For Quick Alerts
ALLOW NOTIFICATIONS  
For Daily Alerts
 

IND vs PAK: ವಿರಾಟ್ ಕೊಹ್ಲಿ ಹೊಡೆತಕ್ಕೆ ಗಂಟು ಮೂಟೆ ಕಟ್ಟಿದ ಪಾಕಿಸ್ತಾನ

ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹಣಾಹಣಿಯು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಹೃದಯದಲ್ಲಿ ಶತಮಾನಗಳ ಕಾಲ ಜೀವಂತವಾಗಿರುತ್ತದೆ. ಈ ರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ಶತಕ ಪೂರೈಸಿದ್ದಲ್ಲದೆ, ಟೀಮ್ ಇಂಡಿಯಾ ಗೆಲುವಿನ ಹೊಸ್ತಿಲು ದಾಟಲು ಸಹಾಯ ಮಾಡಿದರು. ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿ ಬ್ಯಾಟ್‌ನಿಂದ ಸಿಡಿದ 82ನೇ ಶತಕವಾಗಿದೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ತಮ್ಮ ಫಾರ್ಮ್ ಅನ್ನು ಟೀಕಿಸಿದವರ ಮುಖಕ್ಕೆ ಹೊಡೆದಿದ್ದಾರೆ. ಪಾಕಿಸ್ತಾನ ವಿರುದ್ಧ ಬಿರುಸಿನ ಶತಕ ಬಾರಿಸುವ ಮೂಲಕ ಭಾರತ ತಂಡಕ್ಕೆ 6 ವಿಕೆಟ್‌ಗಳ ಜಯ ತಂದುಕೊಟ್ಟಿದ್ದಾರೆ.

Virat Kohli knocks Pakistan out of Champions Trophy with century

ವಿರಾಟ್ 2023 ರ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ಕೊನೆಯ ಏಕದಿನ ಶತಕವನ್ನು ಗಳಿಸಿದರು. ಆ ಬಳಿಕ ಕೊಹ್ಲಿ ಏಕದಿನ ಪಂದ್ಯದಲ್ಲಿ ಬಾರಿಸಿದ ಮೊದಲ ಶತಕ ಇದಾಗಿದೆ. ಈ ಗೆಲುವಿನೊಂದಿಗೆ ಭಾರತ 2025 ರ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ತಲುಪಿದೆ. ಇತ್ತ ವಿರಾಟ್ ಕೊಹ್ಲಿ ಅಬ್ಬರ ಶತಕದ ಹೊಡೆತಕ್ಕೆ ಸಿಲುಕಿದ ಪಾಕಿಸ್ತಾನ ಟೂರ್ನಿಯಿಂದ ಬಹುತೇಕ ಹೊರಗುಳಿದಿದೆ.

ಕೊಹ್ಲಿ ದಾಖಲೆಗಳು

ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ಎರಡು ದೊಡ್ಡ ದಾಖಲೆಗಳನ್ನು ತಮ್ಮ ಹೆಸರಿನಲ್ಲಿ ಬರೆದಿದ್ದಾರೆ. ವಿರಾಟ್ ಕೊಹ್ಲಿ ವೇಗವಾಗಿ 14000 ಏಕದಿನ ರನ್ ಗಳಿಸಿದ ದಾಖಲೆಯನ್ನೂ ಬರೆದಿದ್ದಾರೆ. ಇದರೊಂದಿಗೆ, ವಿರಾಟ್ ಭಾರತ ಪರ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಹೆಸರಿನಲ್ಲಿ ಒಟ್ಟು 158 ಕ್ಯಾಚ್‌ಗಳು ದಾಖಲಾಗಿವೆ.

ಐಸಿಸಿ ಟೂರ್ನಿಯಲ್ಲಿ ಕೊಹ್ಲಿ ದೊಡ್ಡ ಮೈಲಿಗಲ್ಲು ಸಾಧಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿ, ಏಕದಿನ ವಿಶ್ವಕಪ್ ಮತ್ತು ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ ಮೊದಲ ಬ್ಯಾಟರ್ ಕೊಹ್ಲಿ. ಇದರೊಂದಿಗೆ, ಇದು ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರ ಮೊದಲ ಶತಕವಾಗಿದೆ. ಇದಲ್ಲದೆ, ಅವರು ಐಸಿಸಿ ಟೂರ್ನಿಗಳಲ್ಲಿ ಆರು ಶತಕಗಳನ್ನು ಗಳಿಸಿದ್ದಾರೆ.

ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 51, ಟೆಸ್ಟ್‌ನಲ್ಲಿ 30 ಮತ್ತು ಟಿ20ಯಲ್ಲಿ ಒಂದು ಶತಕ ಗಳಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಒಟ್ಟು ಶತಕಗಳ ಸಂಖ್ಯೆ 82ಕ್ಕೆ ತಲುಪಿದೆ.

Story first published: Sunday, February 23, 2025, 23:49 [IST]
Other articles published on Feb 23, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+