ಐಪಿಎಲ್ ಇತಿಹಾಸದಲ್ಲಿಯೇ ಯಾರೂ ಮಾಡಿರದ ದಾಖಲೆ ಮಾಡಲಿದ್ದಾರೆ ವಿರಾಟ್ ಕೊಹ್ಲಿ!

ಇದೇ ವರ್ಷ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಲೀಗ್ ಹಂತದ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 29 ಪಂದ್ಯಗಳು ಯಶಸ್ವಿಯಾಗಿ ನಡೆದ ನಂತರ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು. ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಇದೀಗ ಸೆಪ್ಟೆಂಬರ್ 19ರ ಭಾನುವಾರದಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದೆ.

ಐಪಿಎಲ್: ಚೆನ್ನೈ ಮತ್ತು ಮುಂಬೈ ನಡುವಿನ ಪಂದ್ಯ ವೀಕ್ಷಿಸಿದ ನಟ ಕಿಚ್ಚ ಸುದೀಪ್ ದಂಪತಿಐಪಿಎಲ್: ಚೆನ್ನೈ ಮತ್ತು ಮುಂಬೈ ನಡುವಿನ ಪಂದ್ಯ ವೀಕ್ಷಿಸಿದ ನಟ ಕಿಚ್ಚ ಸುದೀಪ್ ದಂಪತಿ

ಹೀಗೆ ಸೆಪ್ಟೆಂಬರ್ 19ರ ಭಾನುವಾರದಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 20 ರನ್‌ಗಳ ಜಯ ಸಾಧಿಸುವುದರ ಮೂಲಕ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಶುಭಾರಂಭವನ್ನು ಮಾಡಿದೆ.

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದ ಮೊದಲ ಪಂದ್ಯ ಮುಗಿದ ನಂತರ ಇದೀಗ ಎಲ್ಲರ ಚಿತ್ತ ಸೆಪ್ಟೆಂಬರ್ 20ರಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ಮೇಲಿದೆ. ಇನ್ನು ಈ ಪಂದ್ಯ ಆರಂಭಕ್ಕೂ ಮುನ್ನ ಸಾಕಷ್ಟು ರೋಚಕತೆ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದು ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲನೇ ಹಂತದಲ್ಲಿ ಈ ಎರಡೂ ತಂಡಗಳು ಸೆಣಸಾಡಿದ್ದಾಗ ಬೆಂಗಳೂರು ತಂಡ ಬೃಹತ್ ಮೊತ್ತವನ್ನು ದಾಖಲಿಸುವುದರ ಮೂಲಕ ಕೋಲ್ಕತ್ತಾ ವಿರುದ್ಧ 38 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತ್ತು. ಹೀಗಾಗಿ ಈ ಬಾರಿಯ ಟೂರ್ನಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿರುವ ಈ ಎರಡೂ ತಂಡಗಳ ನಡುವೆ ದೊಡ್ಡ ಮಟ್ಟದ ಪೈಪೋಟಿ ನಡೆಯುವುದು ಖಚಿತ.

ಕೊಹ್ಲಿ ನಾಯಕತ್ವ ಬಿಟ್ಟುಕೊಡಬೇಕಾದ ಅಗತ್ಯವೇ ಇರಲಿಲ್ಲ, ಯಾಕೆ ಈ ನಿರ್ಧಾರ?; ದಿಗ್ಗಜ ಕ್ರಿಕೆಟಿಗನ ಬೇಸರಕೊಹ್ಲಿ ನಾಯಕತ್ವ ಬಿಟ್ಟುಕೊಡಬೇಕಾದ ಅಗತ್ಯವೇ ಇರಲಿಲ್ಲ, ಯಾಕೆ ಈ ನಿರ್ಧಾರ?; ದಿಗ್ಗಜ ಕ್ರಿಕೆಟಿಗನ ಬೇಸರ

ಇನ್ನು ಈ ಪಂದ್ಯದಲ್ಲಿ ಎರಡೂ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯುವುದು ಮಾತ್ರವಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿಯೇ ಯಾವುದೇ ಆಟಗಾರ ಕೂಡ ಮಾಡಿರದ ಸಾಧನೆಯೊಂದನ್ನು ಮಾಡಿ ನೂತನ ದಾಖಲೆಯನ್ನು ನಿರ್ಮಿಸಲಿದ್ದಾರೆ. ವಿರಾಟ್ ಕೊಹ್ಲಿ ಮಾಡಲಿರುವ ದಾಖಲೆಯ ವಿವರ ಮುಂದಿದೆ ಓದಿ..

