ಕ್ರಿಕೆಟ್: ವೆಸ್ಟ್ ಇಂಡೀಸ್ ಪ್ರವಾಸ, ಕೊಹ್ಲಿ ಮತ್ತು ಬುಮ್ರಾಗೆ ವಿಶ್ರಾಂತಿ

ಹೊಸದಿಲ್ಲಿ, ಜೂನ್ 23: ಅಮೆರಿಕ ಮತ್ತು ಕೆರಿಬಿಯನ್‌ನಲ್ಲಿ ಆಗಸ್ಟ್ 3ರಂದು ಆರಂಭವಾಗಲಿರುವ ಭಾರತ ತಂಡದ ವೆಸ್ಟ್ ಇಂಡೀಸ್ ಪ್ರವಾಸಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾಗೆ ಸೀಮಿತ ಓವರ್‌ಗಳ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.
ವಿಶ್ವಕಪ್ ವೇಳಾಪಟ್ಟಿ / ಮುಖಾಮುಖಿ ದಾಖಲೆಗಳು / ಅಂಕಪಟ್ಟಿ
ಇನ್ನು ಚೊಚ್ಚಲ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಸಲುವಾಗಿ ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಸರಣಿ ಹೊತ್ತಿಗೆ ವಿರಾಟ್ ಕೊಹ್ಲಿ ಮತ್ತು ಜಸ್‌ಪ್ರೀತ್ ಬುಮ್ರಾ ತಂಡ ಸೇರಿಕೊಳ್ಳಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ವಿರಾಟ್ ಮತ್ತು ಬುಮ್ರಾ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿ ಮತ್ತು 3 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದಲೂ ವಿರಾಟ್ ಆವಾಡುತ್ತಿದ್ದಾರೆ. ಬುಮ್ರಾ ಅವರ ಆಟದ ಹೊರೆಯನ್ನೂ ತಗ್ಗಿಸಬೇಕಿದೆ. ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಅವರು ತಂಡ ಸೇರಿಕೊಳ್ಳಲಿದ್ದಾರೆ," ಎಂದು ಹೆಸರು ಹೇಳಲಿಚ್ಚಿಸದ ಬಿಸಿಸಿಐ ಅಧಿಕಾರಿ ಒಬ್ಬರು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ್ದಾರೆ.
ವಿಶ್ವಕಪ್ ಬಳಿಕ ಮುಂದಿನ ಸರಣಿ ಆರಂಭವಾಗುವುದಕ್ಕೂ ಮೊದಲು ಕೆಲ ಪ್ರಮುಖ ಆಟಗಾರರು ಕೂಡ ವಿಶ್ರಾಂತಿ ಪಡೆಯಲಿದ್ದಾರೆ. ಪ್ರಸಕ್ತ ವಿಶ್ವಕಪ್‌ನಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದು ಅಜೇಯವಾಗಿ ಉಳಿದಿರುವ ಭಾರತ ತಂಡ ಸೆಮಿಫೈನಲ್ಸ್ ಪ್ರವೇಶವನ್ನು ಎದುರು ನೋಡುತ್ತಿದೆ.
ಒಂದು ವೇಳೆ ಭಾರತ ತಂಡ ಫೈನಲ್ ತಲುಪಿದರೆ ಜುಲೈ 14ರವರೆಗೂ ತಂಡದ ಪ್ರಮುಖ ಆಟಗಾರರು ಆಟವಾಡುತ್ತಲೇ ಇರುತ್ತದೆ. ಹೀಗಾಗಿ ಅವರಿಗೆ ಅಗತ್ಯದ ವಿಶ್ರಾಂತಿ ಒದಗಿಸುವ ಅನಿವಾರ್ಯತೆ ಇದೆ. ಹೀಗಾಗಿ ಕೊಹ್ಲಿ ಮತ್ತು ಬುಮ್ರಾ ಆಗಸ್ಟ್ 17ರಂದು ಆಂಟಿಗುವಾದಲ್ಲಿ ಆರಂಭವಾಗಲಿರುವ 3 ದಿನಗಳ ಅಭ್ಯಾಸ ಪಂದ್ಯಕ್ಕೂ ಮೊದಲು ತಂಡ ಸೇರಕೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications