Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮೈದಾನದ ಹೊರಗೊಂದು ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ

Virat Kohli, First cricketer to join 100 crore club on insta

ನವದೆಹಲಿ: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮೈದಾನದ ಹೊರಗೊಂದು ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿರುವ ಏಷ್ಯಾದ ಮೊದಲ ವ್ಯಕ್ತಿಯಾಗಿ ಕೊಹ್ಲಿ ಗುರುತಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಏಷ್ಯಾದ ಎರಡನೇ ವ್ಯಕ್ತಿಯೆಂದರೆ ಬಾಲಿವುಡ್ ತಾರೆ ಪ್ರಿಯಾಂಕಾ ಚೋಪ್ರಾ. ಚೋಪ್ರಾಗೆ ಇನ್‌ಸ್ಟಾಗ್ರಾಮ್‌ನಲ್ಲಿ 60.8 ಮಿಲಿಯನ್ ಹಿಂಬಾಲಕರಿದ್ದಾರೆ.

ಪ್ರಿಯಾಂಕಾ ನಂತರದ ಸ್ಥಾನದಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಇದ್ದಾರೆ. ಶ್ರದ್ಧಾಗೆ 58 ಮಿಲಿಯನ್ ಹಿಂಬಾಲಕರಿದ್ದಾರೆ. ಏಷ್ಯಾದಲ್ಲಿ 75 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಮೊದಲಿಗನಾಗಿ ಕೊಹ್ಲಿ ಈ ಹಿಂದೆ ದಾಖಲೆ ನಿರ್ಮಿಸಿದ್ದರು. ಕೊಹ್ಲಿ ಸದ್ಯ ಭಾರತ-ಇಂಗ್ಲೆಂಡ್ ಟೆಸ್ಟ್‌ ಸರಣಿ ಆಡುತ್ತಿದ್ದಾರೆ.

ವಿಶ್ವದಲ್ಲಿ ಅತೀ ಹೆಚ್ಚು ಇನ್‌ಸ್ಟಾಗ್ರಾಮ್‌ ಹಿಂಬಾಲಕರನ್ನು ಹೊಂದಿರುವ ವ್ಯಕ್ತಿಯೆಂದರೆ ಪೋರ್ಚುಗಲ್‌ನ ಸ್ಟಾರ್ ಫುಟ್ಬಾಲಿಗ ಕ್ರಿಸ್ಚಿಯಾನೊ ರೊನಾಲ್ಡೋ. ರೊನಾಲ್ಡೋಗೆ 266 ಫಾಲೋವರ್ಸ್ ಇದ್ದಾರೆ. ನಂತರದ ಸ್ಥಾನಗಳಲ್ಲಿ ಅಮೆರಿಕಾದ ಸಿಂಗರ್ ಅರಿಯಾನ ಗ್ರಾಂಡೆ (224 ಮಿ. ಫಾಲೋವರ್ಸ್) ಬಾರ್ಸಿಲೋನಾ ನಾಯಕ ಲಿಯೋನೆಲ್ ಮೆಸ್ಸಿ (187) ಇದ್ದಾರೆ.

Story first published: Tuesday, March 2, 2021, 8:37 [IST]
Other articles published on Mar 2, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+