For Quick Alerts
ALLOW NOTIFICATIONS  
For Daily Alerts
 

IPL 2025: ವಿರಾಟ್ ಕೊಹ್ಲಿಗೆ 9 ವರ್ಷಗಳ ಹಿಂದಿನ ದಾಖಲೆ ಸರಿಗಟ್ಟುವ ಅವಕಾಶ

ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ 10 ಪಂದ್ಯಗಳಲ್ಲಿ 6 ಅರ್ಧಶತಕಗಳನ್ನು ಗಳಿಸಿದ ಏಕೈಕ ಬ್ಯಾಟರ್ ಆಗಿದ್ದಾರೆ. ಅವರು ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಆರೆಂಜ್ ಕ್ಯಾಪ್‌ಗಾಗಿ ಸ್ಪರ್ಧೆ ಕಠಿಣವಾಗಿದೆ. ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಪ್ರತಿ ಪಂದ್ಯದಲ್ಲೂ ಬ್ಯಾಟರ್ಸ್ ಕೆಲವೊಮ್ಮೆ ಮುಂದೆ, ಹಿಂದೆ ಆಗುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮಾಜಿ ನಾಯಕ ಮತ್ತು ಆರಂಭಿಕ ಬ್ಯಾಟರ್ ವಿರಾಟ್ ಕೊಹ್ಲಿ ಕೆಲವು ದಿನಗಳ ಹಿಂದಿನವರೆಗೂ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದರು. ಈಗ ಗುಜರಾತ್ ಟೈಟಾನ್ಸ್ (ಜಿಟಿ) ತಂಡದ ಆರಂಭಿಕ ಬ್ಯಾಟರ್ ಸಾಯಿ ಸುದರ್ಶನ್ ಮತ್ತು ಮುಂಬೈ ಇಂಡಿಯನ್ಸ್ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ತಮ್ಮ ಅದ್ಭುತ ಬ್ಯಾಟಿಂಗ್‌ನಿಂದ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮುನ್ನಡೆ ಸಾಧಿಸಿದ್ದಾರೆ.

ವಿರಾಟ್ ಕೊಹ್ಲಿ ಅವರಿಗೆ ಮತ್ತೆ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನ ಪಡೆಯುವ ಅವಕಾಶ ಸಿಕ್ಕಿದೆ. ಐಪಿಎಲ್ 2025 ರಲ್ಲಿ, ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯಲಿದೆ.

Virat Kohli gets a chance to equal his 9-year-old record in IPL

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 57 ರನ್ ಗಳಿಸಿದರೆ, ಐಪಿಎಲ್ 2025 ರಲ್ಲಿ 500 ರನ್ ಗಳಿಸಿದ ಎರಡನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಇದಲ್ಲದೆ, ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನಕ್ಕೇರಲು ಕನಿಷ್ಠ 62 ರನ್‌ಗಳನ್ನು ಗಳಿಸಬೇಕಾಗಿದೆ.

ದಾಖಲೆ ಸರಿಗಟ್ಟುವ ಅವಕಾಶ

ವಿರಾಟ್ ಕೊಹ್ಲಿಗೆ ತಮ್ಮದೇ ಆದ 9 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟುವ ಅವಕಾಶವನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ ಇನ್ನೊಂದು ಅರ್ಧಶತಕ ಗಳಿಸಿದರೆ, ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳ ದಾಖಲೆಯನ್ನು ಸರಿಗಟ್ಟುತ್ತಾರೆ. ವಿರಾಟ್ ಕೊಹ್ಲಿ ಐಪಿಎಲ್ 2016 ರಲ್ಲಿ 7 ಅರ್ಧಶತಕಗಳನ್ನು ಗಳಿಸಿದ್ದಾರೆ. ಪ್ರಸ್ತುತ ವಿರಾಟ್ ಕೊಹ್ಲಿ ಐಪಿಎಲ್ 2025 ರಲ್ಲಿ ಇದುವರೆಗೆ 6 ಅರ್ಧಶತಕಗಳನ್ನು ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಐಪಿಎಲ್ 2016 ರ ಋತುವಿನಲ್ಲಿ 973 ರನ್ ಗಳಿಸಿದ್ದರು.

ಚೆನ್ನೈ vs ಬೆಂಗಳೂರು ಮುಖಾಮುಖಿ

ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಪ್ಲೇಆಫ್ ರೇಸ್‌ನಿಂದ ಹೊರಬಿದ್ದ ಮೊದಲ ತಂಡವಾಗಿದೆ. ಆರ್‌ಸಿಬಿ ಪ್ಲೇಆಫ್ ರೇಸ್‌ನಲ್ಲಿ ಅಗ್ರ -4 ರಲ್ಲಿ ಸ್ಥಾನ ಪಡೆಯುವು ನಿರೀಕ್ಷೆಯಲ್ಲಿದೆ. ಇಂದು ಆರ್‌ಸಿಬಿ ತಂಡ ಸಿಎಸ್‌ಕೆ ತಂಡವನ್ನು ಸೋಲಿಸಿದರೆ, 16 ಅಂಕಗಳೊಂದಿಗೆ ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳಲಿದೆ. ಇದರೊಂದಿಗೆ, ಆರ್‌ಸಿಬಿ ಒಂದೇ ಸೀಸನ್‌ನಲ್ಲಿ ಸಿಎಸ್‌ಕೆ ತಂಡವನ್ನು ಎರಡು ಬಾರಿ ಸೋಲಿಸಿದ ಸಾಧನೆಯನ್ನು ಮಾಡಲಿದೆ.

ಐಪಿಎಲ್‌ನಲ್ಲಿ ಚೆನ್ನೈ ಮತ್ತು ಬೆಂಗಳೂರು ತಂಡಗಳ ತಂಡಗಳ ನಡುವೆ ಹಲವು ಹೈವೋಲ್ಟೇಜ್ ಪಂದ್ಯಗಳು ನಡೆದಿವೆ. ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವೆ ಇಲ್ಲಿಯವರೆಗೆ ಒಟ್ಟು 34 ಪಂದ್ಯಗಳು ನಡೆದಿದ್ದು, ಇದರಲ್ಲಿ ಸಿಎಸ್‌ಕೆ 21 ಪಂದ್ಯಗಳನ್ನು ಗೆದ್ದಿದ್ದರೆ, ಆರ್‌ಸಿಬಿ 12 ಪಂದ್ಯಗಳನ್ನು ಗೆದ್ದಿದೆ. ಇದಲ್ಲದೆ, ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

Story first published: Saturday, May 3, 2025, 16:02 [IST]
Other articles published on May 3, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+