ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಬ್ರಿಯಾನ್ ಲಾರಾ

ಬ್ಯಾಟಿಂಗ್ ದಂತಕತೆ ಬ್ರಿಯಾನ್ ಲಾರಾ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಮತ್ತೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಟೀಮ್ ಇತ್ತೀಚೆಗೆ ಟೀಮ್ ಇಂಡಿಯಾ ಆಟಗಾರರ ಬಗ್ಗೆ ಬ್ರಿಯಾನ್ ಲಾರಾ ಅನೇಕ ಸಂದರ್ಭಗಳಲ್ಲಿ ಹೊಗಳಿಕೆಯ ಮಾತುಗಳನ್ನು ಆಡಿದ್ದರು. ಇದೀಗ ಮತ್ತೆ ಕ್ಯಾಪ್ಟನ್ ವಿರಾಟ್ ಕೊಹ್ಲಿಯ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಐಸಿಸಿಯ ಎಲ್ಲಾ ಟ್ರೋಫಿಗಳನ್ನು ಗೆಲ್ಲಬಲ್ಲ ಸಾಮರ್ಥ್ಯ ವಿರಾಟ್ ಕೊಹ್ಲಿಗೆ ಇದೆ. ಅವರ ಮುಂದಾಳತ್ವದಲ್ಲಿ ಎಲ್ಲಾ ಪ್ರಮುಖ ಟೂರ್ನಿಯನ್ನು ಟೀಮ್ ಇಂಡಿಯಾ ಗೆಲ್ಲಲಿದೆ ಎಂಬ ಮಾತನ್ನು ಬ್ರಿಯಾನ್ ಲಾರಾ ಹೇಳಿದ್ದಾರೆ.
ಬ್ರಿಯಾನ್ ಲಾರಾ 'ಇಂಡಿಯಾ ಟುಡೇ' ಜೊತೆಗೆ ಮಾತನಾಡಿದ ಸಂದರ್ಭದಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆಡುವ ಎಲ್ಲಾ ಟೂರ್ನಿಗಳನ್ನು ಗೆಲ್ಲಬಲ್ಲ ಸಾಮರ್ಥ್ಯವಿದೆ. ಟೀಮ್ ಇಂಡಿಯಾ ಅತ್ಯುತ್ತಮ ತಂಡವಾಗಿದ್ದು ಭಾರತವನ್ನು ಎಲ್ಲಾ ತಂಡಗಳು ಗುರಿಯಾಗಿರಿಸಿಕೊಂಡಿರುವುದು ಉತ್ತಮ ಬೆಳವಣಿಗೆ ಎಂದಿದ್ದಾರೆ. 2013ರಲ್ಲಿ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಬಳಿಕ ಐಸಿಸಿಯ ಯಾವುದೇ ಟ್ರೋಫಿಯನ್ನು ಗೆದ್ದುಕೊಂಡಿಲ್ಲ.
ಬ್ರಿಯಾನ್ ಲಾರಾ ಟೆಸ್ಟ್‌ನಲ್ಲಿ 400 ರನ್ ಬಾರಿಸಿರುವುದು ಇನ್ನೂ ಮುರಿಯಲಾಗದ ದಾಖಲೆಯಾಗಿ ಉಳಿದುಕೊಂಡಿದೆ. ಇತ್ತೀಚೆಗೆ ಈ ದಾಖಲೆಯ ಬಗ್ಗೆ ಬ್ರಿಯಾನ್ ಲಾರಾ ಟೀಮ್ ಇಂಡಿಯಾದ ರೋಹಿತ್ ಶರ್ಮಾ ಮತ್ತು ಡೇವಿಡ್ ವಾರ್ನರ್ ಈ ದಾಖಲೆಯನ್ನು ಮುರಿಯಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications