ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ನಲ್ಲಿ ಆರಂಭಿಕನಾಗಿ ವಿರಾಟ್ ಕೊಹ್ಲಿ ಕಣಕ್ಕಿಳಿಯಬಹುದು: ಗವಾಸ್ಕರ್

Virat Kohli might open with Rohit and KL Rahul could bat at fourth: Sunil Gavaskar

ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ತಂಡದ ಘೋಷಣೆಯಾದ ಬಳಿಕ ಈ ಹಿನ್ನೆಲೆಯಲ್ಲಿ ಸಾಕಷ್ಟು ಚರ್ಚೆಗಳು ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಭಾರತೀಯ ಕ್ರಿಕೆಟ್ ತಮಡದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಗವಾಸ್ಕರ್ ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಸ್ವತಃ ನಾಯಕ ವಿರಾಟ್ ಕೊಹ್ಲಿ ಕಣಕ್ಕಿಳಿಯಬಹುದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾದ್ಯತೆಯಿದೆ ಎಂದಿದ್ದಾರೆ ಸುನಿಲ್ ಗವಾಸ್ಕರ್.

"ನಾವು ಈ ವರ್ಷಾರಂಭದಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ವಿರಾಟ್ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವುದನ್ನು ಗಮನಿಸಿದ್ದೇವೆ. ಹೀಗಾಗಿ ವಿರಾಟ್ ಕೊಹ್ಲಿ ಆರಂಭೀಕನಾಗಿ ಕಣಕ್ಕಿಳಿಯುವ ಸಾಧ್ಯತೆಯೂ ಇದೆ. ಇಂತಾ ಸಂದರ್ಭದಲ್ಲಿ ಕೆಎಲ್ ರಾಹುಲ್ ನಾಲ್ಕು ಅಥವಾ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯುವ ಸಾಧ್ಯತೆಯಿದೆ ಎಂದಿದ್ದಾರೆ ಸುನಿಲ್ ಗವಾಸ್ಕರ್.

ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಟಿ20 ಸರಣಿಯ ಐದನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿದು 52 ಎಸೆತಗಳಲ್ಲಿ ಅಜೇಯ 80 ರನ್‌ಗಳನ್ನು ಬಾರಿಸಿ ಮಿಂಚಿದ್ದರು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಟಿ20 ಮಾದರಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಯುವ ಇಂಗಿತವನ್ನು ಕೂಡ ವ್ಯಕ್ತಪಡಿಸಿದ್ದರು. ಅದಾದ ಬಳಿಕ ನಡೆದ ಐಪಿಎಲ್‌ನ ಮೊದಲಾರ್ಧದ ಪಂದ್ಯಗಳಲ್ಲಿಯೂ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದಿದ್ದಾರೆ.

ಟಿ20 ವಿಶ್ವಕಪ್‌: ಟೀಮ್ ಇಂಡಿಯಾದಲ್ಲಿಲ್ಲ ಈ ಪ್ರಮುಖ ಆಟಗಾರರಿಗೆ ಸ್ಥಾನಟಿ20 ವಿಶ್ವಕಪ್‌: ಟೀಮ್ ಇಂಡಿಯಾದಲ್ಲಿಲ್ಲ ಈ ಪ್ರಮುಖ ಆಟಗಾರರಿಗೆ ಸ್ಥಾನ

ಇನ್ನು ಇದೇ ಸಂದರ್ಭದಲ್ಲಿ ಟೀಮ್ ಇಂಡಿಯಾದ ಟಿ20 ತಂಡ ಬಲಿಷ್ಠ ಹಾಗೂ ಸಾಹಸಮಯ ಪ್ರವೃತ್ತಿಯನ್ನು ಹೊಂದಿದ ತಂಡವಾಗಿದೆ ಎಂದಿದ್ದಾರೆ. ರಾಹುಲ್ ಹೊರತುಪಡಿಸಿ ಮಧ್ಯಮ ಕ್ರಮಾಂಕಕ್ಕೆ ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಹಾಗೂ ರಿಷಭ್ ಪಂತ್ ಅವರನ್ನು ಸುನಿಲ್ ಗವಾಸ್ಕರ್ ಆಯ್ಕೆ ಮಾಡಿಕೊಂಡಿದ್ದಾರೆ.

"ಸೂರ್ಯಕುಮಾರ್ ಯಾದವ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳದು ಉತ್ತಮ ಪ್ರದರ್ಶನ ನೀಡಿದರೆ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಆಡುವುದನ್ನು ನಾನು ಬಯಸುತ್ತೇನೆ. ಈ ಮೂಲಕ ಇನ್ನಿಂಗ್ಸ್‌ನ ಕೊನೆಯ ಹಂತದಲ್ಲಿ ಲಾಭವನ್ನು ಪಡೆದುಕೊಳ್ಳಬಹುದು" ಎಂದಿದ್ದಾರೆ ಸುನಿಲ್ ಗವಾಸ್ಕರ್.

ಇನ್ನು ಇದೇ ಸಂದರ್ಭದಲ್ಲಿ ತಂಡದ ಬೌಲಿಂಗ್ ವಿಭಾಗದಲ್ಲಿ ಕೇವಲ ಮೂವರು ವೇಗಿಗಳನ್ನು ಮಾತ್ರವೇ ಹೊಂದಿರುವ ಬಗ್ಗೆ ಗವಾಸ್ಕರ್ ಅಸಮಾಧಾನ ಹೊರಹಾಕಿದರು. ದೊಡ್ಡ ಟೂರ್ನಿಯಲ್ಲಿ ಕೇವಲ ಮೂವರು ವೇಗಿಗಳೊಂದಿಗೆ ಆಡುತ್ತಿರುವುದು ಸರಿಯಲ್ಲ. ಗಾಯದಂತಾ ಸಮಸ್ಯೆಗಳು ಉಂಟಾದಾಗ ತಂಡಕ್ಕೆ ಸೂಕ್ತ ಆಯ್ಕೆಗಳು ಇರಬೇಕಾಗುತ್ತದೆ ಎಂದಿದ್ದಾರೆ ಗವಾಸ್ಕರ್.

ಲಾಕ್ ಡೌನ್ ಆದಮೇಲೆ ಮತ್ತೆ ಡ್ರಗ್ ಪಾರ್ಟಿಗಳು ನಡೀತಿದೆ! | Oneindia Kannada

ಟಿ 20 ವಿಶ್ವಕಪ್‌ಗೆ ಆಯ್ಕೆಯಾದ ಭಾರತ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರಿತ್ ಬೂಮ್ರ, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ,
ಮೀಸಲು ಆಟಗಾರರು: ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಶ್ರೇಯಸ್ ಅಯ್ಯರ್

Story first published: Thursday, September 9, 2021, 14:09 [IST]
Other articles published on Sep 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X