Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ: ಈ ಸಾಧನೆ ಮಾಡಿದ ಭಾರತದ ಎರಡನೇ ಆಟಗಾರ

Virat Kohli Is The 2nd Indian After Dravid To Completed 300 Catches In International Cricket

ಭಾರತ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 300 ಕ್ಯಾಚ್‌ಗಳನ್ನು ಪಡೆದ ಎರಡನೇ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಮತ್ತು ಅಂತಿಮ ಟೆಸ್ಟ್‌ನ ಎರಡನೇ ದಿನದಂದು ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ರವಿಚಂದ್ರನ್ ಅಶ್ವಿನ್ ಬೌಲಿಂಗ್‌ನಲ್ಲಿ ಮೊದಲ ಸ್ಲಿಪ್‌ನಲ್ಲಿ ನಾಥನ್ ಲಿಯಾನ್ ಕ್ಯಾಚ್ ಪಡೆಯುವ ಮೂಲಕ 300 ಕ್ಯಾಚ್‌ ಪಡೆದ ಮೈಲಿಗಲ್ಲು ಸಾಧಿಸಿದರು.

ಭಾರತ ತಂಡದ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 334 ಕ್ಯಾಚ್ ಪಡೆಯುವ ಮೂಲಕ ಭಾರತದ ಪರವಾಗಿ ಅತಿ ಹೆಚ್ಚು ಕ್ಯಾಚ್ ಪಡೆದ ಫೀಲ್ಡರ್ ಎನಿಸಿಕೊಂಡಿದ್ದಾರೆ. ಭಾರತ ತಂಡದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ 16 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ 261 ಕ್ಯಾಚ್ ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಮಾತ್ರ ಗಣನೆಗೆ ತೆಗೆದುಕೊಂಡರೆ, ಸುನಿಲ್ ಗವಾಸ್ಕರ್ ಅವರ 108 ಕ್ಯಾಚ್‌ಗಳ ಸಾಧನೆಯನ್ನು ಹಿಂದಿಕ್ಕಿದ್ದಾರೆ. 107 ಪಂದ್ಯಗಳಲ್ಲಿ 182 ಇನ್ನಿಂಗ್ಸ್‌ಗಳಿಂದ ವಿರಾಟ್ ಕೊಹ್ಲಿ ಕೂಡ 109 ಕ್ಯಾಚ್‌ಗಳನ್ನು ಪಡೆದುಕೊಂಡಿದ್ದಾರೆ. ರಾಹುಲ್ ದ್ರಾವಿಡ್ ಟೆಸ್ಟ್ ಕ್ರಿಕೆಟ್‌ನಲ್ಲಿ 210 ಕ್ಯಾಚ್ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ.

https://kannada.mykhel.com/cricket/india-vs-australia-sanjay-manjrekar-praises-r-ashwin-said-he-will-be-proud-of-his-5-wicket-haul-in-031471.html

ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ನಂಬರ್ 1

ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 271 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 141 ಕ್ಯಾಚ್ ಪಡೆದುಕೊಂಡಿದ್ದರೆ, ಸಚಿನ್ ತೆಂಡೂಲ್ಕರ್ 463 ಪಂದ್ಯಗಳಿಂದ 140 ಕ್ಯಾಚ್‌ ಪಡೆದುಕೊಂಡು ಮೂರನೇ ಸ್ಥಾನದಲ್ಲಿದ್ದಾರೆ ಸ್ಥಾನದಲ್ಲಿದ್ದಾರೆ. 334 ಪಂದ್ಯಗಳಿಂದ 256 ಕ್ಯಾಚ್‌ಗಳನ್ನು ಪಡೆದಿರುವ ಮೊಹಮ್ಮದ್ ಅಜರುದ್ದೀನ್ ಭಾರತದ ಪರವಾಗಿ ಅತಿ ಹೆಚ್ಚು ಕ್ಯಾಚ್ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.

ಏಕದಿನ ಮಾದರಿಯಲ್ಲಿ 448 ಪಂದ್ಯಗಳಿಂದ 218 ಕ್ಯಾಚ್‌ಗಳನ್ನು ಪಡೆದಿರುವ ಮಹೇಲ ಜಯವರ್ಧೆನೆ ಅಗ್ರಸ್ಥಾನದಲ್ಲಿದ್ದಾರೆ. 375 ಪಂದ್ಯಗಳಿಂದ 160 ಕ್ಯಾಚ್ ಪಡೆದಿರುವ ರಿಕಿ ಪಾಂಟಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.

https://kannada.mykhel.com/cricket/india-vs-australia-sanjay-manjrekar-praises-r-ashwin-said-he-will-be-proud-of-his-5-wicket-haul-in-031471.html

480ಕ್ಕೆ ಆಲೌಟ್ ಆದ ಆಸ್ಟ್ರೇಲಿಯಾ

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ 480 ರನ್‌ಗಳಿಗೆ ಆಲೌಟ್ ಆಗಿದೆ. ಉಸ್ಮಾನ್ ಖವಾಜಾ 180 ರನ್ ಗಳಿಸಿದರೆ, ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ 114 ರನ್‌ ಗಳಿಸಿದರು. ನಾಥನ್ ಲಿಯಾನ್ 34 ರನ್ ಮತ್ತು ಟಾಡ್ ಮರ್ಫಿ 41 ರನ್ ಗಳಿಸಿ ಆಸ್ಟ್ರೇಲಿಯಾ ಬೃಹತ್ ಮೊತ್ತ ಕಲೆಹಾಕಲು ಸಹಾಯ ಮಾಡಿದರು.

ಭಾರತದ ಪರವಾಗಿ ರವಿಚಂದ್ರನ್ ಅಶ್ವಿನ್ 6 ವಿಕೆಟ್ ಪಡೆಯುವ ಮೂಲಕ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದರು. ಬಾರ್ಡರ್ ಗವಾಸ್ಕರ್ ಟ್ರೋಫಿ ಇತಿಹಾಸದಲ್ಲಿ 113 ವಿಕೆಟ್ ಪಡೆದ ಅಶ್ವಿನ್ ಅನಿಲ್ ಕುಂಬ್ಳೆ ದಾಖಲೆಯನ್ನು ಹಿಂದಿಕ್ಕಿದ್ದು ನಾಥನ್ ಲಿಯಾನ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ನಂತರ ಬ್ಯಾಟಿಂಗ್ ಮಾಡಿದ ಭಾರತ 10 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 35 ರನ್ ಗಳಿಸುವ ಮೂಲಕ ಎರಡನೇ ದಿನದಾಟವನ್ನು ಮುಗಿಸಿದೆ. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದು ಮೂರನೇ ದಿನಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ.

Story first published: Friday, March 10, 2023, 20:30 [IST]
Other articles published on Mar 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+