For Quick Alerts
ALLOW NOTIFICATIONS  
For Daily Alerts
 

ದೇವರ ದಾಖಲೆ ಧ್ವಂಸಗೊಳಿಸಿದ ದೊರೆ!: ವಿರಾಟ್ ಕೊಹ್ಲಿ 50ನೇ ಏಕದಿನ ಶತಕ

ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಏಕಿನ ಕ್ರಿಕೆಟ್‌ನಲ್ಲಿ 50ನೇ ಶತಕ ಬಾರಿಸಿ ಅಬ್ಬರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದೆ, ಈ ಪಂದ್ಯದಲ್ಲಿ ಕೊಹ್ಲಿ ಏಕದಿನ ಕ್ರಿಕೆಟ್‌ನ 50ನೇ ಶತಕವನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಕ್ರಿಕೆಟ್‌ನ ದೇವರು ಎನಿಸಿಕೊಂಡಿರುವ ಸಚಿನ್ ತೆಂಡೂಲ್ಕರ್ ಅವರ ವಿಶ್ವದಾಖಲೆಯನ್ನು ಮುರಿದಿದ್ದಾರೆ ವಿರಾಟ್ ಕೊಹ್ಲಿ.

Virat Kohli hits 50th ODI century, breaks Sachin Tendukar World record

ಈ ಶತಕದ ಮೂಲಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 50 ಶತಕಗಳನ್ನು ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ 49ನೇ ಶತಕವನ್ನು ಸರಿಗಟ್ಟಿದ್ದರು. ಇದೀಗ ಸೆಮಿಫೈನಲ್‌ನಂಥಾ ನಿರ್ಣಾಯಕ ಘಟ್ಟದಲ್ಲಿ ವಿರಾಟ್ ಕೊಹ್ಲಿ ಈ ಅಭೂತಪೂರ್ವ ಶತಕ ಸಿಡಿಸಿ ಅಬ್ಬರಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಸಿಡಿಸಿದ ಈ ಶತಕ ಈ ವಿಶ್ವಕಪ್‌ನಲ್ಲಿ ಸಿಡಿಸಿದ ಮೂರನೇ ಶತಕವಾಗಿದ್ದು ಒಟ್ಟಾರೆ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ ಸಿಡಿಸಿದ ಐದನೇ ಶತಕ ಎನಿಸಿಕೊಂಡಿದೆ. ಅಲ್ಲದೆ ಸೌರವ್ ಗಂಗೂಲಿ ಹಾಗೂ ರೋಹಿತ್ ಶರ್ಮಾ ಬಳಿಕ ನೌಟ್ ಹಂತದಲ್ಲಿ ಶತಕ ಸಿಡಿಸಿದ ಕೇವಲ ಮೂರನೇ ಬಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 2003ರಲ್ಲಿ ಸೌರವ್ ಗಂಗೂಲಿ ಕೀನ್ಯಾ ವಿರದ್ಧ ಶತಕ ಸಿಡಿಸಿದ್ದರೆ ರೋಹಿತ್ ಶರ್ಮಾ 2015ರ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಕ್ವಾರ್ಟರ್‌ಓಐನಲ್ ಹಂತದಲ್ಲಿ ಶತಕ ಸಿಡಿಸಿದ್ದರು.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 113 ಎಸೆತಗಳನ್ನು ಎದುರಿಸಿದ್ದು 117 ರನ್‌ಗಳನ್ನು ಬಾರಿಸಿ ಟಿಮ್ ಸೌಥಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ಗೆ ಸೇರಿಕೊಂಡರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ಸೇರಿಕೊಂಡಿದೆ. 103.54ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ.

ಇನ್ನು ಈ ಬಾರಿಯ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅಮೋಘ ಲಯದಲ್ಲಿದ್ದು ರನ್ ಮಳೆ ಹರಿಸಿದ್ದಾರೆ. ಈ ಪಂದ್ಯದ ಮೂಲಕ ಈ ವಿಶ್ವಕಪ್‌ನಲ್ಲಿ ಕೊಹ್ಲಿ 10 ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ನಡೆಸಿದ್ದು ಇದರಲ್ಲಿ ಕೇವಲ 2 ಬಾರಿ ಮಾತ್ರವೇ ಅರ್ಧ ಶತಕಕ್ಕಿಂತ ಕಡಿಮೆ ರನ್ ಗಳಿಸಿದ್ದಾರೆ. ಪಾಕಿಸ್ತಾನದ ವಿರುದ್ಧ 16 ಮತ್ತು ಇಂಗ್ಲೆಂಡ್ ವಿರುದ್ಧ ಶೂನ್ಯಕ್ಕೆ ಔಟಾಗಿದ್ದರು ಕೊಹ್ಲಿ.

ಆಸ್ಟ್ರೇಲಿಯಾ ವಿರುದ್ಧದ ಭಾರತದ ಆರಂಭಿಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ 85 ರನ್ ಬಾರಿಸಿ ಮಿಂಚಿದ್ದರು. ನಂತರ ಬಾಂಗ್ಲಾದೇಶ ವಿರುದ್ಧ ಅಜೇಯ 103 ರನ್ ಬಾರಿಸಿದರು. ಇನ್ನು ಲೀಗ್ ಹಂತದಲ್ಲಿ ಹಂತದಲ್ಲಿ ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ತಂಡವನ್ನು ಎದುರಿಸಿದ್ದಾಗ ಅವರು 95 ರನ್ ಗಳಿಸಿದ್ದರು. ಇದಕ್ಕೂ ಮುನ್ನ ವಾಂಖೆಡೆ ಕ್ರೀಡಾಂಗಣದಲ್ಲಿ ತಮ್ಮ 49 ನೇ ಶತಕವನ್ನು ತಲುಪುವ ಅವಕಾಶವನ್ನು ಕೂಡ ಕೊಹ್ಲಿ ಹೊಂದಿದ್ದರು. ಶ್ರೀಲಂಕಾ ವಿರುದ್ಧ 88 ರನ್ ಗಳಿಗೆ ನಿರ್ಗಮಿಸುವ ಮೂಲಕ ನಿರಾಸೆ ಅನುಭವಿಸಿದ್ದಾರೆ. ಆದರೆ ತಮ್ಮ ಜನ್ಮದಿನದಂದು ಕೊಹ್ಲಿ ಈಡನ್ ಗಾರ್ಡನ್ಸ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ವಿಶ್ವದಾಖಲೆಯ 49ನೇ ಶತಕವನ್ನು ಪೂರ್ಣಗೊಳಿಸಿದ್ದರು.

Story first published: Wednesday, November 15, 2023, 17:12 [IST]
Other articles published on Nov 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+