ಒಂದೇ ಫ್ರಾಂಚೈಸಿ ಪರ 200 ಪಂದ್ಯಗಳ ದಾಖಲೆ

ಒಂದೇ ಫ್ರಾಂಚೈಸಿ ಪರ 200 ಪಂದ್ಯಗಳ ದಾಖಲೆ

ಸೆಪ್ಟೆಂಬರ್ 20ರ ಸೋಮವಾರದಂದು ಅಬುಧಾಬಿಯಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬೆಂಗಳೂರು ತಂಡದ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ತಮ್ಮ 200ನೇ ಐಪಿಎಲ್ ಪಂದ್ಯವನ್ನು ಆಡಲಿದ್ದು, ಈ ಎಲ್ಲಾ ಪಂದ್ಯಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಆಡಿದ್ದಾರೆ. ಐಪಿಎಲ್ ಆರಂಭವಾದಾಗಿನಿಂದ ಇದುವರೆಗೂ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮಾತ್ರ ಆಟವಾಡಿರುವ ವಿರಾಟ್ ಕೊಹ್ಲಿ ಒಂದೇ ಫ್ರಾಂಚೈಸಿಯ ಪರ 200 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಲಿದ್ದಾರೆ. ಇನ್ನುಳಿದಂತೆ ಕೆಲ ಆಟಗಾರರು 200ಕ್ಕೂ ಹೆಚ್ಚು ಐಪಿಎಲ್ ಪಂದ್ಯಗಳನ್ನು ಆಡಿದ್ದರೂ ಸಹ ಒಂದೇ ಫ್ರಾಂಚೈಸಿ ಪರ ಯಾರೂ ಸಹ 200 ಪಂದ್ಯಗಳನ್ನಾಡಿಲ್ಲ.

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿರುವ ಟಾಪ್ 5 ಆಟಗಾರರು

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿರುವ ಟಾಪ್ 5 ಆಟಗಾರರು

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿರುವ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ ನೋಡಿ..

1. ಎಂಎಸ್ ಧೋನಿ - 212 ಪಂದ್ಯಗಳು

2. ರೋಹಿತ್ ಶರ್ಮಾ - 207 ಪಂದ್ಯಗಳು

3. ದಿನೇಶ್ ಕಾರ್ತಿಕ್ - 203 ಪಂದ್ಯಗಳು

4. ಸುರೇಶ್ ರೈನಾ - 201 ಪಂದ್ಯಗಳು

5. ವಿರಾಟ್ ಕೊಹ್ಲಿ - 199 ಪಂದ್ಯಗಳು

ಈ ಟೂರ್ನಿ ನಂತರ ಬೆಂಗಳೂರು ತಂಡದ ನಾಯಕತ್ವಕ್ಕೆ ಕೊಹ್ಲಿ ವಿದಾಯ

ಈ ಟೂರ್ನಿ ನಂತರ ಬೆಂಗಳೂರು ತಂಡದ ನಾಯಕತ್ವಕ್ಕೆ ಕೊಹ್ಲಿ ವಿದಾಯ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಭಾಗ ಆರಂಭವಾಗುವ ಮುನ್ನವೇ ಮಹತ್ವದ ಘೋಷಣೆಯೊಂದನ್ನು ಮಾಡಿದ ವಿರಾಟ್ ಕೊಹ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, September 20, 2021, 16:27 [IST]
Other articles published on Sep 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X