ಟಿ20 ವಿಶ್ವಕಪ್ ಮುಗಿದ ನಂತರ ಭಾರತ ಏಕದಿನ ತಂಡಕ್ಕೂ ಆಯ್ಕೆಯಾಗಲಿದ್ದಾರೆ ನೂತನ ನಾಯಕ!

ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಹೇಳಿಕೊಳ್ಳುವಂತಹ ದೊಡ್ಡ ಪ್ರದರ್ಶನವನ್ನೇನೂ ನೀಡಿಲ್ಲ. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ ಒಟ್ಟು 2 ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ ಎರಡೂ ಪಂದ್ಯಗಳಲ್ಲಿಯೂ ಸೋಲುವುದರ ಮೂಲಕ ಹೀನಾಯ ಘಟ್ಟದಲ್ಲಿದೆ.

ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!

ಇತ್ತೀಚೆಗಷ್ಟೇ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ ಟೀಮ್ ಇಂಡಿಯಾ ಸೆಮಿಫೈನಲ್ ರೇಸ್‌ನಿಂದ ಬಹುತೇಕ ಹೊರಬಿದ್ದಂತಾಗಿದೆ. ಹೌದು, ಈ ಟೂರ್ನಿಯಲ್ಲಿ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನದ ಸೋತಿದ್ದ ಟೀಂ ಇಂಡಿಯಾ ಇತ್ತೀಚೆಗಷ್ಟೇ ನ್ಯೂಜಿಲೆಂಡ್ ವಿರುದ್ಧ ನಡೆದ ತನ್ನ ಎರಡನೇ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇತ್ತು. ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಸೋಲು ಅನುಭವಿಸಿದರೆ ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವ ಸಾಧ್ಯತೆಗಳು ಕಡಿಮೆಯಾಗುವ ಸತ್ಯ ತಿಳಿದಿದ್ದರೂ ಕೂಡ ಟೀಮ್ ಇಂಡಿಯಾ ಆಟಗಾರರು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನವನ್ನು ನೀಡಲೇ ಇಲ್ಲ.

ಟಿ20 ವಿಶ್ವಕಪ್: ಫೈನಲ್‌ ಪ್ರವೇಶಿಸಲಿರುವ ತಂಡಗಳನ್ನು ಹೆಸರಿಸಿದ ಬೆನ್ ಸ್ಟೋಕ್ಸ್ಟಿ20 ವಿಶ್ವಕಪ್: ಫೈನಲ್‌ ಪ್ರವೇಶಿಸಲಿರುವ ತಂಡಗಳನ್ನು ಹೆಸರಿಸಿದ ಬೆನ್ ಸ್ಟೋಕ್ಸ್

ಹೀಗೆ ಟೂರ್ನಿಯಲ್ಲಿ ನಡೆದ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಹೀನಾಯ ಸೋಲನ್ನು ಕಂಡ ಟೀಮ್ ಇಂಡಿಯಾ ಇತ್ತೀಚಿಗಷ್ಟೆ ನಡೆದ ತನ್ನ ದ್ವಿತೀಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕೂಡ ಸೋಲನುಭವಿಸಿತು. ಹೀಗೆ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸಾಲು ಸಾಲು ಸೋಲುಗಳನ್ನು ಅನುಭವಿಸುತ್ತಿದೆ. ಅಷ್ಟೇ ಅಲ್ಲದೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ವಿರಾಟ್ ಕೊಹ್ಲಿ ನಾಯಕತ್ವದ ಮೊದಲ ಮತ್ತು ಕೊನೆಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಾಗಲಿದೆ.

ಆಟಗಾರರನ್ನು ಟೀಕಿಸುವವರು ಧೈರ್ಯವಿಲ್ಲದವರು: ಕಿಡಿಕಾರಿದ ವಿರಾಟ್ ಕೊಹ್ಲಿಆಟಗಾರರನ್ನು ಟೀಕಿಸುವವರು ಧೈರ್ಯವಿಲ್ಲದವರು: ಕಿಡಿಕಾರಿದ ವಿರಾಟ್ ಕೊಹ್ಲಿ

ಹೌದು, ಟೂರ್ನಿ ಆರಂಭವಾಗುವ ಮುನ್ನವೇ ತನ್ನ ನಿರ್ಣಯವನ್ನು ತಿಳಿಸಿದ್ದ ವಿರಾಟ್ ಕೊಹ್ಲಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ತಾನು ಭಾರತ ಟಿ ಟ್ವೆಂಟಿ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಣೆಯನ್ನು ಮಾಡಿದ್ದರು. ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ತಂಡಗಳ ನಾಯಕತ್ವದತ್ತ ಹಾಗೂ ತನ್ನ ವೈಯಕ್ತಿಕ ಬ್ಯಾಟಿಂಗ್ ಕಡೆ ಹೆಚ್ಚಿನ ಗಮನಹರಿಸಲು ಈ ರೀತಿಯ ನಿರ್ಧಾರವನ್ನು ಕೈಗೊಂಡಿರುವುದಾಗಿ ವಿರಾಟ್ ಕೊಹ್ಲಿ ತಿಳಿಸಿದ್ದರು. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ವಿರಾಟ್ ಕೊಹ್ಲಿ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಟಿ ಟ್ವೆಂಟಿ ತಂಡಕ್ಕೆ ಮಾತ್ರವಲ್ಲ ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕತ್ವಕ್ಕೂ ಕೂಡ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಇನ್ನೇನು ಮುಂದಿನ 2 - 3 ದಿನಗಳಲ್ಲಿ ಬಿಸಿಸಿಐ ವಿಶೇಷ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಟೀಮ್ ಇಂಡಿಯಾ ಟಿ ಟ್ವೆಂಟಿ ಮತ್ತು ಏಕದಿನ ತಂಡಗಳ ನಾಯಕತ್ವ ಬದಲಾವಣೆಯ ಕುರಿತು ಚರ್ಚಿಸಲಾಗುವುದು ಎನ್ನಲಾಗುತ್ತಿದೆ. ಈ ಸುದ್ದಿ ಕುರಿತ ಮಾಹಿತಿ ಮುಂದೆ ಇದೆ ಓದಿ...

ಟಿ ಟ್ವೆಂಟಿ ವಿಶ್ವಕಪ್ ವಿಫಲತೆ ಕೊಹ್ಲಿ ನಾಯಕ ಸ್ಥಾನ ರಾಜೀನಾಮೆಗೆ ಕಾರಣ?

ಟಿ ಟ್ವೆಂಟಿ ವಿಶ್ವಕಪ್ ವಿಫಲತೆ ಕೊಹ್ಲಿ ನಾಯಕ ಸ್ಥಾನ ರಾಜೀನಾಮೆಗೆ ಕಾರಣ?

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಭಾರತ ಟಿ ಟ್ವೆಂಟಿ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಮಾತ್ರವಲ್ಲದೆ ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಕೂಡ ವಿರಾಟ್ ಕೊಹ್ಲಿ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕಳಪೆ ಪ್ರದರ್ಶನ ನೀಡಿದ್ದೇ ಈ ರೀತಿಯ ನಿರ್ಧಾರ ಘಟನೆಗೆ ಕಾರಣ ಎಂಬ ಸುದ್ದಿಗಳು ಹರಿದಾಡುತ್ತಿವೆ. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವ ಮುನ್ನ ಕೇವಲ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಮಾತ್ರ ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ಘೋಷಣೆಯನ್ನು ಮಾಡಿದ್ದರು. ಆದರೆ ಇದೀಗ ಟೂರ್ನಿ ಮುಗಿದ ಬಳಿಕ ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕತ್ವದಿಂದ ಕೂಡ ವಿರಾಟ್ ಕೊಹ್ಲಿ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿರುವುದಕ್ಕೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ನೀಡಿದ ಪ್ರದರ್ಶನವೇ ಕಾರಣವಾಯ್ತಾ ಎಂಬ ಪ್ರಶ್ನೆ ಎದ್ದಿದೆ.

ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ನಾಯಕ

ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ನಾಯಕ

ಸದ್ಯ ಭಾರತ ಟಿ ಟ್ವೆಂಟಿ ಮತ್ತು ಏಕದಿನ ತಂಡಗಳ ಉಪನಾಯಕನಾಗಿ ಕಾರ್ಯನಿರ್ವಹಿಸುತ್ತಿರುವ ರೋಹಿತ್ ಶರ್ಮಾ ಮುಂದಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ಮತ್ತು ಏಕದಿನ ಕ್ರಿಕೆಟ್ ತಂಡಗಳ ನಾಯಕತ್ವಕ್ಕೆ ರಾಜಿನಾಮೆ ನೀಡಿದ ನಂತರ ಎರಡೂ ತಂಡಗಳ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಹೀಗೆ ರೋಹಿತ್ ಶರ್ಮಾ ಭಾರತ ಟಿ ಟ್ವೆಂಟಿ ಮತ್ತು ಏಕದಿನ ತಂಡಗಳ ನಾಯಕತ್ವವನ್ನು ವಹಿಸಿಕೊಂಡರೆ, ಕೆಎಲ್ ರಾಹುಲ್ ಎರಡೂ ತಂಡಗಳಿಗೆ ಉಪನಾಯಕನಾಗಲಿದ್ದಾರೆ ಎನ್ನಲಾಗುತ್ತಿದೆ.

ನ್ಯೂಜಿಲೆಂಡ್‌ ವಿರುದ್ಧದ ಸರಣಿಗೆ ಯಾರು ನಾಯಕ?

ನ್ಯೂಜಿಲೆಂಡ್‌ ವಿರುದ್ಧದ ಸರಣಿಗೆ ಯಾರು ನಾಯಕ?

ಪ್ರಸ್ತುತ ನಡೆಯುತ್ತಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ನವೆಂಬರ್ 17ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಭಾರತದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ‍ ಸ್ಥಾನವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಕೂಡ ಬಿಸಿಸಿಐನ ಸಭೆ ನಂತರ ಉತ್ತರ ಸಿಗಲಿದೆ.

ಈ ಪವಾಡ ನಡೆದು ಟೀಮ್ ಇಂಡಿಯಾಗೆ ಸೆಮಿಫೈನಲ್ ಚಾನ್ಸ್ ಸಿಗುತ್ತಾ? | Oneindia Kannada

For Quick Alerts
ALLOW NOTIFICATIONS
For Daily Alerts
Story first published: Tuesday, November 2, 2021, 18:11 [IST]
Other articles published on Nov 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X