ಭಾರತ ಟಿ20 ತಂಡಕ್ಕೆ ರಾಹುಲ್‌ ಅಲ್ಲ ರೋಹಿತ್ ನಾಯಕ, ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ನಿಂದ ಕೊಹ್ಲಿ ಔಟ್!

ಪ್ರಸ್ತುತ ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ತನ್ನ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಹೀನಾಯವಾಗಿ ಸೋಲುವುದರ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸುವಲ್ಲಿ ಎಡವಿದೆ. ಹೌದು, ಟೂರ್ನಿಯಲ್ಲಿ ತನ್ನ ಮೊದಲೆರಡು ಪಂದ್ಯಗಳಲ್ಲಿ ಸೋತ ಟೀಮ್ ಇಂಡಿಯಾ ತದನಂತರ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿತು. ಆದರೂ ಸಹ ಟೀಮ್ ಇಂಡಿಯಾ ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆದುಕೊಳ್ಳುವಲ್ಲಿ ವಿಫಲವಾಯಿತು. ಹೀಗೆ ಟೂರ್ನಿಯಲ್ಲಿನ ತನ್ನ ಕೊನೆಯ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಗೆಲುವು ಸಾಧಿಸಿದ ಟೀಂ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ.

SMAT 2020-21: ಕರ್ನಾಟಕದ ಸತತ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಬಂಗಾಳ!SMAT 2020-21: ಕರ್ನಾಟಕದ ಸತತ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಬಂಗಾಳ!

ಈ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸಿರುವ ಸಮಯ ಹತ್ತಿರ ಬಂದಿದೆ. ಹೌದು, ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವ ಮುನ್ನವೇ ವಿರಾಟ್ ಕೊಹ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ತಾನು ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸುವುದಾಗಿ ಬಹಿರಂಗ ಘೋಷಣೆಯನ್ನು ಮಾಡಿದ್ದರು. ಭಾರತದ ಏಕದಿನ ಮತ್ತು ಟೆಸ್ಟ್ ತಂಡಗಳ ನಾಯಕತ್ವವನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಲು ಮತ್ತು ತನ್ನ ವೈಯಕ್ತಿಕ ಆಟದ ಕಡೆ ಹೆಚ್ಚಿನ ಗಮನಹರಿಸಲು ಈ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ವಿರಾಟ್ ಕೊಹ್ಲಿ ಕಾರಣವನ್ನು ಕೂಡ ಬಿಚ್ಚಿಟ್ಟಿದ್ದರು. ಅದರಂತೆ ಇದೀಗ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪಯಣ ಮುಗಿದಿದ್ದು ಇದೀಗ ಭಾರತ ಟಿ ಟ್ವೆಂಟಿ ತಂಡದ ಮುಂದಿನ ನಾಯಕ ಯಾರು ಎಂಬ ಚರ್ಚೆಗಳು ಶುರುವಾಗಿವೆ.

ಕೋಚ್‌ ಸ್ಥಾನದಿಂದ ನಿರ್ಗಮಿಸಿದ ರವಿಶಾಸ್ತ್ರಿ: ಪ್ರಮುಖ ಸಾಧನೆಗಳು ಇಲ್ಲಿದೆಕೋಚ್‌ ಸ್ಥಾನದಿಂದ ನಿರ್ಗಮಿಸಿದ ರವಿಶಾಸ್ತ್ರಿ: ಪ್ರಮುಖ ಸಾಧನೆಗಳು ಇಲ್ಲಿದೆ

ನವೆಂಬರ್‌ 17ರಿಂದ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿ ಆರಂಭವಾಗುತ್ತಿದ್ದು ಈ ಸರಣಿಯ ಮೂಲಕವೇ ಟೀಮ್ ಇಂಡಿಯಾವನ್ನು ಟಿ ಟ್ವೆಂಟಿ ಪಂದ್ಯಗಳಲ್ಲಿ ಮುನ್ನೆಡೆಸುವ ನೂತನ ಸಾರಥಿ ಯಾರೆಂಬುದು ಬಹಿರಂಗವಾಗಲಿದೆ. ಇತ್ತೀಚೆಗಷ್ಟೇ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಕೆಎಲ್ ರಾಹುಲ್ ನಾಯಕನಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಇದೀಗ ಬಲ್ಲ ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಮತ್ತು ಟೆಸ್ಟ್ ಸರಣಿಗಳಲ್ಲಿ ಹಲವಾರು ಪ್ರಮುಖ ಬದಲಾವಣೆಗಳಾಗಲಿದ್ದು ಕೆಲ ಪ್ರಮುಖ ಆಟಗಾರರು ತಂಡದಿಂದ ಹೊರಗುಳಿಯಲಿದ್ದಾರೆ ಮತ್ತು ನೂತನ ನಾಯಕ ಯಾರಾಗಲಿದ್ದಾರೆ ಎಂಬ ವಿಷಯಗಳು ಕೂಡ ತಿಳಿಯಲಿವೆ ಎನ್ನಲಾಗುತ್ತಿದೆ. ಹೀಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಕುರಿತಾಗಿ ಮುಂದಿನ 24 ಗಂಟೆಗಳಲ್ಲಿ ಟೀಮ್ ಇಂಡಿಯಾದಲ್ಲಿ ಆಗುವ ಕೆಲ ಮಹತ್ವದ ಬದಲಾವಣೆಗಳ ವಿವರ ಈ ಕೆಳಕಂಡಂತಿದೆ ಓದಿ..

ರೋಹಿತ್ ಶರ್ಮಾ ಭಾರತ ಟಿ ಟ್ವೆಂಟಿ ತಂಡದ ಮುಂದಿನ ನಾಯಕ

ರೋಹಿತ್ ಶರ್ಮಾ ಭಾರತ ಟಿ ಟ್ವೆಂಟಿ ತಂಡದ ಮುಂದಿನ ನಾಯಕ

ನವೆಂಬರ್ 17ರಿಂದ ಆರಂಭವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ನಾಯಕನಾಗಿ ಮುನ್ನಡೆಸಲಿದ್ದಾರೆ. ಈ ಹಿಂದೆ ಕೆಎಲ್ ರಾಹುಲ್ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ನಾಯಕನಾಗಲಿದ್ದಾರೆ ಎನ್ನಲಾಗುತ್ತಿತ್ತು ಆದರೆ ಇದೀಗ ಬಂದಿರುವ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ರೋಹಿತ್ ಶರ್ಮಾ ಅವರೇ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ನಾಯಕನಾಗಲಿದ್ದು, ಈ ಸರಣಿಯಿಂದ ಅಧಿಕೃತವಾಗಿ ಭಾರತೀಯ ಟಿ ಟ್ವೆಂಟಿ ತಂಡದ ನಾಯಕನ ಜವಾಬ್ದಾರಿಯನ್ನು ಹೊರಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಭಾರತ ಟಿ ಟ್ವೆಂಟಿ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆಯಾಗುವ ಸಾಧ್ಯತೆಗಳಿವೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಿಂದ ಕೊಹ್ಲಿ ಹೊರಕ್ಕೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಿಂದ ಕೊಹ್ಲಿ ಹೊರಕ್ಕೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮುಗಿದ ನಂತರ ಇತ್ತಂಡಗಳ ನಡುವೆ ನವೆಂಬರ್ 25ರಿಂದ 2 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿ ಪೈಕಿ ಮೊದಲನೇ ಪಂದ್ಯ ಕಾನ್ಪುರ ಕ್ರೀಡಾಂಗಣದಲ್ಲಿ ನಡೆಯಲಿದ್ದು ಈ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ. ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿ ಇರುವ ಕಾರಣದಿಂದಾಗಿ ರೋಹಿತ್ ಶರ್ಮಾ ಅವರೇ ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ ಎನ್ನಲಾಗುತ್ತಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯ ಮುಗಿದ ನಂತರ ಮುಂಬೈನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಮರಳಲಿದ್ದು ಮತ್ತೆ ಕೊಹ್ಲಿಯೇ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವವನ್ನು ಮುಂದುವರೆಸಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಆಗಲಿರುವ ಉಳಿದ ಪ್ರಮುಖ ಬದಲಾವಣೆಗಳ ಪಟ್ಟಿ ಈ ಕೆಳಕಂಡಂತಿದೆ

ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಆಗಲಿರುವ ಉಳಿದ ಪ್ರಮುಖ ಬದಲಾವಣೆಗಳ ಪಟ್ಟಿ ಈ ಕೆಳಕಂಡಂತಿದೆ

ಈ ಹಿಂದೆ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಕಳಪೆ ಫಾರ್ಮ್ ಹೊಂದಿದ್ದ ಅಜಿಂಕ್ಯ ರಹಾನೆ ಅವರೇ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಉಪನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಾಗಿ ಪ್ರಕಟವಾಗಿದ್ದ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದ ಶ್ರೇಯಸ್ ಐಯ್ಯರ್ ಈ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ತಂಡಕ್ಕೆ ವಾಪಸ್ ಆಗುವ ಸಾಧ್ಯತೆಗಳಿವೆ.

ಸದ್ಯ ರಿಷಭ್ ಪಂತ್ ಟೀಮ್ ಇಂಡಿಯಾದ ಮುಖ್ಯ ವಿಕೆಟ್ ಕೀಪರ್ ಆಗಿದ್ದು ತಂಡಕ್ಕೆ ಹೆಚ್ಚುವರಿ ವಿಕೆಟ್ ಕೀಪರ್ ಅಗತ್ಯವಿದ್ದರೆ ಆ ಸ್ಥಾನಕ್ಕೆ ಕೆಎಸ್ ಭರತ್ ಆಯ್ಕೆಯಾಗುವ ಸಾಧ್ಯತೆಗಳಿವೆ. ಕೆ ಎಸ್ ಭರತ್ ಇತ್ತೀಚಿಗಷ್ಟೇ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಉತ್ತಮ ಪ್ರದರ್ಶನ ನೀಡಿದ್ದರು.

For Quick Alerts
ALLOW NOTIFICATIONS
For Daily Alerts
Story first published: Tuesday, November 9, 2021, 17:20 [IST]
Other articles published on Nov 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X