂಗ್ಸ್‌ಗಳನ್ನು ಬಳಸಿಕೊಂಡಿದ್ದಾರೆ. ಈ ಮೂಲಕ ದಿಗ್ಗಜ ಕ್ರಿಕೆಟಿಗರನ್ನು ವಿರಾಟ್ ಕೊಹ್ಲಿ ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ. ಸಚಿನ್ ತೆಂಡೂಲ್ಕರ್, ರಿಕಿ ಪಾಂಟಿಂಗ್ ಅವರಂತಾ ಆಟಗಾರರು ವಿರಾಟ್ ಕೊಹ್ಲಿಗಿಂತ ಹಿಂದುಳಿದಿದ್ದಾರೆ.

23,000 ರನ್‌ಗಳನ್ನು ಗಳಿಸಲು ಆಟಗಾರರು ಬಳಸಿದ ಇನ್ನಿಂಗ್ಸ್‌ಗಳ ಸಂಖ್ಯೆ

ವಿರಾಟ್ ಕೊಹ್ಲಿ- 490 ಇನ್ನಿಂಗ್ಸ್
ಸಚಿನ್ ತೆಂಡೂಲ್ಕರ್- 522 ಇನ್ನಿಂಗ್ಸ್
ರಿಕಿ ಪಾಂಟಿಂಗ್- 544 ಇನ್ನಿಂಗ್ಸ್
ಜಾಕ್ ಕ್ಯಾಲಿಸ್- 551 ಇನ್ನಿಂಗ್ಸ್
ಕುಮಾರ್ ಸಂಗಕ್ಕಾರ- 568 ಇನ್ನಿಂಗ್ಸ್
ರಾಹುಲ್ ದ್ರಾವಿಡ್- 576 ಇನ್ನಿಂಗ್ಸ್
ಮಹೇಲ ಜಯವರ್ಧನೆ- 645 ಇನ್ನಿಂಗ್ಸ್

ಇನ್ನು ಭಾರತೀಯ ಕ್ರಿಕೆಟ್ ಆಟಗಾರರ ಪೈಕಿ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಈಗ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರಿಂದ ಮಾತ್ರವೇ ಹಿಂದಿದ್ದಾರೆ. ಸಚಿನ್ ತೆಂಡೂಲ್ಕರ್ 34,357 ರನ್‌ಗಳನ್ನು ಗಳಿಸುವ ಮೂಲಕ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪೈಕಿ ವಿಶ್ವದ ಅಗ್ರ ಆಟಗಾರ ಎನಿಸಿದ್ದಾರೆ. ರಾಹುಲ್ ದ್ರಾವಿಡ್ 24,064 ರನ್‌ಗಳನ್ನು ಗಳಿಸಿದ್ದು ಭಾರತೀಯ ಆಟಗಾರರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ.

70 ಶತಕಗಳಿಸಿರುವ ವಿರಾಟ್ ಕೊಹ್ಲಿ: ಇನ್ನು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬರೊಬ್ಬರಿ 70 ಶತಕಗಳನ್ನು ಗಳಿಸಿದ್ದಾರೆ. ಅತಿ ಹೆಚ್ಚು ಶತಕಗಳಿಸಿದ ಆಟಗಾರರ ಪೈಕಿ ಕೊಹ್ಲಿ ಈಗ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ರಿಕಿ ಪಾಂಟಿಂಗ್ ಜೊತೆಗೆ ಎರಡನೇ ಸ್ಥಾನದಲ್ಲಿ ಜಂಟಿಯಾಗಿದ್ದಾರೆ. 100 ಅಂತಾರಾಷ್ಟ್ರೀಯ ಶತಕಗಳಿಸಿರುವ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಹೊಂದಿದ್ದಾರೆ.

ಟಾಸ್‌ಗೆ ಇಳಿಯುತ್ತಲೇ ಮತ್ತೊಂದು ದಾಖಲೆ ಬರೆದ ಕೊಹ್ಲಿ: ಇನ್ನು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್‌ಗಾಗಿ ಕಣಕ್ಕಿಳಿಯುವ ಮೂಲಕ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದ್ದಾರೆ. ಭಾರತ ತಂಡವನ್ನು ಭಾರತದ ನೆಲದಲ್ಲಿ ಹೊರತು ಪಡಿಸಿ ಬೇರೊಂದು ದೇಶದಲ್ಲಿ 10 ಹಾಗೂ ಅದಕ್ಕೂ ಅಧಿಕ ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸಿದ ಭಾರತದ ಮೊದಲ ನಾಯಕ ಎನಿಸಿದ್ದಾರೆ. 9 ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ನೆಲದಲ್ಲಿಯೇ ಎಂಎಸ್ ಧೋನಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ಪಟ್ಟಿಯಲ್ಲಿ ಮಾಜಿ ನಾಯಕ ಸುನಿಲ್ ಗವಾಸ್ಕರ್ ಮೂರನೇ ಸ್ಥಾನದಲಲ್ಇದ್ದು ಪಾಕಿಸ್ತಾನ ನೆಲದಲ್ಲಿ 8 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ ಸಾಧನೆ ಮಾಡಿದ್ದಾರೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, September 2, 2021, 19:16 [IST]
Other articles published on Sep 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X