ಅಭಿಮಾನಿಗಳಿ ವಿರಾಟ್ ಕೊಹ್ಲಿ ಸಂದೇಶ: ಅದೇ ಅಧ್ಯಾಯ ಹೊಸ ಕಥೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಹಾಲಿ ಚಾಂಪಿಯನ್ ಪಟ್ಟವನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪ್ರಶಸ್ತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮೈದಾನದಲ್ಲಿ ಶ್ರಮಿಸಲಿದೆ. ಈ ವೇಳೆ ತಂಡದ ಸ್ಟಾರ್ ಆಟಗಾರರು ತಂಡವನ್ನು ಸೇರಿಕೊಂಡಿದ್ದು ತಂಡದ ಬಲವನ್ನು ಹೆಚ್ಚಿಸಿದೆ. ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಈಗಾಗಲೇ ಆರ್‌ಸಿಬಿ ತಂಡ ಸೇರಿದ್ದಾರೆ. ಇವರು ಆರ್‌ಸಿಬಿ ತಂಡವನ್ನು ಸೇರಿದ್ದರ ಬಗ್ಗೆ ಈಗಾಗಲೇ ಆರ್‌ಸಿಬಿ ತಂಡ ಸಾಮಾಜಿಕ ತಾಣದಲ್ಲಿ ವಿಡಿಯೋ ಹಂಚಿಕೊಂಡಿತ್ತು.
ಯುಗಾದಿಯ ಶುಭಸಂದರ್ಭದಲ್ಲಿ ಆರ್‌ಸಿಬಿ ಮ್ಯಾನೇಜ್ಮೆಂಟ್ ಮತ್ತೊಂದು ವಿಡಿಯೋ ಶೇರ್ ಮಾಡಿದೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಪೂರ್ಣ ಆಕ್ಷನ್ ಮೋಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಮೂಲಕ ಅಭಿಮಾನಿಗಳಲ್ಲಿ ವಿರಾಟ್ ಕೊಹ್ಲಿ ಹೊಸ ಉತ್ಸಾಹ ತುಂಬಿದೆ.

ವಿಡಿಯೋವನ್ನು ಆರ್‌ಸಿಬಿ ಸಿನಿಮ್ಯಾಟಿಕ್ ರೀತಿಯಲ್ಲಿ ಚಿತ್ರೀಕರಣ ಮಾಡಿದೆ. ಈ ವಿಡಿಯೋವನ್ನು ನೋಡಿದ ಅಭಿಮಾನಿಗಳು ಸಖತ್ ಖುಷ್ ಆಗಿದ್ದಾರೆ. ಈ ವಿಡಿಯೋ ಆರಂಭದಲ್ಲಿ ಕಿಂಗ್ ಇಸ್ ಬ್ಯಾಕ್ ಟು ಕಿಂಗ್‌ಡಮ್ ಎಂದು ಹೇಳಲಾಗುತ್ತದೆ. ಆರ್‌ಸಿಬಿ ಮ್ಯಾನೇಜ್ಮೆಂಟ್ ಹಂಚಿಕೊಂಡಿರುವ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ನಾನು ಮತ್ತೊಂದು ಚೇಸ್‌ಗೆ ಸಿದ್ಧ ಎಂದು ತಿಳಿಸಿದ್ದಾರೆ. ಅಲ್ಲದೆ ನಾನು ಆರ್‌ಸಿಬಿ ಜೆರ್ಸಿ ತೊಟ್ಟಾಗಲೆಲ್ಲಾ, ನನ್ನ ಎಲ್ಲ ಶಕ್ತಿಯನ್ನು ಹಾಕಿ ಆಡುವೆ ಎಂದು ಹೇಳಿದ್ದಾರೆ. ಅಲ್ಲದೆ ಇದೇ ವಿಡಿಯೋದಲ್ಲಿ ವಿರಾಟ್ ಅದೇ ಅಧ್ಯಾಯ ಹೊಸ ಕಥೆ ಎಂದು ಹೇಳಿದ್ದಾರೆ.
ಐಪಿಎಲ್‌ನಲ್ಲಿ ವಿರಾಟ್ ಸಾಧನೆ
ವಿರಾಟ್ ಕೊಹ್ಲಿ ಈ ವರೆಗೆ ಐಪಿಎಲ್‌ನಲ್ಲಿ ಆಡಿದ 267 ಪಂದ್ಯಗಳಲ್ಲಿ, ಅವರು 39.54 ರ ಸರಾಸರಿಯಲ್ಲಿ 8,661 ರನ್ ಕಲೆ ಹಾಕಿದ್ದು, ಇದರಲ್ಲಿ ಎಂಟು ಶತಕ ಸೇರಿವೆ. ಕಳೆದ ವರ್ಷ, ಆರ್‌ಸಿಬಿ ಚೊಚ್ಚಲ ಬಾರಿಗೆ ಪ್ರಶಸ್ತಿಯನ್ನು ಗೆಲ್ಲುವಲ್ಲಿ ವಿರಾಟ್ ಕೊಹ್ಲಿ ಅವರು ವಿಶೇಷ ಕೊಡುಗೆ ನೀಡಿದ್ದಾರೆ. ಇವರು 18ನೇ ಆವೃತ್ತಿಯಲ್ಲಿ ಆಡಿದ 15 ಪಂದ್ಯಗಳಲ್ಲಿ 54.75 ರ ಸರಾಸರಿಯಲ್ಲಿ 657 ರನ್ ಗಳಿಸಿದ್ದು, ಇದರಲ್ಲಿ ಎಂಟು ಅರ್ಧಶತಕಗಳು ಸೇರಿವೆ. ಕೊಹ್ಲಿ ಈಗಾಗಲೇ ಐಪಿಎಲ್‌ನ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಇವರು ಲೀಗ್‌ನಲ್ಲಿ 8 ಸಾವಿರಕ್ಕೂ ಅಧಿಕ ರನ್ ಬಾರಿಸಿದ ಹೆಗ್ಗಳಿಕೆ ವಿರಾಟ್‌ಗೆ ಸಲ್ಲುತ್ತದೆ. ಅಲ್ಲದೆ ಲೀಗ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಸಹ ಇವರೇ ಬಾರಿಸಿದ್ದಾರೆ.
ಈ ಬಾರಿ ಆರ್‌ಸಿಬಿ ತಂಡ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಲಿದೆ. ವಿರಾಟ್ ಕೊಹ್ಲಿ ಅವರ ಭರ್ಜರಿ ಫಾರ್ಮ್ ತಂಡಕ್ಕೆ ಹೊಸ ಉತ್ಸಾಹ ತುಂಬಲಿದೆ. ಆರ್‌ಸಿಬಿ ಮಾರ್ಚ್ 28 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಆರ್‌ಸಿಬಿ ಎರಡನೇ ಬಾರಿಗೆ ಟ್ರೋಫಿ ಎತ್ತುವ ಕನಸು ಹೊಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications