ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಮುಂದಿನ ವರ್ಷ ಟಿ20 ವಿಶ್ವಕಪ್ ನಡೆಯಲಿದೆ. ಹೀಗಾಗಿ ಈ ಬಾರಿಯೂ ಏಷ್ಯಾ ಕಪ್ ಟಿ20 ಆರೋಜಿಸಲಾಗಿದೆ. ಈ ಬಾರಿ ಮೂರನೇ ಆವೃತ್ತಿಯ ಟಿ20 ಏಷ್ಯಾ ಕಪ್‌ಗೆ ಭರದ ಸಿದ್ಧತೆಗಳು ನಡೆದಿವೆ. ಹಾಗಿದ್ರೆ ಈ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಯಾರು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
2016 ಹಾಗೂ 2022ರಲ್ಲಿ ಏಷ್ಯಾ ಕಪ್ ಟಿ20 ಟೂರ್ನಿಯನ್ನು ಆಯೋಜಿಸಲಾಗಿದೆ. ಈ ವೇಳೆ ಸ್ಟಾರ್ ಆಟಗಾರರು ತಮ್ಮ ಧಮಾಕೆದಾರ್ ಪ್ರದರ್ಶನದಿಂದ ಎಲ್ಲರ ಚಿತ್ತ ಕದ್ದಿದ್ದಾರೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಆಡಿದ 10 ಪಂದ್ಯಗಳಲ್ಲಿ 85ರ ಸರಾಸರಿಯಲ್ಲಿ 429 ರನ್ ಸಿಡಿಸಿದ್ದಾರೆ. ಈ ವೇಳೆ 1 ಶತಕ, 3 ಅರ್ಧಶತಕ ಸೇರಿವೆ.

ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಸಾಧಕರ ಪಟ್ಟಿಯಲ್ಲಿ ಪಾಕಿಸ್ತಾನ ತಂಡದ ವಿಕೆಟ್ ಕೀಪರ್ ಮೊಹಮ್ಮದ್ ರಿಜ್ವಾನ್ ಎರಡನೇ ಸ್ಥಾನದಲ್ಲಿದ್ದಾರೆ. ಇವರು ಆಡಿದ 6 ಪಂದ್ಯಗಳಲ್ಲಿ 56ರ ಸರಾಸರಿಯಲ್ಲಿ 281 ರನ್ ಕಲೆ ಹಾಕಿದ್ದಾರೆ. ಈ ವೇಳೆ ಇವರು ಮೂರು ಅರ್ಧಶತಕ ಬಾರಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ರೋಹಿತ್ ಶರ್ಮಾ ಇದ್ದಾರೆ. ಇವರು ಆಡಿದ 9 ಪಂದ್ಯಗಳಲ್ಲಿ 30ರ ಸರಾಸರಿಯಲ್ಲಿ 271 ರನ್ ಕಲೆ ಹಾಕಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಸಹ ಸಿಡಿಸಿದ್ದಾರೆ.
ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಹಾಂಗ್ ಕಾಂಗ್‌ನ ಬಾಬರ್ ಹಯಾತ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇವರು 146ರ ಸ್ಟ್ರೈಕ್ ರೇಟ್‌ನಲ್ಲಿ ರನ್‌ಕಲೆ ಹಾಕಿದ್ದಾರೆ. ಇವರು ಆಡಿದ 5 ಪಂದ್ಯಗಳಲ್ಲಿ 235 ರನ್ ಸಿಡಿಸಿದ್ದಾರೆ. ಈ ವೇಳೆ 1 ಶತಕ, 1 ಅರ್ಧಶತಕ ಸಿಡಿಸಿದ್ದಾರೆ. ಇನ್ನುಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಅಫ್ಘಾನಿಸ್ತಾನದ ಇಬ್ರಾಹಿಂ ಜರ್ದಾನ್ ಇದ್ದಾರೆ. ಇವರು ಆಡಿದ 5 ಪಂದ್ಯಗಳ್ಲಿ 196 ರನ್ ಕಲೆ ಹಾಕಿದ್ದಾರೆ. ಈ ವೇಳೆ ಇವರು 1 ಅರ್ಧಶತಕ ಬಾರಿಸಿದ್ದಾರೆ.

ವಿರಾಟ್ ಕೊಹ್ಲಿ, 10 ಪಂದ್ಯ, 429 ರನ್
ರೋಹಿತ್ ಶರ್ಮಾ, 9 ಪಂದ್ಯ, 271 ರನ್
ಸೂರ್ಯಕುಮಾರ್ ಯಾದವ್, 5 ಪಂದ್ಯ, 139 ರನ್
ಕೆಎಲ್ ರಾಹುಲ್, 5 ಪಂದ್ಯ, 132 ರನ್
ಯುವರಾಜ್ ಸಿಂಗ್, 5 ಪಂದ್ಯ, 89 ರನ್