Virat Kohli ಎಲ್‌ಎಸ್‌ಜಿ ವಿರುದ್ಧ ಕಣಕ್ಕೆ ಇಳಿಯುತ್ತಾರಾ? ಇಲ್ಲಿದೆ ಮಾಹಿತಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳ ನಡುವೆ ಬಿಗ್ ಫೈಟ್ ಬುಧವಾರ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಆರ್‌ಸಿಬಿ ತಂಡದ್ದಾಗಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೈದಾನಕ್ಕೆ ಇಳಿಯುತ್ತಾರಾ? ಎಂಬ ಪ್ರಶ್ನೆ ಉದ್ಭವಿಸಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಇವರು ಮುಂಬೈ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಸಹ ಮಾಡಿರಲಿಲ್ಲ. ಹೀಗಾಗಿ ಇವರು ಚಿನ್ನಸ್ವಾಮಿ ಮೈದಾನದಲ್ಲಿ ಕಣಕ್ಕೆ ಇಳಿಯುತ್ತಾರೋ ಇಲ್ಲವೋ ಎಂಬ ಬಗ್ಗೆ ಅನುಮಾನಗಳು ಮೂಡಿವೆ. ಈ ಬಗ್ಗೆ ಈಗ ಸ್ಪಷ್ಟತೆ ಸಿಕ್ಕಿದೆ.

ವಿರಾಟ್ ಕೊಹ್ಲಿ ಎಲ್‌ಎಸ್‌ಜಿ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದಲ್ಲಿ ಕಾಣಿಸಿಕೊಂಡಿದ್ದಾರೆ. ಇವರು ತಮ್ಮ ಸಹ ಆಟಗರರೊಂದಿಗೆ ಅಭ್ಯಾಸದಲ್ಲಿ ಭಾಗವಹಿಸಿದ್ದು ಕಂಡು ಬಂದಿದೆ. ಆದರೆ ಇವರು ಅಭ್ಯಾಸದ ವೇಳೆ ತಮ್ಮ ಎಡಗಾಲಿನ ಗಾಯದ ನೋವು ಸ್ಪಷ್ಟವಾಗಿ ಕಾಣುತ್ತಿತ್ತು.
ಎಲ್‌ಎಸ್‌ಜಿ ಒಂದು ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಇಬ್ಬರೂ ಆಟಗಾರರು ಕೊಂಚ ಹೊತ್ತು ಮಾತನಾಡಿದರು. ಈ ಭೇಟಿಯ ವೇಳೆ ವಿರಾಟ್ ಕೊಹ್ಲಿ ತಮ್ಮ ಮೊಣಕಾಲಿಗೆ ಪಟ್ಟಿಕಟ್ಟಿಕೊಂಡಿದ್ದು ಕಾಣಿಸುತ್ತದೆ. ವಿರಾಟ್ ಕೊಹ್ಲಿ ಮಂಗಳವಾರ ತಂಡದೊಂದಿಗೆ ಅಭ್ಯಾಸ ನಡೆಸಿದರು.
ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ಮೈದಾನಕ್ಕೆ ಇಳಿಯುತ್ತಾರೋ ಇಲ್ಲವೋ ಎಂಬ ಬಗ್ಗೆ ಇನ್ನು ಯಾವುದೇ ಸ್ಪಷ್ಟತೆ ಇಲ್ಲ. ಇವರು ಅಭ್ಯಾಸ ಮಾಡುವ ಧಾಟಿಯನ್ನು ನೋಡಿದರೆ, ಬುಧವಾರದ ಪಂದ್ಯದಲ್ಲಿ ಇವರು ಕಣಕ್ಕೆ ಇಳಿಯಬಹುದು ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ. ವಿರಾಟ್ ಕೊಹ್ಲಿ ಈ ಆವೃತ್ತಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. 59ರ ಸರಾಸರಿಯಲ್ಲಿ 179 ರನ್ ಸಿಡಿಸಿದ್ದಾರೆ. ಈಗ ಆರ್‌ಸಿಬಿ ಅಭಿಮಾನಿಗಳಲ್ಲಿ ಇವರು ಕಣಕ್ಕೆ ಇಳಿಯದೇ ಇದ್ದರೆ ಹೇಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ವಿರಾಟ್ ಕಣಕ್ಕೆ ಇಳಿಯದಿದ್ದರೆ...
ವಿರಾಟ್ ಕೊಹ್ಲಿ ಎಲ್‌ಎಸ್‌ಜಿ ತಂಡದ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿಯದೇ ಇದ್ದಲ್ಲಿ ದುಬಾರಿ ಆಟಗಾರ ವೆಂಕಟೇಶ್ ಅಯ್ಯರ್ ಅವರಿಗೆ ಆಡುವ ಅವಕಾಶವನ್ನು ಪಡೆಯಬಹುದು. ಇವರು ಈ ಲೀಗ್‌ನಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದಾರೆ. ಅಲ್ಲದೆ ಆ ಪಂದ್ಯದಲ್ಲಿ ಮಿಡ್ಲ್ ಆರ್ಡರ್‌ನಲ್ಲಿ ಬ್ಯಾಟ್ ಮಾಡಿದ್ದರು. ಒಂದು ವೇಳೆ ವಿರಾಟ್ ಕೊಹ್ಲಿ ಕಣಕ್ಕೆ ಇಳಿಯದೇ ಇದ್ದಲ್ಲಿ ವೆಂಕಟೇಶ್ ಅಯ್ಯರ್ ಆರಂಭಿಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications