Virat Kohli: ಸಿಎಸ್‌ಕೆ ವಿರುದ್ಧ ಸೋಲಿನ ಬೆನ್ನಲ್ಲೇ ಆರ್‌ಸಿಬಿಗೆ ಮತ್ತೊಂದು ಆಘಾತ: ಕೊಹ್ಲಿಗೆ ಬಿತ್ತು ದಂಡ!
ಐಪಿಎಲ್ 2023ರ 24ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 8 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಸೋಲಿನ ಬೆನ್ನಲ್ಲೇ ಆರ್‌ಸಿಬಿ ತಂಡಕ್ಕೆ ಮತ್ತೊಂದು ಆಘಾತ ಸಿಕ್ಕಿದೆ, ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ದಂಡ ವಿಧಿಸಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಿಎಸ್‌ಕೆ ವಿರುದ್ದದ ಪಂದ್ಯದಲ್ಲಿ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಾರೆ ಎಂದು ವಿರಾಟ್ ಕೊಹ್ಲಿ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ಕೋಡ್ ಆಫ್ ಕಂಡಕ್ಟ್ ಆರ್ಟಿಕಲ್ ಅಡಿಯಲ್ಲಿ ಮೊದಲನೇ ಹಂತದ ಅಪರಾಧವನ್ನು ಮಾಡಿರುವುದಾಗಿ ವಿರಾಟ್ ಕೊಹ್ಲಿ ಒಪ್ಪಿಕೊಂಡಿದ್ದಾರೆ. ಇದರಲ್ಲಿ ಪಂದ್ಯದ ರೆಫರಿ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿದೆ.

ಫೀಲ್ಡಿಂಗ್ ಮಾಡುವ ಸಂದರ್ಭದಲ್ಲಿ ಮೈದಾನದಲ್ಲಿ ಮಿತಿ ಮೀರಿದ ಸಂಭ್ರಮಾಚರಣೆ ಮಾಡಿದ್ದಕ್ಕೆ ಅವರಿಗೆ ದಂಡ ವಿಧಿಸಲಾಗಿದೆ. ವಿರಾಟ್ ಕೊಹ್ಲಿ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಲಿಲ್ಲ, 4 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿ ಆಕಾಶ್ ಸಿಂಗ್ ಬೌಲಿಂಗ್‌ನಲ್ಲಿ ದುರದೃಷ್ಟದಿಂದ ಬೌಲ್ಡ್ ಆದರು.
ಚಿನ್ನಸ್ವಾಮಿಯಲ್ಲಿ ಎರಡನೇ ಸೋಲು ಕಂಡ ಆರ್‌ಸಿಬಿ
ಹೈವೋಲ್ವಟೇಜ್ ಪಂದ್ಯದಲ್ಲಿ ಆರ್ ಸಿಬಿ 8 ರನ್‌ಗಳಿಂದ ಸೋಲನುಭವಿಸಿದೆ. ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್‌ಕೆ ಆರಂಭದಲ್ಲೇ ರುತುರಾಜ್ ಅವರ ವಿಕೆಟ್ ಕಳೆದುಕೊಂಡಿತು. 6 ಎಸೆತಗಳಲ್ಲಿ ಕೇವಲ ಮೂರು ರನ್ ಗಳಿಸಿ ಮೊಹಮ್ಮದ್ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು.
ಡಿವೋನ್ ಕಾನ್ವೆ ಮತ್ತು ಅಜಿಂಕ್ಯ ರಹಾನೆ ಎರಡನೇ ವಿಕೆಟ್‌ಗೆ 74 ರನ್ ಕಲೆಹಾಕಿದರು. ಅಜಿಂಕ್ಯ ರಹಾನೆ 20 ಎಸೆತಗಳಲ್ಲಿ 37 ರನ್ ಗಳಿಸಿ ಔಟಾದರು. ಡಿವೊನ್ ಕಾನ್ವೆ ಅತ್ಯುತ್ತಮ ಬ್ಯಾಟಿಂಗ್ ಮುಂದುವರೆಸಿದರು, ನಂತರ ಕ್ರೀಸ್‌ಗೆ ಬಂದ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್ ಮಾಡಿದರು, 27 ಎಸೆತಗಳಲ್ಲಿ 2 ಬೌಂಡರಿ 5 ಸಿಕ್ಸರ್ ಸಹಿತ 52 ರನ್ ಗಳಿಸಿದರು. ಡಿವೋನ್ ಕಾನ್ವೆ 45 ಎಸೆತಗಳಲ್ಲಿ 6 ಬೌಂಡರಿ 6 ಸಿಕ್ಸರ್ ಸಹಿತ 83 ರನ್ ಗಳಿಸಿದರು.
ಅತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. ವೈಶಾಕ್ ವಿಜಯ್ ಕುಮಾರ್ ದುಬಾರಿ ಬೌಲರ್ ಎನಿಸಿಕೊಂಡರು. 4 ಓವರ್ ಗಳಲ್ಲಿ 62 ರನ್ ಬಿಟ್ಟುಕೊಟ್ಟ ಅವರು ಕೇವಲ ಒಂದು ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್, ಪಾರ್ನೆಲ್, ಮ್ಯಾಕ್ಸ್‌ವೆಲ್, ಹರ್ಷಲ್ ಪಟೇಲ್, ಹಸರಂಗ ತಲಾ ಒಂದು ವಿಕೆಟ್ ಪಡೆದರು.

ಮ್ಯಾಕ್ಸ್‌ವೆಲ್, ಡುಪ್ಲೆಸಿಸ್ ಹೋರಾಟ ವ್ಯರ್ಥ
ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್ ಸಿಬಿ ಆರಂಭದಲ್ಲೇ ಕೊಹ್ಲಿ, ಮಹಿಪಾಲ್ ಲೊಮ್ರೊರ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ, ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ಮ್ಯಾಕ್ಸ್‌ವೆಲ್ ಅಬ್ಬರದ ಬ್ಯಾಟಿಂಗ್ ಮಾಡಿದರು. ಈ ಜೋಡಿ ಮೂರನೇ ವಿಕೆಟ್‌ಗೆ 62 ಎಸೆತಗಳಲ್ಲಿ 126 ರನ್ ಗಳಿಸಿದರು. ಮ್ಯಾಕ್ಸ್‌ವೆಲ್ 36 ಎಸೆತಗಳಲ್ಲಿ 3 ಬೌಂಡರಿ 8 ಸಿಕ್ಸರ್ ಸಹಿತ 76 ರನ್ ಗಳಿಸಿದರು, ಫಾಫ್ ಡು ಪ್ಲೆಸಿಸ್ 33 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್ ಸಹಿತ 62 ರನ್ ಗಳಿಸಿದರು.
ಇವರಿಬ್ಬರೂ ತಂಡವನ್ನು ಗೆಲುವಿನ ಸಮೀಪಕ್ಕೆ ತಂದರೂ ನಂತರ ಬಂದ ಬ್ಯಾಟರ್ ಗಳು ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ದಿನೇಶ್ ಕಾರ್ತಿಕ್ 14 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದ ನಂತರ, ಆರ್ ಸಿಬಿ ಸೋಲಿನ ದಾರಿ ಹಿಡಿಯಿತು. ಅಂತಿಮವಾಗಿ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 218 ರನ್ ಗಳಿಸುವ ಮೂಲಕ 8 ರನ್‌ಗಳಿಂದ ಸೋಲನುಭವಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications