ಭಾರತ ಟಿ ಟ್ವೆಂಟಿ ನಾಯಕತ್ವಕ್ಕೆ ವಿದಾಯದ ನಂತರ ಆರ್‌ಸಿಬಿ ನಾಯಕತ್ವಕ್ಕೂ ಕೊಹ್ಲಿ ಗುಡ್‌ಬೈ!: ಶರ್ಮಾ

ಸೆಪ್ಟೆಂಬರ್ 16ರ ಗುರುವಾರದಂದು ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವಕ್ಕೆ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ವಿದಾಯವನ್ನು ಘೋಷಿಸಿ ನಾಯಕತ್ವದಿಂದ ಕೆಳಗಿಳಿಯುವುದಾಗಿ ಮಹತ್ವದ ಘೋಷಣೆಯನ್ನು ಮಾಡಿದರು. ಹೌದು, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ನಡೆಯಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಭಾರತ ಅಂತಾರಾಷ್ಟ್ರೀಯ ಟಿ ಟ್ವೆಂಟಿ ನಾಯಕತ್ವವನ್ನು ತ್ಯಜಿಸುವುದಾಗಿ ವಿರಾಟ್ ಕೊಹ್ಲಿ ಟ್ವೀಟ್ ಮಾಡುವ ಮೂಲಕ ತಿಳಿಸಿದರು ಹಾಗೂ ಭಾರತ ಏಕದಿನ ಮತ್ತು ಟೆಸ್ಟ್ ತಂಡಗಳ ನಾಯಕನಾಗಿ ತಾವೇ ಮುಂದುವರಿಯುವುದಾಗಿ ಕೂಡ ವಿರಾಟ್ ಕೊಹ್ಲಿ ಖಚಿತಪಡಿಸಿದರು.

ಟೀಮ್ ಇಂಡಿಯಾಗೆ ಈ ಆಟಗಾರರು ನೂತನ ನಾಯಕ ಮತ್ತು ಉಪನಾಯಕರಾಗಬೇಕೆಂದು ಸೂಚಿಸಿದ ಕೊಹ್ಲಿಟೀಮ್ ಇಂಡಿಯಾಗೆ ಈ ಆಟಗಾರರು ನೂತನ ನಾಯಕ ಮತ್ತು ಉಪನಾಯಕರಾಗಬೇಕೆಂದು ಸೂಚಿಸಿದ ಕೊಹ್ಲಿ

ಇನ್ನು ವಿರಾಟ್ ಕೊಹ್ಲಿ ಭಾರತ ತಂಡದ ನಾಯಕತ್ವಕ್ಕೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ನಿನ್ನೆ ಮೊನ್ನೆಯದಲ್ಲ,ಹಲವಾರು ದಿನಗಳಿಂದ ಈ ಕುರಿತಾಗಿ ಆಗಾಗ ಸುದ್ದಿಗಳು ಹರಿದಾಡುತ್ತಲೇ ಇದ್ದವು. ವಿರಾಟ್ ಕೊಹ್ಲಿ ಟಿ ಟ್ವೆಂಟಿ ನಾಯಕತ್ವಕ್ಕೆ ವಿದಾಯ ಘೋಷಿಸುವುದಾಗಿ ತಿಳಿಸಿದ ಮೂರ್ನಾಲ್ಕು ದಿನಗಳ ಹಿಂದೆಯೂ ಕೂಡ ಕೊಹ್ಲಿ ನಾಯಕತ್ವವನ್ನು ತ್ಯಜಿಸಲಿದ್ದಾರೆ ಹಾಗೂ ರೋಹಿತ್ ಶರ್ಮಾ ನೂತನ ನಾಯಕನಾಗಲಿದ್ದಾರೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಸುದ್ದಿ ವೈರಲ್ ಆಗುತ್ತಿದ್ದಂತೆಯೇ ವಿರಾಟ್ ಕೊಹ್ಲಿ ಯಾವುದೇ ನಾಯಕತ್ವವನ್ನು ತ್ಯಜಿಸುವುದಿಲ್ಲ, ಇದೆಲ್ಲಾ ಗಾಳಿಸುದ್ದಿಯಷ್ಟೇ ಎಂದು ಬಿಸಿಸಿಐ ಕೊಹ್ಲಿ ನಾಯಕತ್ವದ ಕುರಿತು ಹರಿದಾಡಿದ್ದ ಸುದ್ದಿಯನ್ನು ತಳ್ಳಿಹಾಕಿತ್ತು.

ಯಾರಾಗ್ತಾರೆ ಟೀಮ್ ಇಂಡಿಯಾ ಮುಂದಿನ ಉಪ ನಾಯಕ?; ರೇಸ್‌ನಲ್ಲಿದ್ದಾರೆ ಈ ಮೂವರು ಆಟಗಾರರುಯಾರಾಗ್ತಾರೆ ಟೀಮ್ ಇಂಡಿಯಾ ಮುಂದಿನ ಉಪ ನಾಯಕ?; ರೇಸ್‌ನಲ್ಲಿದ್ದಾರೆ ಈ ಮೂವರು ಆಟಗಾರರು

ಬಿಸಿಸಿಐ ನೀಡಿದ್ದ ಈ ಹೇಳಿಕೆ ವಿರಾಟ್ ಕೊಹ್ಲಿ ಅಭಿಮಾನಿಗಳಲ್ಲಿ ಸಮಾಧಾನವನ್ನು ತಂದಿತ್ತು. ಆದರೆ ನಂತರ ಸ್ವತಃ ವಿರಾಟ್ ಕೊಹ್ಲಿಯವರೇ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಬಳಿಕ ಭಾರತ ಟಿ ಟ್ವೆಂಟಿ ತಂಡದ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ಟ್ವೀಟ್ ಮಾಡಿದ ನಂತರ ಈ ಹಿಂದೆ ಹರಿದಾಡಿದ್ದ ಸುದ್ದಿಗಳು ನಿಜ ಎನಿಸತೊಡಗಿದವು. ಹೀಗೆ ಭಾರತ ಟಿ ಟ್ವೆಂಟಿ ನಾಯಕ ಸ್ಥಾನದಿಂದ ಕೆಳಗಿಳಿಯಲು ನಿರಾಕರಿಸಿರುವ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ಕೂಡ ತ್ಯಜಿಸಲಿದ್ದಾರೆ ಎಂಬ ದೊಡ್ಡ ಸುದ್ದಿಯೊಂದು ಇದೀಗ ಹರಿದಾಡುತ್ತಿದೆ. ಹೌದು, ಇತ್ತಿಚೆಗಷ್ಟೇ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಣೆ ಮಾಡಿರುವುದರ ಕುರಿತು ಮಾತನಾಡಿರುವ ಕೊಹ್ಲಿಯ ಬಾಲ್ಯದ ತರಬೇತುದಾರ ರಾಜ್‌ಕುಮಾರ್ ಶರ್ಮಾ ಈ ಕೆಳಕಂಡಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಅತಿ ಶೀಘ್ರದಲ್ಲೇ ಬೆಂಗಳೂರು ತಂಡದ ನಾಯಕತ್ವ ತ್ಯಜಿಸಲಿದ್ದಾರೆ ಕೊಹ್ಲಿ

ಅತಿ ಶೀಘ್ರದಲ್ಲೇ ಬೆಂಗಳೂರು ತಂಡದ ನಾಯಕತ್ವ ತ್ಯಜಿಸಲಿದ್ದಾರೆ ಕೊಹ್ಲಿ

ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿಯುವುದರ ಕುರಿತಾಗಿ ತೆಗೆದುಕೊಂಡಿರುವ ನಿರ್ಣಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸುವ ವೇಳೆ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ತ್ಯಜಿಸಲಿದ್ದಾರೆ ಎಂಬುದರ ಕುರಿತು ಕೂಡ ಕೊಹ್ಲಿ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಭಾರತ ಏಕದಿನ ಮತ್ತು ಟೆಸ್ಟ್ ತಂಡಗಳ ನಾಯಕತ್ವದ ಕುರಿತು ಹೆಚ್ಚಿನ ಗಮನ ಹರಿಸುವ ಸಲುವಾಗಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವಕ್ಕೆ ವಿದಾಯ ಹೇಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ರಾಜ್‌ಕುಮಾರ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ. ಹೌದು, ವಿರಾಟ್ ಕೊಹ್ಲಿ ಆದಷ್ಟು ಬೇಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಗಿಳಿದು ಓರ್ವ ಬ್ಯಾಟ್ಸ್‌ಮನ್‌ ಆಗಿ ಬೆಂಗಳೂರು ತಂಡದ ಪರ ಆಡಲಿದ್ದಾರೆ ಎಂದು ರಾಜ್‌ಕುಮಾರ್ ಶರ್ಮಾ ಹೇಳಿಕೆ ನೀಡಿದ್ದಾರೆ.

ನಾಯಕನಾಗಿ ಕೊಹ್ಲಿ ಯಶಸ್ವಿ

ನಾಯಕನಾಗಿ ಕೊಹ್ಲಿ ಯಶಸ್ವಿ

ವಿರಾಟ್ ಕೊಹ್ಲಿ ಭಾರತದ ಟಿ ಟ್ವೆಂಟಿ ನಾಯಕನಾಗಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದು ಅತಿ ಯಶಸ್ವಿಯಾದ ನಾಯಕ ಎನಿಸಿಕೊಂಡಿದ್ದಾರೆ. ಐಸಿಸಿ ಟ್ರೋಫಿಯನ್ನು ನಾಯಕನಾಗಿ ಗೆಲ್ಲಿಸಿಲ್ಲ ಎಂಬುದನ್ನು ಬಿಟ್ಟರೆ ಓರ್ವ ನಾಯಕನಾಗಿ ಪ್ರತಿ ಪಂದ್ಯಗಳಲ್ಲಿಯೂ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಯಶಸ್ವಿಯಾಗಿದ್ದಾರೆ ಎಂದು ರಾಜ್‌ಕುಮಾರ್ ಶರ್ಮಾ ವಿರಾಟ್ ಕೊಹ್ಲಿಯನ್ನು ಶ್ಲಾಘಿಸಿದ್ದಾರೆ.

IPL ತಂಡಗಳ ಕೋಚ್ ಇವ್ರೆ ನೋಡಿ | Oneindia Kannada
ನಾಯಕನಾಗಿ ಟಿ ಟ್ವೆಂಟಿಯಲ್ಲಿ ಕೊಹ್ಲಿ ಸಾಧನೆ

ನಾಯಕನಾಗಿ ಟಿ ಟ್ವೆಂಟಿಯಲ್ಲಿ ಕೊಹ್ಲಿ ಸಾಧನೆ

ಇನ್ನು ವಿರಾಟ್ ಕೊಹ್ಲಿ ನಾಯಕನಾಗಿ ಭಾರತ ತಂಡವನ್ನು 45 ಪಂದ್ಯಗಳಲ್ಲಿ ಮುನ್ನಡೆಸಿದ್ದು, 27 ಪಂದ್ಯಗಳಲ್ಲಿ ಭಾರತ ಜಯ ಗಳಿಸಿದೆ, 14 ಪಂದ್ಯಗಳಲ್ಲಿ ಸೋಲುಂಡಿದೆ, 2 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ ಮತ್ತು ಉಳಿದೆರಡು ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ. ಹೀಗೆ ಟಿ ಟ್ವೆಂಟಿ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಎಂಎಸ್ ಧೋನಿ ನಂತರ ಅತಿ ಹೆಚ್ಚು ಯಶಸ್ಸು ಗಳಿಸಿದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Saturday, September 18, 2021, 14:28 [IST]
Other articles published on Sep 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X