ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ, ಮಯಾಂಕ್ ಇನ್, ಧವನ್ ಔಟ್

Virat Kohli to lead India vs West Indies Test series, Mayank in, Dhawan out

ಬೆಂಗಳೂರು, ಸೆಪ್ಟೆಂಬರ್ 29: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಶನಿವಾರದಂದು ಪ್ರಕಟಿಸಲಾಗಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ತಂಡದಿಂದ ಹೊರಗಿಡಲಾಗಿದ್ದು, ಕರ್ನಾಟಕದ ಮಯಾಂಕ್ ಅಗರ್ವಾಲ್ ಅವರು ತಂಡ ಸೇರಿದ್ದಾರೆ.

ವಿರಾಟ್ ಕೊಹ್ಲಿ ಅವರು ನಾಯಕರಾಗಿರುವ 15 ಮಂದಿ ತಂಡವು ಅಕ್ಟೋಬರ್ 04ರಿಂದ ಮೊದಲ ಟೆಸ್ಟ್ ಪಂದ್ಯವಾಡಲಿದೆ. 14ನೇ ಏಷ್ಯಾಕಪ್ ಗೆದ್ದ ಭಾರತ ತಂಡದಲ್ಲಿರುವ ಸದಸ್ಯರ ಪೈಕಿ ಭುವನೇಶ್ವರ್ ಕುಮಾರ್ ಹಾಗೂ ಜಸ್ ಪ್ರೀತ್ ಬೂಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇಂಗ್ಲೆಂಡಿನ ಟೆಸ್ಟ್ ಸರಣಿಯಲ್ಲಿ ತಿಣುಕಾಡಿದ್ದ ಶಿಖರ್ ಧವನ್ ಅವರನ್ನು ನಿರೀಕ್ಷೆಯಂತೆ ಆಯ್ಕೆಗೆ ಪರಿಗಣಿಸಿಲ್ಲ.

ಭಾರತ ಹಾಗೂ ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ ಪ್ರಕಟಭಾರತ ಹಾಗೂ ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ ಪ್ರಕಟ

ಮುರಳಿ ವಿಜಯ್ ಅವರು ಇಂಗ್ಲೆಂಡ್ ಪ್ರವಾಸದ ಕೊನೆ ಎರಡು ಪಂದ್ಯಗಳಲ್ಲಿ ಆಡಿರಲಿಲ್ಲ. ಈ ಸರಣಿಗೂ ಆಯ್ಕೆಯಾಗುವಲ್ಲಿ ವಿಫಲರಾಗಿದ್ದಾರೆ. ದಿನೇಶ್ ಕಾರ್ತಿಕ್ ಹಾಗೂ ಕರುಣ್ ನಾಯರ್ ಅವರಿಗೂ ಸ್ಥಾನ ಸಿಕ್ಕಿಲ್ಲ.

Mayank Agarwal

ರಿಷಬ್ ಪಂತ್ ಅವರು ಏಕೈಕ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. ಇಂಗ್ಲೆಂಡಿನಲ್ಲಿ ಉತ್ತಮವಾಗಿ ಆಡಿದ ಹನುಮವಿಹಾರಿಗೂ ಅವಕಾಶ ಸಿಕ್ಕಿದೆ.

ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಅನನುಭವಿ ವಿಂಡೀಸ್ ತಂಡ ಪ್ರಕಟಭಾರತ ವಿರುದ್ಧದ ಟೆಸ್ಟ್ ಸರಣಿಗೆ ಅನನುಭವಿ ವಿಂಡೀಸ್ ತಂಡ ಪ್ರಕಟ

ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಮಯಾಂಕ್ ಅಗರವಾಲ್ ಅವರಿಗೆ ಇದು ಚೊಚ್ಚಲ ಟೆಸ್ಟ್ ಸರಣಿಯಾಗಲಿದೆ. ಇಶಾಂತ್ ಶರ್ಮ ಹಾಗೂ ಗಾಯಾಳುವಾಗಿರುವ ಹಾರ್ದಿಕ್ ಪಾಂಡ್ಯರನ್ನು ಆಯ್ಕೆಗೆ ಪರಿಗಣಿಸಿಲ್ಲ ಎಂದು ಬಿಸಿಸಿಐ ಆಯ್ಕೆ ಸಮಿತಿ ಹೇಳಿದೆ.

ಮೊದಲ ಟೆಸ್ಟ್ ಪಂದ್ಯ ರಾಜ್ ಕೋಟ್ ನಲ್ಲಿ ಅಕ್ಟೋಬರ್ 04ರಿಂದ ಆರಂಭವಾದರೆ, ಎರಡನೇ ಟೆಸ್ಟ್ ಪಂದ್ಯವು ಅಕ್ಟೋಬರ್ 12ರಂದು ಹೈದರಾಬಾದಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಾದ ಬಳಿಕ ಉಭಯ ತಂಡಗಳು ಐದು ಏಕದಿನ ಪಂದ್ಯಗಳ ಸರಣಿ ಹಾಗೂ ಮೂರು ಟಿ20 ಪಂದ್ಯಗಳ ಸರಣಿ ಆಡಲಿದೆ.

ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಪೃಥ್ವಿ ಶಾ, ಮಯಾಂಕ್ ಅಗರವಾಲ್, ಚೇತೇಶ್ವರ್ ಪೂಜಾರಾ, ಅಜಿಂಕ್ಯ ರಹಾನೆ (ಉಪ ನಾಯಕ), ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.

Story first published: Saturday, September 29, 2018, 22:28 [IST]
Other articles published on Sep 29, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X