Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ವಿರಾಟ್ ಕೊಹ್ಲಿ ನಿರ್ಮಿಸಿದ ದಾಖಲೆಗಳ ಪಟ್ಟಿ

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಜಯಸಾಧಿಸಿದೆ. ಮಹತ್ವದ ಪಂದ್ಯದಲ್ಲಿ ಭರ್ಜರಿ ಆಟವನ್ನು ಆಡಿದ ಆರ್‌ಸಿಬಿ 2 ಪೂರ್ಣ ಅಂಕಗಳನ್ನು ಕಲೆ ಹಾಕಿದ್ದು, ಅಂಕ ಪಟ್ಟಿಯಲ್ಲಿ ಎರಡನೆ ಸ್ಥಾನಕ್ಕೆ ಬಡ್ತಿ ಪಡೆದಿದೆ. ಈ ಮೂಲಕ ಕ್ವಾಲಿಫೈಯರ್‌ನಲ್ಲಿ ಪಂಜಾಬ್ ಕಿಂಗ್ಸ್‌ ವಿರುದ್ಧ ಕಾದಾಟವನ್ನು ನಡೆಸಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಮೋಘ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಈ ಮೂಲಕ ವಿರಾಟ್‌ ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ.

ಲಕ್ನೋನ ಏಕಾನ ಮೈದಾನದಲ್ಲಿ ನಡೆದ ಐಪಿಎಲ್‌ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಎಲ್‌ಎಸ್‌ಜಿ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 227 ರನ್‌ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 18.4 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 230 ರನ್‌ ಸೇರಿಸಿತು. ಈ ಮೂಲಕ ಐಪಿಎಲ್‌ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತವನ್ನು ಚೇಸ್ ಮಾಡಿದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Virat Kohli Makes History with 9000 Runs and Most Fifties in IPL

ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿದರು. ಮಹತ್ವದ ಪಂದ್ಯದಲ್ಲಿ ವಿರಾಟ್‌ ಆರಂಭದಿಂದಲೂ ಆಕ್ರಮಣಕಾರಿ ಆಟವನ್ನು ಆಡಿದರು. ಇವರು 30 ಎಸೆತಗಳಲ್ಲಿ 10 ಬೌಂಡರಿ ನೆರವಿನಿಂದ 54 ರನ್‌ ಬಾರಿಸಿ ಜಯದಲ್ಲಿ ಮಿಂಚಿದರು. ಈ ಮೂಲಕ ವಿರಾಟ್‌ ಕೊಹ್ಲಿ ಪ್ರಸಕ್ತ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಬಡ್ತಿ ಪಡೆದರು. ವಿರಾಟ್‌ ಕೊಹ್ಲಿ ಆಡಿದ 13 ಪಂದ್ಯಗಳಲ್ಲಿ 60ರ ಸರಾಸರಿಯಲ್ಲಿ 602 ರನ್‌ ಕಲೆ ಹಾಕಿದ್ದಾರೆ. ಈ ಮೂಲಕ ಆರೆಂಜ್‌ ಕ್ಯಾಪ್‌ ಮೇಲೆ ವಿರಾಟ್ ಮೂರನೇ ಬಾರಿಗೆ ಕಣ್ಣು ನೆಟ್ಟಿದ್ದಾರೆ.

ಗರಿಷ್ಠ ರನ್‌ ಸಾಧಕರ

ಸಾಯಿ ಸುದರ್ಶನ್‌, ಗುಜರಾತ್‌ ಟೈಟಾನ್ಸ್, 14 ಪಂದ್ಯ, 679 ರನ್‌
ಶುಭಮನ್‌ ಗಿಲ್, ಗುಜರಾತ್‌ ಟೈಟಾನ್ಸ್, 14 ಪಂದ್ಯ, 649 ರನ್‌
ಸೂರ್ಯಕುಮಾರ್ ಯಾದವ್, ಮುಂಬೈ ಇಂಡಿಯನ್ಸ್‌, 14 ಪಂದ್ಯ, 640 ರನ್‌
ಮಿಚೆಲ್‌ ಮಾರ್ಷ್. ಎಲ್‌ಎಸ್‌ಜಿ, 14 ಪಂದ್ಯ, 627 ರನ್‌
ವಿರಾಟ್‌ ಕೊಹ್ಲಿ, ಆರ್‌ಸಿಬಿ, 14 ಪಂದ್ಯ, 602 ರನ್

9 ಸಾವಿರ ರನ್‌

ವಿರಾಟ್ ಕೊಹ್ಲಿ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಹಲವು ದಾಖಲೆಗಳನ್ನು ಬರೆದರು. ಇವರು ಆವೀಶ್ ಖಾನ್‌ ಎಸೆದ ಐದನೇ ಓವರ್‌ನ ಮೊದಲ ಎಸೆತವನ್ನು ಮಿಡ್‌ ವಿಕೆಟ್‌ ಬೌಂಡರಿಗೆ ತಳ್ಳಿ ದೊಡ್ಡ ದಾಖಲೆಯನ್ನು ನಿರ್ಮಿಸಿದರು. ವಿರಾಟ್‌ ಆರ್‌ಸಿಬಿ ಪರ (ಐಪಿಎಲ್‌ + ಚಾಂಪಿಯನ್ಸ್‌ ಲೀಗ್‌) 9 ಸಾವಿರ ರನ್‌ಗಳ ಗಡಿ ದಾಟಿದರು. ಒಂದೇ ತಂಡದ ಪರ ಇಂತಹ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ವಿರಾಟ್ ಅವರದ್ದಾಯಿತು.

63 ಅರ್ಧಶತಕ

ವಿರಾಟ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದರು. ಈ ಮೂಲಕ ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ಡೇವಿಡ್ ವಾರ್ನರ್ ಅವರ ದಾಖಲೆಯನ್ನು ಮೀರಿ ನಿಂತರು. ಡೇವಿಡ್ ವಾರ್ನರ್ ಐಪಿಎಲ್‌ 62 ಅರ್ಧಶತಕ ಬಾರಿಸಿದ್ದರು. ವಿರಾಟ್‌ ಈಗ 63 ಅರ್ಧಶತಕ ಸಿಡಿಸಿದರು.

Story first published: Wednesday, May 28, 2025, 13:15 [IST]
Other articles published on May 28, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+