ಸಚಿನ್ ದಾಖಲೆಯಿಂದ ಎರಡೇ ಹೆಜ್ಜೆ ದೂರ ನಿಂತಿರುವ ವಿರಾಟ್ ಕೊಹ್ಲಿ
ದಕ್ಷಿಣ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ಮೊದಲ ಟೆಸ್ಟ್‌ನಲ್ಲಿ ಸೋಲು ಕಂಡಿದೆ. ಆದರೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್‌ಗೆ ಮರಳಿದ್ದು ತಂಡದ ಚಿಂತೆಯನ್ನು ದೂರ ಮಾಡಿದೆ.
ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಮತ್ತು 32 ರನ್‌ಗಳಿಂದ ಸೋತಿದೆ. ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 76 ರನ್ ಕಲೆ ಹಾಕಿ ಅಬ್ಬರಿಸಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಅವರಿಗೆ ಯಾವೊಬ್ಬ ಬ್ಯಾಟರ್ ಸಾಥ್ ನೀಡಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನಲ್ಲಿ ಕೊಹ್ಲಿ ದೊಡ್ಡ ದಾಖಲೆಯನ್ನು ಬರೆಯುವ ಹೊಸ್ತಿಲಲ್ಲಿ ನಿಂತಿದ್ದಾರೆ. ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಕೊಹ್ಲಿ ಕೇವಲ ಒಂದು ಅರ್ಧಶತಕವನ್ನು ಗಳಿಸಿದರೆ, ಅವರು ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ 'ಶ್ರೇಷ್ಠ ದಾಖಲೆ'ಯನ್ನು ಸರಿಗಟ್ಟುತ್ತಾರೆ.
ಭಾರತದ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರು ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ ಗರಿಷ್ಠ ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಸಚಿನ್ ಸೆನಾ ರಾಷ್ಟ್ರಗಳಲ್ಲಿ ಒಟ್ಟು 74 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಲೆಕ್ಕಾಚಾರದಲ್ಲಿ ವಿರಾಟ್ ಕೊಹ್ಲಿ 73 ಬಾರಿ 50ಕ್ಕೂ ಹೆಚ್ಚು ರನ್ ಬಾರಿಸಿದ್ದು, ಎರಡನೇ ಸ್ಥಾನದಲ್ಲಿದ್ದಾರೆ.

ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಕೊಹ್ಲಿ ಇನ್ನಿಂಗ್ಸ್‌ನಲ್ಲಿ 50 ರನ್‌ಗಳ ಗಡಿ ದಾಟಿದರೆ, ಏಳು ದೇಶಗಳ ನಡುವೆ ಜಂಟಿ ಗರಿಷ್ಠ 50 ಪ್ಲಸ್ ಸ್ಕೋರ್ ಮಾಡಿದ ಬ್ಯಾಟ್ಸ್‌ಮನ್ ಆಗಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡುವಾಗ ಕೊಹ್ಲಿ 50 ರನ್ ಗಡಿ ದಾಟಿದರೆ, ಅವರು ದಿಗ್ಗಜ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯುತ್ತಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಹಾಗೂ 32 ರನ್‌ಗಳಿಂದ ಹೀನಾಯ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗದಲ್ಲೂ ಸೋಲು ಕಂಡಿದೆ. ಬ್ಯಾಟಿಂಗ್‌ನಲ್ಲಿ ಕೆಎಲ್ ರಾಹುಲ್ ಮೊದಲ ಇನ್ನಿಂಗ್ಸ್‌ನಲ್ಲಿ 101 ರನ್ ಮತ್ತು ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ 76 ರನ್ ಗಳಿಸಿದರು. ಇದಲ್ಲದೇ ಭಾರತದ ಎಲ್ಲಾ ಬ್ಯಾಟ್ಸ್ ಮನ್ ಗಳು ಪ್ಲಾಪ್ ಶೋ ನೀಡಿದ್ದಾರೆ. ಈಗ ಎರಡನೇ ಟೆಸ್ಟ್ ಜನವರಿ 03 ರಿಂದ ನಡೆಯಲಿದೆ. ಸರಣಿ ಡ್ರಾ ಮಾಡಿಕೊಳ್ಳಲು ಟೀಂ ಇಂಡಿಯಾ ಎರಡನೇ ಟೆಸ್ಟ್‌ನಲ್ಲಿ ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications