Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat kohli: ಭಾರತಕ್ಕೆ ಟೆಕ್ಷನ್ ಶುರು; ಗಾಯಗೊಂಡ ವಿರಾಟ್ ಕೊಹ್ಲಿ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಇದಕ್ಕೂ ಮುನ್ನ ಭಾರತ ತಂಡ ದೊಡ್ಡ ಹಿನ್ನಡೆ ಅನುಭವಿಸಿದೆ. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಫೈನಲ್ ಪಂದ್ಯಕ್ಕೂ ಮುನ್ನ ಅಭ್ಯಾಸ ಮಾಡುತ್ತಿದ್ದಾಗ ಗಾಯಗೊಂಡಿದ್ದಾರೆ. ಬಿಗ್ ಮ್ಯಾಚ್‌ಗೂ ಮುನ್ನ 'ರನ್ ಮೆಷಿನ್' ಗಾಯಗೊಂಡಿರುವುದರಿಂದ ಟೀಮ್ ಇಂಡಿಯಾ ಅಭಿಮಾನಿಗಳಿಗೆ ಟೆಕ್ಷನ್ ಶುರುವಾಗಿದೆ. ಈಗ ವಿರಾಟ್ ಕೊಹ್ಲಿ ಭಾನುವಾರ ಫೈನಲ್ ಪಂದ್ಯದಲ್ಲಿ ಆಡುತ್ತಾರೋ? ಇಲ್ಲವೋ? ಎಂಬ ಪ್ರಶ್ನೆ ಎದುರಾಗಿದೆ.

ವರದಿಗಳ ಪ್ರಕಾರ, ನ್ಯೂಜಿಲೆಂಡ್ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಮುನ್ನ ಅಂತಿಮ ಅಭ್ಯಾಸದ ಅವಧಿಯಲ್ಲಿ ವಿರಾಟ್ ಕೊಹ್ಲಿ ಗಾಯಗೊಂಡಿದ್ದಾರೆ. ನೆಟ್ಸ್‌ನಲ್ಲಿ ವೇಗದ ಬೌಲರ್ ಎದುರಿಸುವಾಗ ಕೊಹ್ಲಿಯ ಮೊಣಕಾಲಿನ ಬಳಿ ಗಾಯವಾಗಿದೆ.

Virat Kohli injured during practice session ahead of Champions Trophy final against New Zealand

ಮೊಣಕಾಲಿನ ಬಳಿ ಗಾಯಗೊಂಡು ಚಿಕಿತ್ಸೆ ಪಡೆದ ನಂತರ ವಿರಾಟ್ ಕೊಹ್ಲಿ ಅಭ್ಯಾಸವನ್ನು ಅರ್ಧದಲ್ಲೇ ತೊರೆದಿದ್ದಾರೆ. ಟೀಮ್ ಇಂಡಿಯಾದ ಫಿಸಿಯೋ ಸಿಬ್ಬಂದಿ ಅವರಿಗೆ ತಕ್ಷಣ ಚಿಕಿತ್ಸೆ ನೀಡಿದ್ದಾರೆ. ಫಿಸಿಯೋ ಸಿಬ್ಬಂದಿ ಗಾಯಗೊಂಡ ಭಾಗಕ್ಕೆ ಸ್ಪ್ರೇ ಹಚ್ಚಿ ಬ್ಯಾಂಡೇಜ್ ಹಾಕಿದ್ದಾರೆ. ಗಾಯದಿಂದ ಹೊರಗುಳಿದ ಕೊಹ್ಲಿ ಇತರ ಆಟಗಾರರು ಅಭ್ಯಾಸ ಮಾಡುವುದನ್ನು ವೀಕ್ಷಿಸುತ್ತಾ ಮೈದಾನದಲ್ಲಿಯೇ ಇದ್ದರು.

ವಿರಾಟ್ ಕೊಹ್ಲಿ ಗಾಯದ ಬಗ್ಗೆ ಇನ್ನೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಆದರೆ ಅವರು ನ್ಯೂಜಿಲೆಂಡ್ ವಿರುದ್ಧ ಆಡಲು ಫಿಟ್ ಆಗಿರುತ್ತಾರೆ ಎಂದು ಕೋಚಿಂಗ್ ಸಿಬ್ಬಂದಿ ಸ್ಪಷ್ಟಪಡಿಸಿದ್ದಾರೆ. ನಾಳೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಗೆಲ್ಲಲು ವಿರಾಟ್ ಕೊಹ್ಲಿ ಆಡುವುದು ಎಷ್ಟು ಮುಖ್ಯ ಎಂದು ಟೀಮ್ ಇಂಡಿಯಾ ಅಭಿಮಾನಿಗಳಿಗೆ ತಿಳಿದಿದೆ.

ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಅತ್ಯುತ್ತಮವಾಗಿದೆ. ವಿರಾಟ್ 4 ಇನ್ನಿಂಗ್ಸ್‌ಗಳಲ್ಲಿ 72.33 ರ ಸರಾಸರಿಯಲ್ಲಿ ಮತ್ತು 83.14 ರ ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 217 ರನ್ ಗಳಿಸಿದ್ದಾರೆ. ಅವರು ಪಾಕಿಸ್ತಾನ ವಿರುದ್ಧ ಅದ್ಭುತ ಶತಕ ಸಿಡಿಸಿ ಮಿಂಚಿದ್ದರು. ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ನಲ್ಲಿ 84 ರನ್‌ಗಳನ್ನು ಕಲೆ ಹಾಕುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ವಿರಾಟ್ ಇದುವರೆಗಿನ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದು, ಟೂರ್ನಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಸಂಭಾವ್ಯ ಪ್ಲೇಯಿಂಗ್-11

ಭಾರತ: ಶುಭಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಅಕ್ಸರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ.

Story first published: Saturday, March 8, 2025, 23:40 [IST]
Other articles published on Mar 8, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+